ಭಾರತದ ಅತ್ಯಂತ ಪುರಾತನ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಉಸ್ಮಾನಿಯ ವಿಶ್ವವಿದ್ಯಾಲಯಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಾರ್ಯಕ್ರಮ ನಿಮಿತ್ತ ಭೇಟಿ ನೀಡಲು ಉದ್ದೇಶಿಸಿದರು ಮತ್ತು ಅವರ ಭೇಟಿ ಅವಕಾಶ ಪ್ರಸ್ತಾವನೆಯನ್ನು ವಿಶ್ವವಿದ್ಯಾಲಯ ತಿರಸ್ಕರಿಸಿತ್ತು.
ಅನುಮತಿ ನಿರಾಕರಿಸಿರುವ ಹೊರಾತಾಗಿಯೂ ರಾಹುಲ್ ಗಾಂಧಿ ಮೇ 7ರಂದು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಸಂಸದ ಉತ್ತಮ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಮುಂದುವರೆದು, ತೆಲಂಗಾಣ ಸರ್ಕಾರವು ರಾಹುಲ್ ಗಾಂಧಿ ಭೇಟಿ ಅವಕಾಶ ನಿರಾಕರಣೆ ಮಾಡುವ ಮೂಲಕ ದ್ವೇಷ ರಾಜಕಾರಣ ಮಾಡುತ್ತಿದೆ. ಬಿಜೆಪಿ ನಾಯಕರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಬಹುದು, ಕೆಸಿಆರ್, ಕೆಟಿಆರ್ ಜನುಮದಿನವನ್ನು ಆಚರಿಸಬಹುದು ಆದರೆ, ರಾಹುಲ್ ಭೇಟಿಗೆ ಅವಕಶ ಯಾಕೆ ನಿರಾಕರಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ.
ರಾಹುಲ್ ಭೇಟಿ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಹಾಸ್ಟೆಲ್ ಮತ್ತು ಮೆಸ್ ಪರಿಶೀಲಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ತೆಲಂಗಾಣ ಕಾಂಗ್ರೆಸ್ ಮುಖಸ್ಥ ರೇವಂತ್ ರೆಡ್ಡಿ, ಆಂಧ್ರ ಹಾಗೂ ತೆಲಂಗಾಣ ಪ್ರತ್ಯೇಕತೆ ಸಮಯದಲ್ಲಿ ವಿಶ್ವವಿದ್ಯಾಲಯವು ಪ್ರಮುಖ ಪಾತ್ರ ವಹಿಸಿತ್ತು. ರಾಹುಲ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರೆ ಕೆಸಿಆರ್ ಯಾಕೆ ಭಯಬೀಳುತ್ತಿದ್ದಾರೆ ಎಂದು ಪ್ರಶ್ನಿಸಿದ್ದಾರೆ.