• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗುಲಾಮಗಿರಿ ಮನಸ್ಥಿತಿ ಕಿತ್ತೊಗೆಯಲು ಗುಣಮಟ್ಟದ ಶಿಕ್ಷಣ- ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
December 7, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಚಾಮರಾಜನಗರ: ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ, ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ADVERTISEMENT

ಅವರು ಇಂದು ಕೊಳ್ಳೇಗಾಲ ಸಂಘ ಸಂಸ್ಥೆಗಳು, ಭಕ್ತವೃಂದ ಹಾಗೂ ಜೆ.ಎಸ್.ಎಸ್ ಸಂಸ್ಥೆಯ ವತಿಯಿಂದ ಆಯೋಜಿಸಿದ್ದ ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ಜಗದ್ಗುರು ಡಾ: ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ 109 ನೇ ಜಯಂತ್ಯೋತ್ಸವದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

ಸಮಾಜದಲ್ಲಿ ಬದಲಾವಣೆ ತರಲು, ಮುಖ್ಯವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ. ಶಿಕ್ಷಣ ಇಲ್ಲದೇ ಹೋದರೆ ಸ್ವಾಭಿಮಾನಿಗಳಾಗಿ ಇರಲು ಸಾಧ್ಯವಾಗುವುದಿಲ್ಲ. ಗುಲಾಮಗಿರಿ ಮನಸ್ಥಿತಿಯನ್ನು ಕಿತ್ತೊಗೆಯಬೇಕು.ಇದು ವೈಜ್ಞಾನಿಕ ಶಿಕ್ಷಣದಿಂದ ಸಾಧ್ಯ ಎಂದರು.‌

ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಒಬ್ಬ ಶ್ರೇಷ್ಠ ಸಂತರು.ಇಡೀ ಸಮಾಜಕ್ಕೆ ಮಾನವೀಯತೆಯ ಸಂದೇಶವನ್ನು ಸಾರಿದ್ದರು. ಆ ಕಾಲದಲ್ಲಿಯೇ ರಾಜೇಂದ್ರ ಮಹಾಸ್ವಾಮಿಗಳು ಗ್ರಾಮೀಣ ಮಕ್ಕಳಿಗೆ ಶಿಕ್ಷಣ, ವಸತಿನಿಲಯ ನಿರ್ಮಿಸಿದ್ದರಿಂದ ಇಂದು ಸುತ್ತೂರು ಮಹಾಸಂಸ್ಥಾನ ಹೆಮ್ಮರವಾಗಿ ಬೆಳೆಯಲು ಸಾಧ್ಯವಾಗಿದೆ. Lಅವರ ಕಾಲದಲ್ಲಿ ಸಣ್ಣ ಝರಿಯಾಗಿದ್ದ ಸಂಸ್ಥೆ ಇಂದು ದೊಡ್ಡ ಸಮುದ್ರವಾಗಿದೆ. ಬಸವಣ್ಣನವರ ಸಂದೇಶವನ್ನು ರಾಜೇಂದ್ರ ಮಹಾಸ್ವಾಮಿಗಳು ಬಹಳ ವ್ಯಾಪಕವಾಗಿ ದೇಶ, ವಿದೇಶಗಳಲ್ಲಿಯೂ ಪಸರಿಸಿದ್ದಾರೆ ಎಂದರು.

ಮಾನವ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕು:

ಮಾನವ ಸಮಾಜದಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು.ಜಾತಿ, ಧರ್ಮ, ಭಾಷೆಯ ಆಧಾರದ ಮೇಲೆ ಧ್ವೇಷಿಸುವುದನ್ನು ಸಂಪೂರ್ಣವಾಗಿ ಬಿಡಬೇಕು.ಎಲ್ಲರೂ ಕೂಡ ಮಾನವ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡಬೇಕೆಂದು ಸಂತರು, ಸಾಧುಗಳು, ಸೂಫಿಗಳು, ಸಮಾಜ ಸುಧಾರಕರು ಈ ದೇಶದಲ್ಲಿ ಹೇಳಿದ್ದಾರೆ. ಸುತ್ತೂರು ಗ್ರಾಮದಿಂದ ಬಂದ ಸ್ವಾಮಿಗಳು ಹಳ್ಳಿ ಜನರ ಬದುಕನ್ನು ಅರ್ಥ ಮಾಡಿಕೊಂಡಿದ್ದರು. ಸಮಾಜದಲ್ಲಿ ಅನೇಕ ನೂನ್ಯತೆ, ಅಸಮಾನತೆಗಳನ್ನು ಕಾಣುತ್ತೇವೆ. ಅಸಮಾನತೆ ನಿರ್ಮಾಣವಾಗಿದ್ದರೆ ಜಾತಿ ವ್ಯವಸ್ಥೆಯ ಕಾರಣದಿಂದ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಬಹುಸಂಖ್ಯಾತ ಜನ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದರು ಎಂದರು.

ಸಂವಿಧಾನದಿಂದ ಎಲ್ಲರಿಗೂ ಸಮಾನ ಅವಕಾಶಗಳು:

ವ್ಯಕ್ತಿಯ ಯೋಗ್ಯತೆಯನ್ನು ಅವನ ಜಾತಿಯ ಆಧಾರದ ಮೇಲೆ ಅಳೆಯಲಾಗುತ್ತದೆ. ನೈಜ ಪ್ರತಿಭೆಯನ್ನು ಸಾಧನೆಯಿಂದ ಅಳೆಯಲಾಗುತ್ತದೆ. ಇದನ್ನು ರಾಜೇಂದ್ರ ಸ್ವಾಮಿಗಳು ಕಣ್ಣಾರೆ ಕಂಡಿದ್ದ ರಾಜೇಂದ್ರ ಸ್ವಾಮಿಗಳು ಶಿಕ್ಷಣ ಬಹಳ ಮುಖ್ಯ ಎಂದು ಅರ್ಥ ಮಾಡಿಕೊಂಡಿದ್ದರು.ಸುತ್ತೂರಿನಿಂದ ಮೈಸೂರಿಗೆ ಬಂದ ನಂತರ ವಸತಿ ನಿಲಯಗಳನ್ನು ಶಿಕ್ಷಣ ಸಂಸ್ಥೆಗಳನ್ನು ಪ್ರಾರಂಭ ಮಾಡಿದರು. ವಸತಿ ನಿಲಯಗಳಿಲ್ಲದೇ ಹೋದರೇ ಬಹಳ ಜನರಿಗೆ ಓದುವ ಅವಕಾಶ ತಪ್ಪುತ್ತಿತ್ತು.ಸಂವಿಧಾನ ಬಂದ ನಂತರ ಎಲ್ಲರಿಗೂ ಸಮಾನ ಅವಕಾಶಗಳನ್ನು ಪಡೆಯುವಂತಾಗಿದೆ.

ಯಾರೂ ಯಾರಿಂದಲೂ ಶೋಷಣೆಗೆ ಒಳಗಾಗಬಾರದು, ಎಲ್ಲರಿಗೂ ಸಮಾನ ಶಿಕ್ಷಣ, ಬದುಕುವ ಅವಕಾಶಗಳನ್ನು , ಸಂವಿಧಾನದ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ದೊರಕಿಸಿ ಕೊಟ್ಟಿದ್ದಾರೆ. ಅದಕ್ಕಾಗಿಯೇ ನಮ್ಮ ಸರ್ಕಾರ ಸಂವಿಧಾನದ ಪೀಠಿಕೆಯನ್ನು ಎಲ್ಲಾ ಶಾಲಾ ಕಾಲೇಜುಗಳಲ್ಲಿಯೂ ಓದಿಸಲಾಗುತ್ತಿದೆ.ಸಂವಿಧಾನದ ಆಶಯಗಳು ಹಾಗೂ ಧ್ಯೇಯೋದ್ದೇಶಗಳು ಎಲ್ಲರಿಗೂ ಅರ್ಥವಾಗಬೇಕು.ಸಂವಿಧಾನ ಗೊತ್ತಿಲ್ಲದೇ ಹೋದರೆ ನಮಗಿರುವ ಹಕ್ಕುಗಳು ಯಾವುವು, ನಮ್ಮ ಕರ್ತವ್ಯಗಳೇನು ಎಂದು ತಿಳಿಯುವುದಿಲ್ಲ. ನಮಗೆ ಹಕ್ಕುಗಳು ತಿಳಿದರೆ ಅವುಗಳನ್ನು ಪಡೆಯುವ ಪ್ರಯತ್ನ ಮಾಡಬಹುದು.ಎಲ್ಲರಿಗೂ ಒಂದೇ ರೀತಿಯ ಹಕ್ಕುಗಳಿವೆ. ದಲಿತರು, ಹಿಂದುಳಿದವರು, ಮುಂದುವರೆದವರು ಬಹುಸಂಖ್ಯಾತರಿಗೆ ಒಂದೇ ರೀತಿಯ ಹಕ್ಕುಗಳಿವೆ ಎಂದರು.

ಮನುಷ್ಯರಾಗಿ, ಮಾನವರಾಗಿ ಬದುಕುವ ಪ್ರಯತ್ನ ಮಾಡಬೇಕು:ಧರ್ಮವನ್ನು ನಾವು ಸರಿಯಾಗಿ ಅರ್ಥ ಮಡಿಕೊಳ್ಳಬೇಕು. ‘ದಯೆಯೇ ಧರ್ಮದ ಮೂಲವಯ್ಯ, ದಯೆಯಿಲ್ಲದ ಧರ್ಮ ಯಾವುದಯ್ಯ’ ಎಂದು ಬಸವಣ್ಣ ಅರ್ಥವಾಗುವ ರೀತಿಯಲ್ಲಿ ಹೇಳಿದ್ದಾರೆ. ದಯೆ ಪ್ರತಿಯೊಬ್ಬರಲ್ಲಿಯೂ ಇರಬೇಕು. ಅದಕ್ಕಾಗಿಯೇ 12 ನೇ ಶತಮಾನದಲ್ಲಿಯೇ ಸಮಸಮಾಜಕ್ಕಾಗಿ ಕ್ರಾಂತಿ ಮಾಡಿದರು.ಕಂದಾಚಾರ, ಮೌಢ್ಯಗಳ ವಿರುದ್ಧ ಹೋರಾಟ ಮಾಡಿದವರು, ಜೊತೆಗೆ ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು.

ಇದನ್ನು ಅರ್ಥ ಮಡಿಕೊಳ್ಳಬೇಕು. ಈಗಲೂ ಅನೇಕರು ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಡುತ್ತಾರೆ. ಸ್ವರ್ಗ ನರಕದ ಕಲ್ಪನೆಯನ್ನು ನಿರಾಕರಿಸಿದ್ದ ಬಸವಣ್ಣ ‘ಅಯ್ಯಾ ಎಂದರೆ ಸ್ವರ್ಗ, ಎಲವೋ ಎಂದರೆ ನರಕ’ ಎಂದು ಹೇಳಿದ್ದರು. ಇದನ್ನು ನಾವು ಪಾಲನೆ ಮಾಡಬೇಕು. ನಾವೆಲ್ಲರೂ ಮನುಷ್ಯರಾಗಿ, ಮಾನವರಾಗಿ ಬದುಕುವ ಪ್ರಯತ್ನ ಮಾಡಬೇಕು. ಧರ್ಮ ಹಾಗೂ ಶಿಕ್ಷಣದ ಕೆಲಸವನ್ನು ಸುತ್ತೂರು ಸಂಸ್ಥೆಗಳು ಮಾಡುತ್ತಿವೆ.ಅದಕ್ಕೆ ಅಡಿಪಾಯವನ್ನು ಹಾಕಿದವರು ರಾಜೇಂದ್ರ ಮಹಾಸ್ವಾಮಿಗಳು. ಅವರು ಬಯಸಿದಂತಹ ಸಮಾಜ ನಿರ್ಮಾಣ ಮಾಡುವುದು ನಮ್ಮ ಕರ್ತವ್ಯ ಎಂದರು.

ಜಗದ್ಗುರು ಡಾ: ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿ, ಸಾಲೂರು ಬೃಹನ್ಮಠದ ಶ್ರೀ ಮಲೆಮಹದೇಶ್ವರ ಬೆಟ್ಟದ ಡಾ: ಶ್ರೀ ಶಾಂತಿ ಮಲ್ಲಿಕಾರ್ಜುನ ಸ್ವಾಮಿಗಳು, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಡಾ: ಹೆಚ್.ಸಿ.ಮಹದೇವಪ್ಪ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್, ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷ ಮರಿಸ್ವಾಮಿ , ನಗರಸಭೆ ಅಧ್ಯಕ್ಷೆ ರೇಖಾ ರಮೇಶ್ , ಉಪಾಧ್ಯಕ್ಷರಾದ ಎ.ಪಿ.ಶಂಕರ್ ಮೊದಲಾದವರು ಉಪಸ್ಥಿತರಿದ್ದರು.

Tags: 109th Jubilee of Dr. Sri Shivratri Desikendra Swami..Chamarajanagar.Dr. Sri Shanti Mallikarjuna Swami of Saluru Brihanmath Sri Malemahadeshwara HillGanesh PrasadJagadguru Dr. Sri Shivratri Desikendra SwamiKADA President MariswamyM.R. Manjunathmindset of slavery.Municipal Council President Rekha RameshPrimary and Secondary Education Minister Madhu BangarappaSocial Welfare Minister Dr. HC MahadevappaVice President A.P. Shankar.
Previous Post

‘ಒಳ್ಳೆಯ ಮನುಷ್ಯ ಸಿಎಂ ಆಗಬೇಕು ಎಂದರೆ ನಾನೇ ಸಿಎಂ ಆಗ್ತೀನಿ’:ಯತ್ನಾಳ್

Next Post

ಐವಿ ದ್ರಾವಣಕ್ಕಾಗಿ ಹೊಸ ಟೆಂಡರ್ – ಆಸ್ಪತ್ರೆಗಳಲ್ಲಿ ಗ್ಲುಕೋಸ್ ಕೋರತೆಯಿಲ್ಲ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Related Posts

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?
Top Story

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

by ಪ್ರತಿಧ್ವನಿ
May 1, 2026
0

ಬೆಂಗಳೂರು : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಪ್ರಸಿದ್ಧಿ ಪಡೆದಿರುವ ನಟಿಗೆ ನಿರ್ಮಾಪಕರೊಬ್ಬರು ಮೋಸ ಮಾಡಿರುವ ಆರೋಪ ಕೇಳಿ ಬಂದಿದೆ. ಧಾರವಾಹಿಯಲ್ಲಿ ನಟಿಸಿದ ನಟಿಗೆ ಸಂಭಾವನೆ ನೀಡದ ನಿರ್ಮಾಪಕರಿಂದ ವಂಚನೆ...

Read moreDetails
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

“ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ, ಆದಾಯ ಪಾತಳಕ್ಕೆ ಕುಸಿದಿದೆ, ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?”

May 1, 2026
Next Post

ಐವಿ ದ್ರಾವಣಕ್ಕಾಗಿ ಹೊಸ ಟೆಂಡರ್ - ಆಸ್ಪತ್ರೆಗಳಲ್ಲಿ ಗ್ಲುಕೋಸ್ ಕೋರತೆಯಿಲ್ಲ - ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada