• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, October 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಹ್ಮಾನ್ ಹತ್ಯೆ ಪ್ರಕರಣ: ಜಾಮೀನಿನ ಖುಷಿಯಲ್ಲಿದ್ದವರಿಗೆ ಹೈಕೋರ್ಟ್ ಶಾಕ್!

ಪ್ರತಿಧ್ವನಿ by ಪ್ರತಿಧ್ವನಿ
October 17, 2026
in ಕರ್ನಾಟಕ
0
ರಹ್ಮಾನ್ ಹತ್ಯೆ ಪ್ರಕರಣ: ಜಾಮೀನಿನ ಖುಷಿಯಲ್ಲಿದ್ದವರಿಗೆ ಹೈಕೋರ್ಟ್ ಶಾಕ್!
Share on WhatsAppShare on FacebookShare on Telegram

ಬೆಂಗಳೂರು, ಅ.16: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳತ್ತಮಜಲು ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಭರತ್ ಕುಮ್ಡೇಲು ಸೇರಿದಂತೆ ಎಂಟು ಆರೋಪಿಗಳಿಗೆ ಮೈಸೂರು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಮಂಜೂರು ಮಾಡಿದ್ದ ಜಾಮೀನು ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ADVERTISEMENT

ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಪೀಠವು ಸರಕಾರದ ಪರವಾಗಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿ, ಕ್ರಿಮಿನಲ್ ಪಿಟಿಷನ್ ಸಂಖ್ಯೆ 15386/2026ರಲ್ಲಿ ಅಕ್ಟೋಬರ್ 15ರಂದು ಈ ಆದೇಶ ಹೊರಡಿಸಿದೆ. ಅಲ್ಲದೆ, ಒಂದರಿಂದ ಎಂಟನೇ ಆರೋಪಿಗಳಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಸೂಚಿಸಿದೆ.

ಭರತ್ ಕುಮ್ಡೇಲು, ಪ್ರದೀಪ್, ರಂಜಿತ್, ಶಿವಪ್ರಸಾದ್, ಅಭಿನ್ ರೈ, ಸಾಹಿತ್, ಸಚಿನ್ ಹಾಗೂ ತೇಜಾಕ್ಷ ಅವರು ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಬಿಎನ್‌ಎಸ್‌ಎಸ್ ಕಲಂ 483ರ ಅಡಿಯಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ಮೈಸೂರು ನ್ಯಾಯಾಲಯ ಇತ್ತೀಚೆಗೆ ಜಾಮೀನು ಮಂಜೂರು ಮಾಡಿತ್ತು. ಈ ಆದೇಶವನ್ನು ಸರಕಾರವು ಅಡ್ವೊಕೇಟ್ ಜನರಲ್ ಮೂಲಕ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಸರಕಾರಿ ಅಭಿಯೋಜಕರು ಮಂಡಿಸಿದ ವಾದ ಹಾಗೂ ಪ್ರಮಾಣಪತ್ರದೊಂದಿಗೆ ಸಲ್ಲಿಸಲಾದ ಅರ್ಜಿಯಲ್ಲಿನ ಅಂಶಗಳನ್ನು ಪರಿಗಣಿಸಿದ ಹೈಕೋರ್ಟ್, ಮುಂದಿನ ವಿಚಾರಣೆಯವರೆಗೆ ಜಾಮೀನು ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.

ಏನಿದು ಕೊಳತ್ತಮಜಲು ರಹ್ಮಾನ್ ಹತ್ಯೆ ಪ್ರಕರಣ?

ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳತ್ತಮಜಲು ಸಮೀಪದ ಇರಾಕೋಡಿಯಲ್ಲಿ 2025ರ ಮೇ 27ರಂದು ಅಬ್ದುಲ್ ರಹ್ಮಾನ್ ಅವರ ಹತ್ಯೆ ನಡೆದಿತ್ತು. ಅವರೊಂದಿಗೆ ಇದ್ದ ಕಲಂದರ್ ಶಾಫಿ ಎಂಬವರ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆದಿತ್ತು.

ಮರಳು ಇಳಿಸುತ್ತಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳು ದಾಳಿ ನಡೆಸಿದ್ದರು ಎನ್ನಲಾಗಿದೆ. ಅಬ್ದುಲ್ ರಹ್ಮಾನ್ ಸ್ಥಳದಲ್ಲೇ ಮೃತಪಟ್ಟರೆ, ಕಲಂದರ್ ಶಾಫಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮಂಗಳೂರಿನಲ್ಲಿ ನಡೆದಿದ್ದ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವಾಗಿ ಅಬ್ದುಲ್ ರಹ್ಮಾನ್ ಹತ್ಯೆ ನಡೆಸಲಾಗಿದೆ ಎಂಬ ಆಯಾಮದಲ್ಲಿಯೂ ಪ್ರಕರಣದ ತನಿಖೆ ನಡೆದಿತ್ತು.

ಪ್ರಕರಣದ ತನಿಖೆ ಮುಂದುವರಿದಂತೆ ಆರೋಪಿಗಳ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಅಳವಡಿಸಲಾಗಿತ್ತು. ಬಳಿಕ ಭರತ್ ಕುಮ್ಡೇಲು ಸೇರಿದಂತೆ ಆರು ಪ್ರಮುಖ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆಯಡಿಯೂ ಕ್ರಮ ಕೈಗೊಳ್ಳಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದಕ್ಕೂ ಮೊದಲು ಕೋಕಾ ಪ್ರಕರಣದಲ್ಲಿ ಎಂಟು ಆರೋಪಿಗಳಿಗೆ ಮೈಸೂರು ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದರೂ, ಇತರ ಕಾನೂನು ಕ್ರಮಗಳ ಹಿನ್ನೆಲೆಯಲ್ಲಿ ಅವರ ಬಿಡುಗಡೆಗೆ ಅಡ್ಡಿಯಾಗಿತ್ತು. ಇದೀಗ ರಾಜ್ಯ ಸರಕಾರದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಜಾಮೀನು ಆದೇಶಕ್ಕೆ ಮಧ್ಯಂತರ ತಡೆ ನೀಡಿರುವುದು ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ.

Tags: bailDakshina Kannadahighcourt
Previous Post

2027ರ ಹಬ್ಬಗಳ ಕ್ಯಾಲೆಂಡರ್‌ ನೋಡಿ ರಜೆ ಪ್ಲಾನ್ ಮಾಡ್ತಿದ್ದೀರಾ? ಈ ದಿನಾಂಕಗಳನ್ನು ಮೊದಲು ಗಮನಿಸಿ!

Related Posts

2028ರ ಚುನಾವಣೆಗೆ ಎಚ್.ಡಿ. ಕುಮಾರಸ್ವಾಮಿ ಭರ್ಜರಿ ತಯಾರಿ! ಸಿಎಂ ಆಗಲು ಇಲ್ಲಿದೆ ಹೊಸ ಪ್ಲಾನ್
ಕರ್ನಾಟಕ

2028ರ ಚುನಾವಣೆಗೆ ಎಚ್.ಡಿ. ಕುಮಾರಸ್ವಾಮಿ ಭರ್ಜರಿ ತಯಾರಿ! ಸಿಎಂ ಆಗಲು ಇಲ್ಲಿದೆ ಹೊಸ ಪ್ಲಾನ್

by ಪ್ರತಿಧ್ವನಿ
October 16, 2026
0

2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಈಗಿನಿಂದಲೇ ಸಿದ್ಧತೆ ಆರಂಭಿಸಿದಂತಿದೆ. ‘ಪರಿಶ್ರಮಕ್ಕೆ ತಕ್ಕ ಪ್ರತಿಫಲ, 2028ಕ್ಕೆ ಇದೇ ನನ್ನ ಪ್ರತಿಜ್ಞೆ’ ಎಂಬ ಘೋಷವಾಕ್ಯದೊಂದಿಗೆ...

Read moreDetails
'INS Samarthak' Commissioned at Kadamba Naval Base: Minister Santosh Lad Participates

ಕದಂಬ ನೌಕಾನೆಲೆಯಲ್ಲಿ ‘INS ಸಮರ್ಥಕ್’ ಲೋಕಾರ್ಪಣೆ: ಸಚಿವ ಸಂತೋಷ್ ಲಾಡ್ ಭಾಗಿ

October 16, 2026
Letter to the DGP seeking strict disciplinary action against police personnel who create fake accounts on social media

ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆಯುವ ಪೊಲೀಸ್ ಸಿಬ್ಬಂದಿ ವಿರುದ್ಧ ಕಠಿಣ ಶಿಸ್ತು ಕ್ರಮಕ್ಕೆ ಡಿಜಿಪಿಗೆ ಪತ್ರ

October 16, 2026
Government Employees Inquiry into Anonymous, False Complaints Against Government Employees: Significant Order from the State Government

ಸರ್ಕಾರಿ ನೌಕರರ ವಿರುದ್ಧದ ಅನಾಮಧೇಯ, ಸುಳ್ಳು ದೂರುಗಳ ವಿಚಾರಣೆ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ | Government Employees

October 16, 2026
Praja Seva Abhiyana On-the-spot solutions for people's problemsa new guidelines issued by the government

ಪ್ರಜಾಸೇವಾ ಅಭಿಯಾನ: ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ, ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ | Prajaseva

October 16, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada