• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

1998ರ ವಿಧಾನಸಭೆ ಉಪ ಚುನಾವಣೆಯಲ್ಲಿ ಆರ್.ಅಶೋಕ್‌ರನ್ನು ಕಳ್ಳವೋಟಿನಿಂದ ಗೆಲ್ಲಿಸಿದ್ದರು : HDK

Any Mind by Any Mind
May 21, 2022
in ಕರ್ನಾಟಕ
0
1998ರ ವಿಧಾನಸಭೆ ಉಪ ಚುನಾವಣೆಯಲ್ಲಿ ಆರ್.ಅಶೋಕ್‌ರನ್ನು ಕಳ್ಳವೋಟಿನಿಂದ ಗೆಲ್ಲಿಸಿದ್ದರು : HDK
Share on WhatsAppShare on FacebookShare on Telegram

1998ರ ವಿಧಾನಸಭೆ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಹಾಲಿ ಕಂದಾಯ ಸಚಿವ ಆರ್.ಅಶೋಕ್ ಸ್ಪರ್ಧಿಸಿದಾಗ ಯಲಹಂಕದಿಂದ ಬಂದಿದ್ದ 1,000 ಕಾರ್ಯಕರ್ತರು ತಲಾ 5ರಿಂದ 10 ಕಳ್ಳವೋಟು ಹಾಕಿ ಅವರನ್ನು ಗೆಲ್ಲಿಸಿದ್ದರು ಎಂದು ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ADVERTISEMENT

ಇದರೊಂದಿಗೆ ಬೇರೆ ಬೇರೆ ವಿಷಯಗಳ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು,  2006ರಲ್ಲಿ ಜೆಡಿಎಸ್ ದೆಸೆಯಿಂದ ಅಧಿಕಾರದ ರುಚಿ ಕಂಡ ಬಿಜೆಪಿಗೆ ಅಡ್ಡದಾರಿಯಲ್ಲಿ ಅಧಿಕಾರ ಹಿಡಿಯುವುದು ಚಾಳಿ ಆಗಿಬಿಟ್ಟಿದೆ. ಆ ನಂತರ ʼಆಪರೇಷನ್ ಕಮಲʼ ಎಂಬ ಅನೈತಿಕ ದಾರಿಯಲ್ಲಿ ಅಧಿಕಾರಕ್ಕೆ ಬಂದು ಪ್ರಜಾಪ್ರಭುತ್ವದ ಅಡಿಪಾಯವನ್ನೇ ಬಿಜೆಪಿ ಅಭದ್ರಗೊಳಿಸಿದೆ ಎಂದು ಹೇಳಿದ್ದಾರೆ.

ಬಿಜೆಪಿಯ ನಯವಂಚಕ & ಅನೈತಿಕ ರಾಜಕಾರಣದ ಮುಖವನ್ನು ಬೆಂಗಳೂರು ನಗರದ ದಾಸರಹಳ್ಳಿ ಕ್ಷೇತ್ರದ ಮಾಜಿ ಶಾಸಕ ಮುನಿರಾಜು ಎಂಬ ಮಹಾಶಯರೇ  ಬಹಿರಂಗಪಡಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರುವುದು ಅಡ್ಡದಾರಿಯಲ್ಲೇ ಎನ್ನುವುದು ಈಗ ರುಜುವಾತಾಗಿದೆ ಎಂದಿದ್ದಾರೆ.

1998ರ ವಿಧಾನಸಭೆ ಉಪ ಚುನಾವಣೆಯಲ್ಲಿ ಉತ್ತರಹಳ್ಳಿ ಕ್ಷೇತ್ರದಿಂದ ಹಾಲಿ ಕಂದಾಯ ಸಚಿವ ಆರ್.ಅಶೋಕ್ ಸ್ಪರ್ಧಿಸಿದಾಗ ಯಲಹಂಕದಿಂದ ಬಂದಿದ್ದ 1,000 ಕಾರ್ಯಕರ್ತರು ತಲಾ 5ರಿಂದ 10 ಕಳ್ಳವೋಟು ಹಾಕಿ ಅವರನ್ನು ಗೆಲ್ಲಿಸಿದ್ದರು!! ಎಂದು ಆರೋಪಿಸಿದ್ದಾರೆ.

ಅಂಥ ಕೃತ್ಯಗಳಿಂದಲೇ ಇಂದು ಬಿಜೆಪಿ 119 ಕ್ಷೇತ್ರ ಗೆದ್ದು ಬಹುಮತದಿಂದ ಅಧಿಕಾರಕ್ಕೆ ಬಂದಿದೆ ಎಂದು ಮಾನ್ಯ  ಮುನಿರಾಜು ತಮ್ಮ ಪಂಚೇಂದ್ರಿಯಗಳ ಸಾಕ್ಷಿಯಾಗಿ ತುಂಬಿದ ಕಾರ್ಯಕರ್ತರ ಸಭೆಯಲ್ಲೇ ಹೇಳಿದ್ದಾರೆ. ಅಶೋಕ್ ಅವರು ಸಾಮ್ರಾಟರಾಗಿ ಬೆಳೆಯಲು ಕಾರಣವಾದ ʼಬೆತ್ತಲೆ ಸತ್ಯʼದ ಹುತ್ತ ಬಿಚ್ಚಿಕೊಂಡಿದ್ದು, ಇದಕ್ಕೇನು ಹೇಳುತ್ತೀರಿ ಸಾಮ್ರಾಟರೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಮೇಲೆ ರಾಜ್ಯ ಗೆಲ್ಲುತ್ತಿರುವ ಬಿಜೆಪಿ ಗೆಲುವಿನ ಗುಟ್ಟು ಈಗ ರಟ್ಟು. ಅಡ್ಡದಾರಿಯ ಕೊಚ್ಚೆಯಲ್ಲಿ ಅರಳುವ ಕಮಲವನ್ನು ಮುಡಿದುಕೊಂಡು ಬೀಗುವವರ ʼಕಳ್ಳವೋಟಿನ ಕಥೆʼ ನಿಮ್ಮ ಮಾಜಿ ಶಾಸಕರೇ ಬಯಲು ಮಾಡಿದ್ದರೂ ಇನ್ನೂ ಕುರ್ಚಿಯಲ್ಲಿರಲು ಅದ್ಹೇಗೆ ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆ ಸಾಮ್ರಾಟರೇ? ಅಶೋಕನ ಹೆಸರಿಗಾದರೂ ಮರ್ಯಾದೆ ಬೇಡವೇ? 5/6

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 21, 2022

ರಾಜ್ಯದ ಮೇಲೆ ರಾಜ್ಯ ಗೆಲ್ಲುತ್ತಿರುವ ಬಿಜೆಪಿ ಗೆಲುವಿನ ಗುಟ್ಟು ಈಗ ರಟ್ಟು. ಅಡ್ಡದಾರಿಯ ಕೊಚ್ಚೆಯಲ್ಲಿ ಅರಳುವ ಕಮಲವನ್ನು ಮುಡಿದುಕೊಂಡು ಬೀಗುವವರ ʼಕಳ್ಳವೋಟಿನ ಕಥೆʼ ನಿಮ್ಮ ಮಾಜಿ ಶಾಸಕರೇ  ಬಯಲು ಮಾಡಿದ್ದರೂ ಇನ್ನೂ ಕುರ್ಚಿಯಲ್ಲಿರಲು ಅದ್ಹೇಗೆ ನಿಮ್ಮ ಆತ್ಮಸಾಕ್ಷಿ ಒಪ್ಪುತ್ತದೆ ಸಾಮ್ರಾಟರೇ? ಅಶೋಕನ ಹೆಸರಿಗಾದರೂ ಮರ್ಯಾದೆ ಬೇಡವೇ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಆಪರೇಷನ್ ಕಮಲಕ್ಕೆ ಜನ್ಮಕೊಟ್ಟು ಅದನ್ನು ನಿರ್ಲಜ್ಜವಾಗಿ ʼರಾಷ್ಟ್ರೀಕರಣʼ ಮಾಡಿದ ಬಿಜೆಪಿ, ಭಾರತಕ್ಕೆ ಅಂಟಿದ ಕಳಂಕ. ಪ್ರಜಾಪ್ರಭುತ್ವಕ್ಕೆ ಕಪ್ಪುಚುಕ್ಕೆ. ಸಂಸತ್ತಿನಲ್ಲಿ ಸಂವಿಧಾನಕ್ಕೆ ಶಿರಸಾಷ್ಟಾಂಗ ನಮಸ್ಕಾರ. ಕರ್ನಾಟಕದಲ್ಲಿ ಅದೇ ಸಂವಿಧಾನದ ಶಿರಚ್ಛೇಧ!! ಎಂದು ಟೀಕಿಸಿದ್ದಾರೆ.

Tags: BJPCongress PartyCovid 19HDKಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಡಾ. ರಾಜ್‌ ಕುಮಾರ್‌ ಬಯಸಿದ್ದರೆ ಅವಾಗ್ಲೆ ಸಿಎಂ ಆಗ್ತಿದ್ರು! : ಪ್ರೊ. ಕೃಷ್ಣೇಗೌಡ

Next Post

ಸುಧಾರಾಣಿ ನನ್ನ ಮೊದಲ ಹೀರೋಯಿನ್ ಎಂದ ಸಾಯಿ ಕುಮಾರ್

Related Posts

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”
Top Story

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

by ಪ್ರತಿಧ್ವನಿ
April 29, 2026
0

ಬೆಂಗಳೂರು :  ಅಹಿಂದ ಸಮುದಾಯ ಹಿಂದುಳಿದಿದ್ದಕ್ಕೆ ಅಹಿಂದ ಶುರುವಾಗಿದೆ. ಶೈಕ್ಷಣಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿಯೂ ಈ ಸಮುದಾಯಗಳು ಹಿಂದೆ ಬಿದ್ದಿವೆ. ಹೀಗಾಗಿ ಅವರಿಗೆ ಉತ್ತೇಜನ ಕೊಡಲು ಅಹಿಂದಕ್ಕೆ...

Read moreDetails
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
Next Post
ಸುಧಾರಾಣಿ ನನ್ನ ಮೊದಲ ಹೀರೋಯಿನ್ ಎಂದ ಸಾಯಿ ಕುಮಾರ್

ಸುಧಾರಾಣಿ ನನ್ನ ಮೊದಲ ಹೀರೋಯಿನ್ ಎಂದ ಸಾಯಿ ಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada