• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿಜಯಪುರದಲ್ಲಿ ರಾಹುಲ್​ ಗಾಂಧಿ ಪ್ರಚಾರ.. ಮೋದಿಗೆ ಟಾಂಗ್​..

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in ಕರ್ನಾಟಕ, ರಾಜಕೀಯ
0
ವಿಜಯಪುರದಲ್ಲಿ ರಾಹುಲ್​ ಗಾಂಧಿ ಪ್ರಚಾರ.. ಮೋದಿಗೆ ಟಾಂಗ್​..
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು, ಎರಡನೇ ಹಂತದ ಚುನಾವಣೆಗೆ ಅಬ್ಬರದ ಪ್ರಚಾರ ನಡೆಯುತ್ತಿದೆ. ಕಲಬುರಗಿ (Kalburgi) ಏರ್‌ಪೋರ್ಟ್‌ಗೆ ಆಗಮಿಸಿದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ (Rahul Gandhi), ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ವಿಜಯಪುರಕ್ಕೆ (Vijayapura) ತೆರಳಿದ್ರು. ಅದಕ್ಕೂ ಏರ್​ಪೋರ್ಟ್​ನಲ್ಲಿ ಶಾಸಕರು, ಸಚಿವರು, ಪಕ್ಷದ‌ ಮುಖಂಡರ ಜೊತೆ ಮಹತ್ವದ ಸಭೆ ನಡೆಸಿದ್ರು. ಸಚಿವರಾದ ಪ್ರಿಯಾಂಕ್ ಖರ್ಗೆ, ಡಾ. ಶರಣಪ್ರಕಾಶ್ ಪಾಟೀಲ್, ಶಾಸಕರಾದ ಅಜಯ್‌ಸಿಂಗ್, ಅಲ್ಲಮಪ್ರಭು ಪಾಟೀಲ್ ಸೇರಿದಂತೆ ಹಲವು ಮುಖಂಡರ ಭಾಗಿಯಾಗಿದ್ದರು.

ADVERTISEMENT

ವಿಜಯಪುರದಲ್ಲಿ ನಡೆದ ಚುನಾವಣಾ ಪ್ರಚಾರ ಱಲಿ (Rally) ಭಾಗವಹಿಸಿದ ರಾಹುಲ್​ ಗಾಂಧಿ, ಗೃಹ ಲಕ್ಷ್ಮೀ ಯೋಜನೆ ಟೀಕೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ರು. ಗೃಹ ಲಕ್ಷ್ಮಿ ಯೋಜನೆಯಿಂದ ದಿವಾಳಿ ಆಗುತ್ತೆ ಎಂದಿದ್ದ ಪ್ರಧಾನಿ ಹೇಳಿಕೆಗೆ ಟಾಂಗ್​ ಕೊಟ್ಟಿರುವ ರಾಹುಲ್​, ಆ ರೀತಿ ಆಗಲ್ಲ, ಮಹಿಳೆಯರಿಗೆ ಅನೂಕುಲವಾಗಿದೆ ಮೋದಿಯವರೆ, ಇದನ್ನ ತಿಳಿದುಕೊಳ್ಳಿ. ಮಹಿಳೆಯರಿಗೆ ವರ್ಷಕ್ಕೆ 24 ಸಾವಿರ ರೂಪಾಯಿ ಹಣ ಸಿಗುತ್ತದೆ. ಮಹಿಳೆಯರು ಈ ದೇಶ, ಕುಟುಂಬಗಳ ರಕ್ಷಣೆ ಮಾಡ್ತಿದ್ದಾರೆ. ಪುರುಷರು 8 ಗಂಟೆ ಕೆಲಸ ಮಾಡಿದ್ರೆ, ಮಹಿಳೆಯರು 16 ಗಂಟೆ ಕೆಲಸ ಮಾಡ್ತಾರೆ.. ಮಹಿಳೆಯರು ಮಕ್ಕಳನ್ನ ನೋಡಿಕೊಳ್ತಾರೆ, ಅಡುಗೆ ಮಾಡ್ತಾರೆ. ಇದಕ್ಕಾಗಿ ನಾವು ಬಡ ಮಹಿಳೆಯರಿಗೆ ವರ್ಷಕ್ಕೆ 24 ಸಾವಿರ ಕೊಡ್ತಿದ್ದೇವೆ ಎಂದಿದ್ದಾರೆ.

ಲೋಕಸಭಾ ಚುನಾವಣೆ ಬಳಿಕ ದೇಶದಲ್ಲಿ ಇಂಡಿ ಅಲೈಯನ್ಸ್ (I.N.D.I.A) ಅಧಿಕಾರಕ್ಕೆ ಬರುತ್ತದೆ. ಆಗ ಬಡ ಕುಟುಂಬಗಳ ಲಿಸ್ಟ್ ರೆಡಿಯಾಗುತ್ತದೆ. ಪ್ರತಿ ಬಡ ಕುಟುಂಬದ ಒಬ್ಬ ಮಹಿಳೆಯನ್ನ ಆಯ್ಕೆ ಮಾಡುತ್ತೇವೆ. ಅವರಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಕೊಡ್ತೇವೆ. ಕರ್ನಾಟಕ ಸರ್ಕಾರ 24 ಸಾವಿರ ಕೊಡುತ್ತೆ, ಕೇಂದ್ರದಿಂದ ನಾವು ವರ್ಷಕ್ಕೆ ಒಂದು ಲಕ್ಷ ರೂಪಾಯಿ ಕೊಡ್ತೇವೆ. ಕರ್ನಾಟಕದಲ್ಲಿ ಮಹಿಳೆಯರಿಗೆ 1 ಲಕ್ಷ 24 ಸಾವಿರ ರೂಪಾಯಿ ಸಿಗುತ್ತದೆ ಎಂದಿದ್ದಾರೆ. ಬ್ಯಾಂಕ್ ಅಕೌಂಟ್​​ನಲ್ಲಿ ಕಟಾ.. ಕಟ್‌. ಕಟಾ.. ಕಟ್ ಅಂತ ಹಣ ಸಿಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಾರಿಯ ಲೋಕಸಭಾ ಚುನಾವಣೆ ಸಾಮಾನ್ಯ ಚುನಾವಣೆ ಅಲ್ಲ ಎಂದಿರುವ ರಾಹುಲ್​ ಗಾಂಧಿ, ಭಾರತದಲ್ಲಿ ಒಂದು ಪಾರ್ಟಿ, ಒಬ್ಬ ವ್ಯಕ್ತಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಮುಗಿಸಲು ಹೊರಟಿದ್ದಾರೆ. ಸಂವಿಧಾನದಿಂದ ಭಾರತದ ಜನರಿಗೆ ಅಧಿಕಾರ ಮತ್ತು ಹಕ್ಕು, ಸ್ವಾತಂತ್ರ್ಯ ಸಿಕ್ಕಿದೆ. ಮೊದಲು ರಾಜ ಮಹಾರಾಜರು ಅಧಿಕಾರ ನಡೆಸ್ತಿದ್ರು. ಆದರೆ ಸಂವಿಧಾನ ಹಿಂದುಳಿದವರಿಗೆ, ದಲಿತರಿಗೆ ಅಧಿಕಾರ ನೀಡಿದೆ. ಆದರೆ ನರೇಂದ್ರ ಮೋದಿ ಸಂವಿಧಾನವನ್ನ ಮುಗಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಮೋದಿ ಅವರು ಗೆದ್ದರೆ ಸಂವಿಧಾನ ಮುಗಿಸುತ್ತಾರೆ, ನಾಶ ಮಾಡ್ತಾರೆ ಎಂದು ಜನರನ್ನು ಎಚ್ಚರಿಸಿದ್ದಾರೆ.

Tags: ElectionModiRahul GandhiVijayapur
Previous Post

ಮತ ಹಾಕಿ, ಪ್ರತಿಯೊಬ್ಬರೂ ಭಾಗವಹಿಸುವಂತೆ ಮನವಿ ಮಾಡಿದ ಕ್ರೇಜಿಸ್ಟಾರ್!

Next Post

ಮತ ಹಕ್ಕು ಚಲಾಯಿಸಿದ ಡಿಕೆ ಶಿವಕುಮಾರ್ ! ಸಹೋದರ ಗೆಲ್ಲುವ ವಿಶ್ವಾಸದಲ್ಲಿ ಡಿಸಿಎಂ ! 

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
ರಾಜಕೀಯ

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

by ಪ್ರತಿಧ್ವನಿ
May 27, 2026
0

ಕರ್ನಾಟಕ ರಾಜಕಾರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆ ಕುರಿತು ಭಾರೀ ಚರ್ಚೆಗಳು ನಡೆಯುತ್ತಿದ್ದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಊಹಾಪೋಹಗಳಿಗೆ ತೆರೆ ಎಳೆಯಲು ಮುಂದಾಗಿದೆ....

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್ ಮೀಟಿಂಗ್ ಮೇಲೆ ರಾಜ್ಯದ ಕಣ್ಣು;  ಉಪಹಾರ ಕೂಟದಲ್ಲೇ ಅಧಿಕಾರ ಹಸ್ತಾಂತರ ಫೈನಲ್?

May 27, 2026
ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

ದೆಹಲಿ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನ; ಇಂದು ಸಿದ್ದರಾಮಯ್ಯ ಮಹತ್ವದ ಘೋಷಣೆ?

May 27, 2026
Next Post
ಮತ ಹಕ್ಕು ಚಲಾಯಿಸಿದ ಡಿಕೆ ಶಿವಕುಮಾರ್ ! ಸಹೋದರ ಗೆಲ್ಲುವ ವಿಶ್ವಾಸದಲ್ಲಿ ಡಿಸಿಎಂ ! 

ಮತ ಹಕ್ಕು ಚಲಾಯಿಸಿದ ಡಿಕೆ ಶಿವಕುಮಾರ್ ! ಸಹೋದರ ಗೆಲ್ಲುವ ವಿಶ್ವಾಸದಲ್ಲಿ ಡಿಸಿಎಂ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada