• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಕೇರಳ | 2ನೇ ದಿನ ವಿವಿಧ ಕಾರ್ಯಕ್ರಮಗಳಲ್ಲಿ ರಾಹುಲ್‌ ಗಾಂಧಿ ಭಾಗಿ

ಪ್ರತಿಧ್ವನಿ by ಪ್ರತಿಧ್ವನಿ
August 13, 2023
in ಇದೀಗ, ದೇಶ, ರಾಜಕೀಯ
0
ರಾಹುಲ್‌ ಗಾಂಧಿ
Share on WhatsAppShare on FacebookShare on Telegram

ಲೋಕಸಭೆ ಸದಸ್ಯತ್ವ ಮರುಸ್ಥಾಪನೆಯ ನಂತರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಶನಿವಾರ (ಆಗಸ್ಟ್‌ 11) ಸಂಜೆ ತಾವು ಸಂಸತ್ತಿಗೆ ಆಯ್ಕೆಯಾದ ಕೇರಳದ ವಯನಾಡು ಕ್ಷೇತ್ರಕ್ಕೆ ನೀಡಿರುವ ಭೇಟಿ ಭಾನುವಾರವೂ (ಆಗಸ್ಟ್‌ 12) ಮುಂದುವರಿದಿದೆ.

ADVERTISEMENT

ಎರಡನೇ ದಿನವಾದ ಭಾನುವಾರ ರಾಹುಲ್‌ ಅವರು ವಿವಿಧ ಸಮುದಾಯಗಳ ಜನರೊಂದಿಗೆ ಮಾತುಕತೆ ನಡೆಸಿದರು. ವಯನಾಡಿನಲ್ಲಿ ಕ್ಯಾನ್ಸರ್‌ ಕೇಂದ್ರದಲ್ಲಿ ವಿದ್ಯುತ್‌ ಸೌಲಭ್ಯವನ್ನು ಉದ್ಘಾಟಿಸಿದರು.

ಬಳಿಕ ರಾಹುಲ್‌ ಗಾಂಧಿ ಅವರು ಕೋಯಿಕ್ಕೋಡ್‌ನ ಶಾಲೆಯೊಂದರಲ್ಲಿ ಅಂಗವೈಕಲ್ಯ ನಿರ್ವಹಣಾ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಶನಿವಾರ ಭೇಟಿ ನೀಡಿದ ರಾಹುಲ್ ಗಾಂಧಿ ಅವರಿಗೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.

ಸಂಜೆ 5.30ಕ್ಕೆ ವಯನಾಡ್ ತಲುಪಿದ ರಾಹುಲ್ ಅವರನ್ನು ಜಯಘೋಷಗಳೊಂದಿಗೆ ಯುಡಿಎಫ್ ನಾಯಕರು ಸಂಭ್ರಮದಿಂದ ಬರಮಾಡಿಕೊಂಡರು.

ಕಲ್‌ಪೆಟ್ಟದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮಣಿಪುರದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

“ಅವರು (ಮೋದಿ) 2 ಗಂಟೆ 13 ನಿಮಿಷಗಳ ಕಾಲ ಸಂಸತ್ನಲ್ಲಿ ಮಾತನಾಡಿದರು. ನಕ್ಕರು, ನಗೆ ಚಟಾಕಿ ಹಾರಿಸಿದರು, ಅವರ ಮಂತ್ರಿಗಳು ನಕ್ಕರು, ಹಾಸ್ಯ ಮಾಡಿದರು, ಎಲ್ಲರೂ ಬಹಳ ಸಂತೋಷದಿಂದಿದ್ದರು. ಎಲ್ಲದರ ಬಗ್ಗೆ ಎರಡು ಗಂಟೆ ಮಾತನಾಡಿದರು. ಕಾಂಗ್ರೆಸ್ ಬಗ್ಗೆ, ಇಂಡಿಯಾ ಮೈತ್ರಿಕೂಟದ ಬಗ್ಗೆ ಚರ್ಚೆ ಮಾಡಿದರು. ಆದರೆ, ಮಣಿಪುರದ ವಿಚಾರಗಳ ಬಗ್ಗೆ ಅವರು ಮಾತನಾಡಿದ್ದು ಕೇವಲ ಎರಡು ನಿಮಿಷ ಮಾತ್ರ” ಎಂದು ಟೀಕಿಸಿದರು.

ʼ50 ಬಾರಿ ಅನರ್ಹಗೊಳಿಸಬಹುದು..ʼ

“ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿದರೆ ವಯನಾಡಿನೊಂದಿಗಿನ ನನ್ನ ಸಂಬಂಧ ಮುರಿದುಹೋಗುತ್ತದೆ ಎಂದು ಅವರು ಯೋಚಿಸುತ್ತಾರೆ. ಆದರೆ ಹಾಗಲ್ಲ. ಅವರು ರಾಹುಲ್ ಗಾಂಧಿ ಅನರ್ಹಗೊಳಿಸಿದರೆ ಜನರೊಂದಿಗಿನ ನನ್ನ ಸಂಬಂಧವು ಗಟ್ಟಿಯಾಗುತ್ತದೆ, ನೀವು ನನ್ನೊಂದಿಗೆ ನಿಂತಿದ್ದೀರಿ, ಅವರು ನನ್ನನ್ನು 50, 100 ಬಾರಿ ಅನರ್ಹಗೊಳಿಸಬಹುದು, ಆದರೆ ಅದು ವಯನಾಡ್ ಜೊತೆಗಿನ ನನ್ನ ಸಂಬಂಧದ ಮೇಲೆ ಪರಿಣಾಮ ಬೀರುವುದಿಲ್ಲ ಎಂಬುದನ್ನು ಬಿಜೆಪಿ ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಉತ್ತರಾಖಂಡ | ರುದ್ರಪ್ರಯಾಗದಲ್ಲಿ ಭೂಕುಸಿತ ; ಐವರು ಯಾತ್ರಾರ್ಥಿಗಳು ಸಾವು

“ಬಿಜೆಪಿಯವರು ಕುಟುಂಬಗಳನ್ನು ವಿಭಜಿಸುತ್ತಾರೆ. ಮಣಿಪುರದಲ್ಲೂ ಅದನ್ನೇ ಮಾಡಿದ್ದಾರೆ. ನಾವು ಅದನ್ನು ಮರುನಿರ್ಮಾಣ ಮಾಡುತ್ತೇವೆ. ನೀವು ಎರಡು ತಿಂಗಳಲ್ಲಿ ಮಣಿಪುರಕ್ಕೆ ಬೆಂಕಿ ಹಚ್ಚಿದ್ದರೆ, ಐದು ವರ್ಷಗಳಲ್ಲಿ ನಾವು ಅದನ್ನು ಮರುನಿರ್ಮಾಣ ಮಾಡುತ್ತೇವೆ” ಎಂದು ರಾಹುಲ್ ತಿಳಿಸಿದರು.

ಕಾಂಗ್ರೆಸ್‌ ರಾಹುಲ್‌ ಅವರ ಮಾತುಗಳನ್ನು ತನ್ನ ಅಧಿಕೃತ ಎಕ್ಸ್‌ (ಟ್ವಿಟರ್‌) ಖಾತೆಯಲ್ಲಿ ಹಂಚಿಕೊಂಡಿದೆ.

The BJP-RSS do not understand what a family is.

The more they try to separate us, the closer we will become.

If you disqualify Rahul Gandhi, his relationship with Wayanad will become even stronger.

A family always protects you!

: Shri @RahulGandhi  

📍 Wayanad pic.twitter.com/W4OfEX8QZc

— Congress (@INCIndia) August 12, 2023

ಮಣಿಪುರದ ಅನುಭವವನ್ನು ವಿವರಿಸಿದ ರಾಹುಲ್ ಗಾಂಧಿ, “ಬಿಜೆಪಿ ಮಣಿಪುರವನ್ನು ಕೊಂದಿತು, ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟಿತು. ದೇಶದ ಪ್ರಧಾನಿಯಾಗಿ ನೀವು ನಗುತ್ತಿದ್ದೀರಿ, ಭಾರತ ಮಾತೆಯ ಹತ್ಯೆಯ ಬಗ್ಗೆ ಎರಡು ನಿಮಿಷ ಮಾತನಾಡಿದ್ದೀರಿ, ನಿಮಗೆ ಎಷ್ಟು ಧೈರ್ಯ? ಭಾರತದ ಕಲ್ಪನೆಯನ್ನು ಹೇಗೆ ಅಗೌರವಗೊಳಿಸುತ್ತೀರಿ? ಕಳೆದ ನಾಲ್ಕು ತಿಂಗಳಿನಿಂದ ನೀವು ಏನು ಮಾಡುತ್ತಿದ್ದೀರಿ? ನೀವು ಯಾಕೆ ಅಲ್ಲಿಗೆ ಹೋಗಿಲ್ಲ?, ಹಿಂಸಾಚಾರವನ್ನು ತಡೆಯಲು ನೀವು ಏಕೆ ಪ್ರಯತ್ನಿಸಲಿಲ್ಲ? ಏಕೆಂದರೆ ನೀವು ರಾಷ್ಟ್ರೀಯವಾದಿ ಅಲ್ಲ, ಭಾರತದ ಕಲ್ಪನೆಯನ್ನು ಕೊಲೆ ಮಾಡುವ ಯಾರೇ ಆದರೂ ರಾಷ್ಟ್ರೀಯವಾದಿಯಾಗಲು ಸಾಧ್ಯವಿಲ್ಲ..ಭಾರತವನ್ನು ಪ್ರೀತಿಸಲು ಸಾಧ್ಯವಿಲ್ಲ” ಎಂದು ರಾಹುಲ್‌ ತೀಕ್ಷ್ಣ ಮಾತುಗಳಿಂದ ಪ್ರಧಾನಿ ಮೋದಿ ಅವರನ್ನು ತಿವಿದರು.

Tags: KeralaManipurManipur IssuePM Narendra ModiRahul Gandhiwayanadಕೇರಳಪ್ರಧಾನಿ ನರೇಂದ್ರ ಮೋದಿಮಣಿಪುರ ವಿಚಾರರಾಹುಲ್‌ ಗಾಂಧಿವಯನಾಡು
Previous Post

ಕೋಮು ಸಂಘರ್ಷಗಳ ಹೊಸ ಆಯಾಮಗಳು

Next Post

ಮಣಿಪುರ ಜನರಿಗೆ ಅಂತರ್ಜಾಲ ಸೇವೆ ಒದಗಿಸಿ: ಹೈಕೋರ್ಟ್ ಸೂಚನೆ

Related Posts

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ
ಕರ್ನಾಟಕ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

by ಪ್ರತಿಧ್ವನಿ
December 13, 2025
0

ಮೈಸೂರಿನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಶ್ಮಾಮಿತ್ರ ಪ್ರತಿಭಾ ಪುರಸ್ಕಾರ ಮತ್ತು ಸಹಾಯಧನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ದಿನೇಶ್ ಗುಂಡೂರಾವ್ ಬ್ರಾಹ್ಮಣರಿಗೆ ಕಾಂಗ್ರೆಸ್ ಸರ್ಕಾರ ಸ್ಪಂದಿಸುವುದಿಲ್ಲ ಎನ್ನುವ...

Read moreDetails
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025
Next Post
ಮಣಿಪುರ

ಮಣಿಪುರ ಜನರಿಗೆ ಅಂತರ್ಜಾಲ ಸೇವೆ ಒದಗಿಸಿ: ಹೈಕೋರ್ಟ್ ಸೂಚನೆ

Please login to join discussion

Recent News

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

ಬ್ರಾಹ್ಮಣರ ಅಭಿವೃದ್ಧಿಗೆ, ಸಮಸ್ಯೆಗೆ ಕಾಂಗ್ರೆಸ್ ಸರ್ಕಾರ ಸದಾ ಸ್ಪಂದಿಸುತ್ತಿದೆ

December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!