• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಇಂದು ಮತ್ತು ನಾಳೆ ಹಿಂಸಾಚಾರ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ

ಪ್ರತಿಧ್ವನಿ by ಪ್ರತಿಧ್ವನಿ
June 29, 2023
in Top Story, ದೇಶ, ರಾಜಕೀಯ
0
ಇಂದು ಮತ್ತು ನಾಳೆ ಹಿಂಸಾಚಾರ ಪೀಡಿತ ಮಣಿಪುರಕ್ಕೆ ರಾಹುಲ್ ಗಾಂಧಿ ಭೇಟಿ
Share on WhatsAppShare on FacebookShare on Telegram

ADVERTISEMENT

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಜೂ. 29 ಮತ್ತು 30ರಂದು ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ರಾಹುಲ್ ಗಾಂಧಿ ಅವರು ಜೂನ್ 29-30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದು, ಇದೇ ವೇಳೆ ಇಂಫಾಲ್ ಮತ್ತು ಚುರಚಂದಪುರದಲ್ಲಿ ಪರಿಹಾರ ಶಿಬಿರಗಳಿಗೆ ತೆರಳಿ ಅಲ್ಲಿನ ಸಂತ್ರಸ್ತರ ಜೊತೆ ಮಾತುಕತೆ ನಡೆಸಲಿದ್ದಾರೆ. ಜೊತೆಗೆ ನಾಗರಿಕ ಸಮಾಜದ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.

ಪರಿಶಿಷ್ಟ ಪಂಗಡ ಮೀಸಲಾತಿ ವಿವಾದದಿಂದ ಮೇ 3ರಿಂದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ಮೈತಿಯಿ ಸಮುದಾಯ ಹಾಗೂ ಬುಡಕಟ್ಟಿನ ಕುಕಿ ಸಮುದಾಯದ ನಡುವೆ ಸಂಘರ್ಷ ಭುಗಿಲೆದಿದ್ದೆ. ರಾಜ್ಯಾದ್ಯಂತ ಹಿಂಸಾತ್ಮಕ ಘರ್ಷಣೆಗಳು ನಡೆದು ಇದುವರೆಗೆ 120ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಅಂದಾಜು 3,000 ಜನರು ಗಾಯಗೊಂಡಿದ್ದಾರೆ. ಸಾವಿರಾರು ಜನರು ಹಿಂಸಾಚಾರ ಪೀಡಿತ ಸ್ಥಳಗಳಿಂದ ಬೇರೆಡೆ ತೆರಳಿ ಆಶ್ರಯ ಪಡೆದಿದ್ದಾರೆ.

ಈ ಹಿಂಸಾಚಾರದ ಬಳಿಕ ಕಾಂಗ್ರೆಸ್ ನಾಯಕರು ಮಣಿಪುರಕ್ಕೆ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು, ಸುಮಾರು ಎರಡು ತಿಂಗಳಿನಿಂದ ಮಣಿಪುರದ ಪರಿಸ್ಥಿತಿ ಚಿಂತಾಕನಕವಾಗಿದೆ. ಸದ್ಯ ಅಲ್ಲಿನ ಪರಿಸ್ಥಿತಿ ಹತೋಟಿಗೆ ಬರುವುದು ಮುಖ್ಯವಾಗಿದ್ದು, ಸಮಾಜವು ಸಂಘರ್ಷದಿಂದ ಶಾಂತಿಯತ್ತ ಸಾಗಲು ಸಂತೈಸುವ ಕೈಗಳ ಅಗತ್ಯವಿದೆ. ಇದೊಂದು ಮಾನವೀಯ ದುರಂತವಾಗಿದ್ದು, ದ್ವೇಷವಲ್ಲ ಪ್ರೀತಿಯ ಶಕ್ತಿಯಾಗಿರುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ವೇಣುಗೋಪಾಲ್ ಟ್ವೀಟರ್ ನ ಮೂಲಕ ತಿಳಿಸಿದ್ದಾರೆ.

ಇನ್ನು ಮೊದಲಿನಿಂದಲೂ ಮಣಿಪುರದ ಸದ್ಯದ ಪರಿಸ್ಥಿತಿಗೆ ಬಿಜೆಪಿ ಮತ್ತು ಅದರ ಒಡೆದು ಆಳುವ ರಾಜಕೀಯ ಕಾರಣವೆಂದು ಕಾಂಗ್ರೆಸ್ ಆರೋಪ ಮಾಡಿಕೊಂಡು ಬಂದಿದ್ದು, ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರನ್ನು ತಕ್ಷಣವೇ ವಜಾಗೊಳಿಸಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ. ಹಾಗೇ ಸಮಾಜವಾದಿ ಪಕ್ಷ ಮತ್ತು ಇತರರು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ ಮಾಡಲು ಆಗ್ರಹಿಸಿದ್ದರು

Tags: Congress PartyManipurManipur ViolenceRahul Gandhi
Previous Post

Uniform Civil Code: ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯಿಂದ ಮಂಗಳವಾರ ತಡರಾತ್ರಿ ಆನ್‌ಲೈನ್‌ ಸಭೆ

Next Post

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆಯೇ ಸಿಟಿ ರವಿ.!?

Related Posts

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ
ರಾಜಕೀಯ

ಬಂಗಾಳದಲ್ಲಿ ಆಡಳಿತ ವಿರೋಧಿ ಅಲೆ: ಟಿಎಂಸಿಗೆ ಸವಾಲು, ಬಿಜೆಪಿ ಮುನ್ನಡೆ? 

by ಪ್ರತಿಧ್ವನಿ
April 28, 2026
0

ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿದ್ದು, ಆಡಳಿತ ವಿರೋಧಿ ಅಲೆ ಹೊಸ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ All India Trinamool Congress ಸರ್ಕಾರದ...

Read moreDetails
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಹಸಿರು ನಿಶಾನೆ

April 28, 2026
ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

ಬಂಗಾಳ ರಾಜಕೀಯದಲ್ಲಿ ತೀವ್ರ ಪೈಪೋಟಿ: ಮಮತಾ ವಿರುದ್ಧ ರಾಹುಲ್ ಗುಡುಗು, ಮೈತ್ರಿಗೆ ಶಾಕ್?

April 28, 2026
ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

ಬಂಗಾಳ ಅಸ್ಮಿತೆ ವಿರುದ್ಧ ಬಿಜೆಪಿ ಸವಾಲು: ಗೆಲುವಿಗೆ ತಂತ್ರವೇ? ಕುತಂತ್ರವೇ?

April 27, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಬಂಗಾಳದಲ್ಲಿ ದೀದಿ ಎಷ್ಟು ಪವರ್ ಫುಲ್ ಲೇಡಿ..? ಮೋದಿ ಮಣಿಸುತ್ತಾಳಾ ಈ ಗಟ್ಟಿಗಿತ್ತಿ..?

April 27, 2026
Next Post
ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆಯೇ ಸಿಟಿ ರವಿ.!?

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆಯೇ ಸಿಟಿ ರವಿ.!?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada