ಹರಿಯಾಣದ (Haryana) ಚುನಾವಣಾ ಪ್ರಚಾರದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಇಂದು ಸಿಎಂ ಸಿದ್ದರಾಮಯ್ಯಗೆ (Cm siddaramaiah) ಫೋನ್ ಮೂಲಕ ಮಾತನಾಡಿದ್ದಾರೆ. ರಾಜ್ಯದಲ್ಲಿ ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದ ಸಂಬಂಧ ಆಗಿರುವ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಇದೇ ವೇಳೆ ಸಿಎಂ ಗೆ ಧೈರ್ಯ ತುಂಬಿರುವ ರಾಗಾ, ಯಾವುದೇ ಕಾರಣಕ್ಕೂ ಬಿಜೆಪಿಗರ (BJP) ರಾಜಕೀಯ ಷಡ್ಯಂತ್ರಕ್ಕೆ ಎದೆಗುಂದಬೇಡಿ, ಹೈಕಮಾಂಡ್ ನಿಮ್ಮ ಬೆಂಬಲಕ್ಕಿದೆ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ. ಈ ಬೆಳವಣಿಗೆಗಳಿಂದ ನೀವು ಇನ್ನಷ್ಟು ಗಟ್ಟಿಯಾಗಬೇಕು ಎಂದಿದ್ದಾರೆ.
ರಾಜ್ಯದ ಹೈಕೋರ್ಟ್ (Highcourt) ಮತ್ತು ಜನಪ್ರತಿದಿನಿಧಿಗಳ ನ್ಯಾಯಾಲಯದಲ್ಲಿ ಸಿಎಂ ವಿರುದ್ಧದ ತೀರ್ಪು ಪ್ರಕಟಗೊಂಡ ಬೆನ್ನಲ್ಲೇ ತನಿಖೆಗೆ ಆದೇಶ ಆಗಿರುವುದರಿಂದ, ಎಲ್ಲವನ್ನೂ ಧೈರ್ಯದಿಂದ ಎದುರಿಸಲು ಸಿದ್ಧವಾಗಿ ಎಂದು ರಾಹುಲ್ ಗಾಂಧಿ ಸಿಎಂ ಗೆ ಅಭಯ ನೀಡಿದ್ದಾರೆ ಎನ್ನಲಾಗಿದೆ.