ದೇಶದಲ್ಲಿನ ಕೋವಿಡ್ ಸ್ಥಿತಿ ಗತಿ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ವರ್ಚುವಲ್ ಸಭೆ ನಡೆಸಿದ್ದರು. ಸಭೆ ಮುಗಿದ ಬಳಿಕ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸುವಂತೆ ಹೇಳಿದ ಹೇಳಿಕೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದ್ದವು.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇಂಧನ ಮೇಲಿನ ಶೇ.68ರಷ್ಟು ತೆರಿಗೆಯನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳುತ್ತದೆ. ಇಂಧನಗಳ ಬೆಲೆ ಏರಿಕೆ, ಕಲ್ಲಿದ್ದಲು ಕೊರತೆ ಎಲ್ಲವನ್ನು ರಾಜ್ಯಗಳನ್ನು ದೂಷಿಸಲಾಗುತ್ತದೆ. ಪ್ರಧಾನಿ ತಮ್ಮ ಜವಾಬ್ದಾರಿಯಿಂದ ಮೆಲ್ಲಗೆ ನುಣುಚಿಕೊಳ್ಳುತ್ತಿದ್ದಾರೆ ಎಂದು ಟ್ವೀಟ್ ಮಾಡಿ ಟೀಕಿಸಿದ್ದಾರೆ.
ಮೋದಿಯವರ ಆಡಳಿತ ದಬ್ಬಾಳಿಕೆಯಿಂದ ಕೂಡಿದೆ ಎಂದು ಕಿಡಿಕಾರಿದ್ದಾರೆ.













