ನಿದ್ದೆಯಿಂದ ಎದ್ದು, ಮಕ್ಕಳ ಆರೋಗ್ಯ ರಕ್ಷಣೆ ಬಗ್ಗೆ ಗಮನಹರಿಸಿ; ಮೂರನೆ ಅಲೆ ಕುರಿತು ಮೋದಿ ಸರ್ಕಾರಕ್ಕೆ ಎಚ್ಚರಿಸಿದ ರಾಹುಲ್ ಗಾಂಧಿ

ಕರೋನಾ ಎರಡನೇ ಅಲೆ ದೇಶದ ಜನರನ್ನು ಭಯಭೀತರನ್ನಾಗಿ ಮಾಡಿದ್ದು,  ವೈದ್ಯಕೀಯ ವ್ಯವಸ್ಥೆ ಹದಗೆಟ್ಟು, ದೇಶದಲ್ಲಿ ಲಸಿಕೆ, ಬೆಡ್‌, ಆಕ್ಸಿಜನ್‌ ಸೇರಿದಂತೆ ಇತರೆ ವೈದ್ಯಕೀಯ ಸಮಸ್ಯೆ ಎದುರಾಗಿದೆ.

ಇದೀಗ ಮೂರನೇ ಅಲೆ ಎರಡನೇ ಅಲೆಗಿಂತಲೂ ಭೀಕರವಾಗಿದ್ದು, ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ಈಗಾಗಲೇ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಕರೋನಾ ನಿಯಂತ್ರಣ ಸಂಬಂಧ ಪದೇ-ಪದೇ ಮೋದಿ ಸರ್ಕಾರವನ್ನು ಎಚ್ಚರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಮತ್ತೆ ಟ್ವೀಟ್‌ ಮಾಡಿ ಮುಂದಾಗುವ ಅನಾಹುತವನ್ನು ತಡೆಯುವತ್ತ ಸರ್ಕಾರ ಕೂಡಲೇ ಗಮನಹರಿಸಬೇಕು. ಮಕ್ಕಳನ್ನು ರಕ್ಷಿಸಲು ವೈದ್ಯಕೀಯ ಕ್ಷೇತ್ರವನ್ನು ಬಲಪಡಿಸುವಂತೆ ಸಲಹೆ ಕೊಟ್ಟಿದ್ದಾರೆ.

ಮಕ್ಕಳ ಆರೋಗ್ಯ ದೃಷ್ಟಿಯಿಂದ ಕೇಂದ್ರ ಸರ್ಕಾರ  ಹೆಚ್ಚಿನ  ರಕ್ಷಣೆಗೆ ಕೊಡುವ ಅವಶ್ಯಕತೆಯಿದೆ.  ಚಿಕ್ಕಮಕ್ಕಳ ಆರೋಗ್ಯ ಸೇವೆ, ಲಸಿಕೆ, ಚಿಕಿತ್ಸೆಯ ಬಗ್ಗೆ ಈಗಾಗಲೇ  ಪ್ರೋಟೋಕಾಲ್‌ ಜಾರಿಯಲ್ಲಿರಬೇಕಿತ್ತು. ಮೋದಿ ಸರ್ಕಾರ ನಿದ್ದೆಯಿಂದ ಹೊರಬಂದು  ಕರೋನಾದಿಂದ ಭಾರತದ ಮುಂದಿನ ಭವಿಷ್ಯ ಕಾಪಾಡುವ ಅಗತ್ಯವಿದೆ ಎಂದು ರಾಹುಲ್‌ ಗಾಂಧಿ ಎಚ್ಚರಿಸಿದ್ದಾರೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...