• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಒಕ್ಕಲಿಗ ಸಮುದಾಯವನ್ನ ಭಾಗ ಮಾಡಿ ಒಡೆದಿದ್ದಾರೆ : ಆರ್‌.ಅಶೋಕ್‌

ಪ್ರತಿಧ್ವನಿ by ಪ್ರತಿಧ್ವನಿ
December 23, 2022
in ಕರ್ನಾಟಕ, ರಾಜಕೀಯ
0
ಒಕ್ಕಲಿಗ ಸಮುದಾಯವನ್ನ ಭಾಗ ಮಾಡಿ ಒಡೆದಿದ್ದಾರೆ : ಆರ್‌.ಅಶೋಕ್‌
Share on WhatsAppShare on FacebookShare on Telegram

ರಾಜ್ಯ ರಾಜಕಾರಣದಲ್ಲಿ ಮೀಸಲಾತಿ ರಾಜಕೀಯ ಹೆಚ್ಚು ಸದ್ದು ಮಾಡುತ್ತಿದ್ದು ಇದೀಗ ಒಕ್ಕಲಿಗ ಸಮುದಾಯ ತಮ್ಮಗೆ ಈಗಿರುವ ಶೇ.4ರಷ್ಟು ಮೀಸಲಾತಿಯನ್ನು ಶೇ.12ಕ್ಕೆ ಏರಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಶಾಸಕರು-ಸಚಿವರು ಮನವಿ ಪತ್ರ ಸಲ್ಲಿಸಿದ್ದಾರೆ.

ADVERTISEMENT

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್‌.ಅಶೋಕ್‌ ಒಕ್ಕಲಿಗ ಸಮುದಾಯದ ನ್ಯಾಯಯುತ ಬೇಡಿಕೆ ಇದಾಗಿದೆ ಜನಸಂಖ್ಯೆ ಆಧಾರದಲ್ಲಿ ನಾವೂ ರಾಜ್ಯದಲ್ಲಿ 16% ಇದ್ದೇವೆ ನಮ್ಮಲ್ಲೂ ತುಂಬಾ ಬಡವರಿದ್ದಾರೆ ಜಮೀನುಗಳನ್ನು ಕಳೆದುಕೊಂಡವರಿದ್ದಾರೆ. ನಮ್ಮ ಸಮುದಾಯದ ಮೀಸಲಾತಿಯನ್ನ 4 ರಿಂದ 16 ಪರ್ಸೆಂಟ್ ಗೆ ಹೆಚ್ಚಿಸಬೇಕು ಎಂಬುದು ನಮ್ಮ ನ್ಯಾಯಯುತವಾದ ಬೇಡಿಕೆ ಎಂದು ಹೇಳಿದ್ದಾರೆ.

ಒಕ್ಕಲಿಗ ಸಮುದಾಯವನ್ನ ಭಾಗ ಮಾಡಿ ಒಡೆದಿದ್ದಾರೆ ಹೀಗಾಗಿ ಭಂಟರು, ರೆಡ್ಡಿ, ಕುಂಚಿಟಗರು ಸೇರಿದಂತೆ ಕೇಂದ್ರ ಓಬಿಸಿ ರಿಸರ್ವೇಶನ್ ನಲ್ಲಿ ಸೇರಿಸಬೇಕು ಒಕ್ಕಲಿಗ ಸಮುದಾಯಕ್ಕೆ ಅಭದ್ರತೆ ಕಾಡಬಾರದು. ಇಡೀ ಒಕ್ಕಲಿಗ ಸಮುದಾಯವನ್ನ ಒಟ್ಟಿಗೆ ಸೇರಿಸಬೇಕು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದೆ, ಹೀಗಾಗಿ ನಮಗೆ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಯನ್ನ ಗೌರವಿಸಿ ಪರಿಹಾರ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡ್ತೀನಿ ಎನ್ನುವುದಾಗಿ ಸರಳ ಮುಖ್ಯಮಂತ್ರಿ ಬೊಮ್ಮಾಯಿಯವರು ಹೇಳಿದ್ದಾರೆ. ನಾವೂ ಗಲಾಟೆ, ಧಮ್ಕಿ ಮಾಡಲ್ಲ. ಶಾಂತಿಯುತವಾಗಿ ಎಲ್ಲರೂ ಸೇರಿ ಮನವಿ ಮಾಡುತ್ತಿದ್ದೇವೆ. ಸಮುದಾಯದ ಸ್ವಾಮೀಜಿಗಳನ್ನು ಜನವರಿ ೪ ರಂದು ಭೇಟಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ನಾವೆಲ್ಲರೂ ಒಟ್ಟಿಗೆ ಹೆಜ್ಜೆ ಹಾಕಿ, ನಮ್ಮ ಸಮುದಾಯಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ನಾವೂ ಯಾವುದೇ ಬೆದರಿಕೆ ಹಾಕಲ್ಲ ಒಕ್ಕಲಿಗ ಸಮಾಜದ ಜೊತೆ ಬೊಮ್ಮಾಯಿ, ಯಡಿಯೂರಪ್ಪ ಸದಾ ಇದ್ದಾರೆ. ವಿಧಾನ ಸೌಧದ ಮುಂದೆಯೂ ಕೆಂಪೇಗೌಡರ ಪ್ರತಿಮೆ ಮಾಡಲು ಹಣ ಬಿಡುಗಡೆ ಮಾಡಿದ್ದಾರೆ ಒಕ್ಕಲಿಗರ ನಿಗಮ ಮಾಡಿ 120 ಕೋಟಿ ಹಣವನ್ನು ಕೊಟ್ಟಿದ್ದಾರೆ ಹೀಗಾಗಿ ಮುಖ್ಯಮಂತ್ರಿಗಳ ಮಾತಿಗೆ ಮನ್ನಣೆ ಕೊಡ್ತೀವಿ ಎಂದು ಹೇಳಿದ್ದಾರೆ.

ಜೆಡಿಎಸ್, ಕಾಂಗ್ರೆಸ್ ಶಾಸಕರು ಅಧಿಕಾರ ಇದ್ದಾಗ ಏನೂ ಮಾಡಿಲ್ಲ ನಾವೂ ಈಗ ಏರ್ ಪೋರ್ಟ್ ನಲ್ಲಿ ಕೆಂಪೇಗೌಡರ ಪ್ರತಿಮೆ ಮಾಡಿದ್ದೀವಿ ಒಕ್ಕಲಿಗರಿಗೆ ನ್ಯಾಯ ಒದಗಿಸಲು ನಾವೆಲ್ಲ ಸಚಿವರು, ಶಾಸಕರು ಒಂದಾಗಿ ಕೆಲಸ ಮಾಡುತ್ತೇವೆ ಎಂದು ಪ್ರತಿಪಾದಿಸಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಆನ್‌ಲೈನ್‌ ಮೂಲಕ ಭೂ ಪರಿವರ್ತನೆ ಪ್ರಕ್ರಿಯೆ

Next Post

ಭಾವೈಕ್ಯತೆಯ ಸಂದೇಶ ಸಾರಿದ ಕೊಪ್ಪಳದ ಶ್ರೀದುರ್ಗಾದೇವಿ ಜಾತ್ರೆ

Related Posts

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ
Top Story

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

by ಪ್ರತಿಧ್ವನಿ
May 24, 2026
0

ಉತ್ತರ ಕನ್ನಡ :  ಕಪ್ಪೆ ಚಿಪ್ಪು (Shells) ಸಂಗ್ರಹಿಸಲು ಹೋದ ಒಂದೇ ಕುಟುಂಬದ 8 ಜನರು ಜಲಸಮಾಧಿಯಾಗಿರುವ ಭೀಕರ ಅವಘಡ ಜಿಲ್ಲೆಯಲ್ಲಿ ಸಂಭವಿಸಿದೆ. ಭಟ್ಕಳದ ವೆಂಕಟಾಪುರ ನದಿಗೆ...

Read moreDetails
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
Next Post
ಭಾವೈಕ್ಯತೆಯ ಸಂದೇಶ ಸಾರಿದ ಕೊಪ್ಪಳದ ಶ್ರೀದುರ್ಗಾದೇವಿ ಜಾತ್ರೆ

ಭಾವೈಕ್ಯತೆಯ ಸಂದೇಶ ಸಾರಿದ ಕೊಪ್ಪಳದ ಶ್ರೀದುರ್ಗಾದೇವಿ ಜಾತ್ರೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada