ದೆಹಲಿ : ಮೋದಿ ಉಪನಾಮ ಬಳಕೆ ಸಂಬಂಧ ದೋಷಿ ಎಂದು ಸಾಬೀತಾದ ಬಳಿಕ ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಂಡಿದ್ದ ರಾಹುಲ್ ಗಾಂಧಿ ಇಂದು ತಮ್ಮ ಸರ್ಕಾರಿ ಅಧಿಕೃತ ನಿವಾಸವನ್ನು ಖಾಲಿ ಮಾಡಿದ್ದಾರೆ. ಟ್ರಕ್ನ ಮೂಲಕ ಮನೆಯಲ್ಲಿದ್ದ ಎಲ್ಲಾ ಸಾಮಾನು – ಸರಂಜಾಮುಗಳನ್ನು ಶಿಫ್ಟ್ ಮಾಡಲಾಗಿದೆ.

ಸೂರತ್ನ ಕೋರ್ಟ್ ರಾಹುಲ್ ಗಾಂಧಿಯನ್ನು ದೋಷಿ ಎಂದು ಪರಿಗಣಿಸಿ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ಜಾಮೀನು ನೀಡಿದೆ. ಈ ಪ್ರಕರಣ ಸಂಬಂಧ ಪಾಟ್ನಾದ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್ ನೀಡಿದೆ.
2005ರಲ್ಲಿ ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಗೆಲುವು ಕಂಡಿದ್ದ ರಾಹುಲ್ ಗಾಂಧಿಗೆ ಈ ಬಂಗಲೆ ಮಂಜೂರಾಗಿದೆ. ಈ ಬಾರಿ ಲೋಕಸಭೆಯಿಂದ ಅನರ್ಹಗೊಂಡ ಬಳಿಕ ಏಪ್ರಿಲ್ 22ರ ಒಳಗಾಗಿ ಮನೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ಲೋಕಸಭೆ ಕಾರ್ಯದರ್ಶಿ ಸೂಚನೆ ನೀಡಿದ್ದರು.



