ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಜನ್ಮ ದಿನಾಚರಣೆ ಪ್ರಯುಕ್ತ ಅವರ ಮಕ್ಕಳಾದ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಪತ್ನಿ ಸೋನಿಯಾ ಗಾಂಧಿ ಹಾಗೂ ಪಕ್ಷದ ಇತರ ನಾಯಕರು ರಾಜೀವ್ ಗಾಂಧಿ ಅವರಿಗೆ ಭಾನುವಾರ (ಆಗಸ್ಟ್ 20) ಶ್ರದ್ಧಾಂಜಲಿ ಸಲ್ಲಿಸಿದರು.
ರಾಹುಲ್ ಗಾಂಧಿ ಅವರು ಲಡಾಖ್‌ನ ಪಾಂಗೊಂಗ್ ಸರೋವರದ ತಟದಲ್ಲಿನ ರಾಜೀವ್ ಗಾಂಧಿ ಅವರ ಸಮಾಧಿಗೆ ನಮನ ಸಲ್ಲಿಸಿದರು.
ಆಗಸ್ಟ್ 20 ರಾಜೀವ್ ಗಾಂಧಿ ಅವರ 79ನೇ ಜನ್ಮದಿನವಾಗಿದೆ. ರಾಹುಲ್, ರಾಜೀವ್ ಗಾಂಧಿ ಅವರ ಫೋಟೊ ಎದುರು ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು.
ಭಾರತದ ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಜನ್ಮ ದಿನದ ಅಂಗವಾಗಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸೇರಿದಂತೆ ಹಲವು ಗಣ್ಯರು ದೆಹಲಿಯ ವೀರ ಭೂಮಿಯಲ್ಲಿ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ರಾಜೀವ್ ಗಾಂಧಿ ಜನ್ಮ ದಿನಾಚರಣೆಯ ಅಂಗವಾಗಿ ಭಾನುವಾರ ಬೆಳಗ್ಗೆ ಸೋನಿಯಾ ಗಾಂಧಿ ‘ವೀರ ಭೂಮಿ’ಯಲ್ಲಿರುವ ರಾಜೀವ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.
ರಾಜೀವ್ ಪುತ್ರಿ ಪ್ರಿಯಾಂಕ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವಾರು ನಾಯಕರು ರಾಜೀವ್ ಗಾಂಧಿ ಅವರ ಸಮಾಧಿ ಸ್ಥಳದಲ್ಲಿ ರಾಜೀವ್ ಫೊಟೊಗೆ ಪುಷ್ಪ ನಮನ ಸಲ್ಲಿಸಿದರು.
ಈ ಸುದ್ದಿ ಓದಿದ್ದೀರಾ? ಕೇರಳ | ಆಫ್ರಿಕನ್ ಹಂದಿ ಜ್ವರ ಪತ್ತೆ ; ಕೊಲ್ಲಲು ಹೇಳಿದ ಜಿಲ್ಲಾಧಿಕಾರಿ
ಆಗಸ್ಟ್ 20, 1944 ರಲ್ಲಿ ಜನಿಸಿದ್ದ ರಾಜೀವ್ ಗಾಂಧಿ ಅವರು ಭಾರತದ 7ನೇ ಪ್ರಧಾನ ಮಂತ್ರಿಯಾಗಿ 1984 ರಿಂದ 1989ರವರೆಗೆ ಕಾರ್ಯನಿರ್ವಹಿಸಿದ್ದರು.
ರಾಹುಲ್ ಗಾಂಧಿ ಅವರು ಶನಿವಾರ ಲಡಾಖ್‌ನ ಪಾಂಗೊಂಗ್ ಸರೋವರಕ್ಕೆ ಬೈಕ್ ರೈಡ್ ನಡೆಸಿದ್ದು, ಆಗಸ್ಟ್ 25ರವರೆಗೆ ಲಡಾಖ್‌ನಲ್ಲಿ ಇರಲಿದ್ದಾರೆ.