ದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ.
ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಪಾತ್ರ ವಹಿಸುವಂತೆ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡುವ ನಿರ್ಣಯವನ್ನು ಅಂಗೀಕರಿಸಲಾಗಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ರಾಹುಲ್ ಗಾಂಧಿ ಅವರಿಗೆ ಸಿಡಬ್ಲ್ಯುಸಿ ಸರ್ವಾನುಮತದಿಂದ ವಿನಂತಿಸಿದೆ.
ಸಂಸತ್ತಿನ ಒಳಗೆ ಈ ಅಭಿಯಾನ ಮುನ್ನಡೆಸಲು ರಾಹುಲ್ ಅತ್ಯುತ್ತಮ ವ್ಯಕ್ತಿ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.