ದೆಹಲಿ: ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪತ್ರ ಬರೆದಿದ್ದಾರೆ.
ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆಯೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಪತ್ರ ಬರೆದಿದ್ದಾರೆ. ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು ಈ ಪ್ರಕರಣದದಲ್ಲಿ ಯಾರೇ ಆರೋಪಿಗಳಿದ್ದರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿಸಿಕೊಂಡಿರುವುದು ಖಂಡನೀಯ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
![](https://pratidhvani.com/wp-content/uploads/2024/04/siddaramaiah-1-1-1024x576.webp)
ರಾಹುಲ್ ಗಾಂಧಿ ಈ ಪತ್ರದ ಮೂಲಕ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ದೇವರಾಜೇಗೌಡ ಮಾಹಿತಿ ನೀಡಿದ್ದರು. ಅವರಿಗೆ ಟಿಕೆಟ್ ನೀಡಿರುವುದು ಆಘಾತದ ವಿಷಯವಾಗಿದೆ. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರೂ ಅವರ ಪರವಾಗಿ ಪ್ರಚಾರ ಮಾಡಿದ್ದು ನೋವು ತಂದಿದೆ ಎಂದು ಹೇಳಿದ್ದಾರೆ.
![](https://pratidhvani.com/wp-content/uploads/2024/05/Untitled-design-2024-04-49f281f4d6edac3523d7d1f1b6038d94-3x2-1.webp)
ಭಾರತದಿಂದ ಪರಾರಿಯಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ ಎಂದು ಬಿಜೆಪಿ ವಿರುದ್ಧ ರಾಹುಲ್ ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಅವರು ಹರಿಯಾಣ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಮೌನ ವಹಿಸಿದ್ದಾರೆ. ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಇದೆ ಎಂದು ಆರೋಪಿಸಿದ್ದಾರೆ. ಸಂತ್ರಸ್ತ ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಕೂಡ ರಾಹುಲ್ ಸೂಚಿಸಿದ್ದಾರೆ.