ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧಿ ತನಿಖೆ ನಡೆಸುತ್ತಿರುವ ಇಡಿ ಎದುರು ಸತತ ಮೂರನೇ ದಿನವೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದಾರೆ.
ಬುಧವಾರ ಬೆಳಗ್ಗೆ 11.30ಕ್ಕೆ ರಾಹುಲ್ ಗಾಂಧಿ ಹೊಸ ದಿಲ್ಲಿಯಲ್ಲಿರುವ ಜಾರಿ ನಿರ್ದೇಶನಾಲಯ (ED) ಪ್ರಧಾನ ಕಚೇರಿಗೆ ಅಪಾರ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರೊಂದಿಗೆ ರಾಹುಲ್ ಗಾಂಧಿ ಹಾಜರಾದರು.

ದಿಲ್ಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಪ್ರತಿಭಟನೆ ಮೂರನೇ ದಿನವೂ ತಾರಕಕ್ಕೇರಿದೆ. ರಾಹುಲ್ ಗಾಂಧಿ ಅವರನ್ನು ಸತತ ಮೂರನೇ ದಿನವೂ ವಿಚಾರಣೆ ನಡೆಸುತ್ತಿರೋದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.