ದೇಶದಲ್ಲಿ 3 ಹಂತದ ಚುನಾವಣೆ ಮುಗಿದ ಬಳಿಕ ರಾಹುಲ್ ಗಾಂಧಿ ಒಂದು ಮಾತನ್ನು ಸ್ಪಷ್ಟವಾಗಿ ಹೇಳಿದ್ರು. ಮುಂದಿನ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಆಗಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದರು. ಆದರೆ ಮೋದಿಯೇ ಪ್ರಧಾನಿ ಆಗಿ ಇರುತ್ತಾರೆ ಎಂದು ಬಿಜೆಪಿ ನಾಯಕರು ಸ್ಪಷ್ಟನೆಯನ್ನೂ ಕೊಟ್ಟಿದ್ದರು. ಆದರೆ ಯಾವುದೇ ಕಾರಣಕ್ಕೂ ನರೇಂದ್ರ ಮೋದಿ ಪ್ರಧಾನಿಯಾಗಲ್ಲ ಎನ್ನುವ ಮಾತು ಸತ್ಯವಾಗುವ ಕಾಲ ಸನ್ನಿಹಿತ ಆಗಿದೆ. ದೇಶದಲ್ಲಿ ಮೂರನೇ ಬಾರಿಗೆ ಪ್ರಧಾನಿ ಆಗಿ ನರೇಂದ್ರ ಮೋದಿ ಅಧಿಕಾರ ಸ್ವೀಕಾರ ಮಾಡಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ.
ಬಿಜೆಪಿ ವೈಯಕ್ತಿಕವಾಗಿ ಮ್ಯಾಜಿಕ್ ನಂಬರ್ ಕ್ರಾಸ್ ಮಾಡಿಲ್ಲ. ಲೋಕಸಭಾ ಚುನಾವಣೆಯಲ್ಲಿ 272ಕ್ಕಿಂt ಹೆಚ್ಚು ಸ್ಥಾನಗಳನ್ನು ಗೆಲ್ಲಲೇ ಬೇಕು. ಇದೀಗ 240ರ ಆಸುಪಾಸಿನಲ್ಲಿ ನಿಂತು ಹೋಗಿರುವ ಬಿಜೆಪಿ ಮೈತ್ರಿ ಪಕ್ಷಗಳ ಬೆಂಬಲದಿಂದ ಅಧಿಕಾರ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಿದ್ದರೂ ಮೈತ್ರಿ ಪಕ್ಷಗಳ ಒಪ್ಪಿಗೆ ಅನಿವಾರ್ಯ. ಹೀಗಾಗಿ ಪ್ರಧಾನಿಯಾಗಿ ನರೇಂದ್ರ ಮೋದಿ ಮತ್ತೆ ಅಧಿಕಾರಕ್ಕೆ ಏರುವುದಿಲ್ಲ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಎನ್ಡಿಎ ಸರ್ಕಾರ ರಚನೆಗೆ ಒಂದು ವೇಳೆ ಮೈತ್ರಿ ಪಕ್ಷಗಳ ಅನಿವಾರ್ಯತೆ ಎದುರಾದರೆ ಆರ್ಎಸ್ಎಸ್ ಅಖಾಡಕ್ಕೆ ಇಳಿಯುವ ಸಾಧ್ಯತೆಯಿದ್ದು, ನರೇಂದ್ರ ಮೋದಿ ಹಾಗು ಅಮಿತ್ ಷಾ ಅವರನ್ನು ಹೊರಗಿಟ್ಟು ಸರ್ಕಾರ ರಚನೆ ಮಾಡಿದರೂ ಅಚ್ಚರಿಯಿಲ್ಲ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಆರ್ಎಸ್ಎಸ್ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರೆ ಬಿಜೆಪಿಗೆ ಇಷ್ಟೊಂದು ಹೀನಾಯ ಪರಿಸ್ಥಿತಿ ಬರುತ್ತಿರಲಿಲ್ಲ ಎನ್ನುವುದು ಸದ್ಯದ ಲೆಕ್ಕಾಚಾರ. ನರೇಂದ್ರ ಮೋದಿ ಏಕಪಕ್ಷೀಯ ನಿರ್ಧಾರ ಮಾಡುತ್ತ, ಎಲ್ಲರನ್ನು ಮೀರಿ ಹೋಗಿದ್ದರಿಂದ ಈ ರೀತಿ ಆಗಿದೆ ಎನ್ನಲಾಗ್ತಿದೆ. ಒಟ್ಟಾರೆ, ರಾಹುಲ್ ಗಾಂಧಿ ಮಾತು ಸತ್ಯ ಆಗುವ ಹಂತ ತಲುಪಿದೆ ಎನ್ನಬಹುದು.