ವಿವಾದಿತ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಗಳಿಗೆ ಸಂಬಂಧಿಸಿದಂತೆ ಮಂಗಳವಾರ ಸಂಜೆ ಅಂತಿಮ ನಿರ್ಧಾರ ಪ್ರಕಟಿಸಲಾಗುವುದು ಎಂದು ಕಂದಾಯ ಸಚಿವ ಆರ. ಅಶೋಕ್ ತಿಳಿಸಿದ್ದಾರೆ.
ಈದ್ಗಾ ಮೈದಾನದಲ್ಲಿ ಈ ಭಾರೀ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದೆ ಯಾವ ಸಮುದಾಯದವರು ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ ಅದರಂತೆ ಈ ವಿಚಾರದಲ್ಿ ಕೂಡ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಒಟ್ಟು ಐದು ಅರ್ಜಿಗಳು ಸಲ್ಲಿಕೆಯಾಗಿದ್ದವು ಅದರಲ್ಲಿ ಮೂರು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಇನ್ನೆರಡಲ್ಲಿ ಒಂದನ್ನು ಅಂತಿಮ ಮಾಡಿ ಸಂಜೆ ನಿರ್ಧಾರ ಪ್ರಕಟಿಸಲಾಗುವುದು ಎಂದಿದ್ದಾರೆ.
ನಾವು ಸ್ಥಳೀಯ ನಾಯಕರೊಂದಿಗೆ ಚರ್ಚಿಸಿದ್ದೇವೆ ಪರ-ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿದೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಸಿಬೇಕೋ ಬೇಡವೋ ಎಂಬುದರ ಬಗ್ಗೆ ಸಂಜೆ ಸ್ಪಷ್ಟ ಚಿತ್ರಣ ನೀಡಲಾಗುವುದು ಎಂಉ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.