ಜೋಳದ ಹೊವೊಂದರಲ್ಲಿ ಅಡಗಿದ್ದ ಹೆಬ್ಬಾವನ್ನು ರಕ್ಷಿಸಿ ಮರಳಿ ಕಾಡಿಗೆ ಬಿಟ್ಟಿರುವ ಘಟನೆ ಶಿವಮೊಗ್ಗದ ಕುಂಚೇನಹಳ್ಳಿಯಲ್ಲಿ ನಡೆದಿದೆ.
ಮುದ್ದೆ ನಾಯ್ಕರ್ ಎಂಬುವವರ ಜೋಳದ ಹೊಲದಲ್ಲಿ ಮಧ್ಯಾಹ್ನ ಸುಮಾರು 12ರ ಹೊತ್ತಿಗೆ ಹೆಬ್ಬಾವು ಕಾಣಿಸಿಕೊಂಡಿದ್ದು ತಕ್ಷಣವೇ ಉರಗ ತಜ್ಞ ಸ್ನೇಕ್ ಕಿರಣ್‌ಗೆ ಜಮೀನಿನ ಮಾಲೀಕರು ಸುದ್ದಿ ಮುಟ್ಟಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಕಿರಣ್ ಏಳುವರೆ ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಿ ಮರಳಿ ಕಾಡಿಗೆ ಬಿಟ್ಟಿದ್ದಾರೆ.
