• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಹುಲ್ ಗಾಂಧಿ ಮೂರು ದಿನಗಳ ಅಮೆರಿಕ ಪ್ರವಾಸ

ಪ್ರತಿಧ್ವನಿ by ಪ್ರತಿಧ್ವನಿ
September 8, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮೂರು ದಿನಗಳ ಕಾಲ ಅಮೆರಿಕ ಪ್ರವಾಸದಲ್ಲಿದ್ದಾರೆ. ಅಮೆರಿಕದ ಟೆಕ್ಸಾಸ್ ರಾಜ್ಯದ ಡಲ್ಲಾಸ್ ನಗರಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರಿಗೆ ಇಲ್ಲಿನ ಭಾರತೀಯ ಮೂಲದ ನಿವಾಸಿಗಳು ಅದ್ದೂರಿ ಸ್ವಾಗತ ಕೋರಿದರು.ಭಾರತೀಯ ಅಮೆರಿಕನ್ ಸಮುದಾಯ ಹಾಗೂ ಭಾರತೀಯ ಸಾಗರೋತ್ತರ ಕಾಂಗ್ರೆಸ್ (ಐಒಸಿ) ಸದಸ್ಯರು ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಂಡರು.

ADVERTISEMENT

ಈ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ತಮಗೆ ಅಮೆರಿಕದಲ್ಲಿ ಭವ್ಯ ಸ್ವಾಗತ ಸಿಕ್ಕಿತು ಎಂದು ಬರೆದುಕೊಂಡಿದ್ದಾರೆ. ಅಮೆರಿಕದ ಟೆಕ್ಸಾಸ್ ರಾಜ್ಯದ ಡಲ್ಲಾಸ್ ನಗರಕ್ಕೆ ಆಗಮಿಸಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ರಾಹುಲ್ ಗಾಂಧಿ ತಮ್ಮ ಭೇಟಿಯ ವಿವರ ದಾಖಲಿಸಿದ್ದಾರೆ.

ತಮ್ಮ ಈ ಭೇಟಿಯ ವೇಳೆ ಭಾರತ – ಅಮೆರಿಕ ಎರಡೂ ರಾಷ್ಟ್ರಗಳ ನಡುವಣ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಸಂಬಂಧ ಅರ್ಥ ಪೂರ್ಣ ಚರ್ಚೆ ಮತ್ತು ಒಳನೋಟವುಳ್ಳ ಸಂಭಾಷಣೆಗಳಲ್ಲಿ ತೊಡಗಿಸಿಕೊಳ್ಳಲು ನಾನು ಕುತೂಹಲದಿಂದ ಎದುರು ನೋಡುತ್ತಿದ್ದೇನೆ’ ಎಂದು ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.

2024ರ ಲೋಕಸಭಾ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ರಾಹುಲ್ ಗಾಂಧಿ ಅವರು ಅಮೆರಿಕಗೆ ಭೇಟಿ ನೀಡುತ್ತಿದ್ದಾರೆ. ಲೋಕಸಭಾ ವಿಪಕ್ಷ ನಾಯಕರೂ ಆಗಿರುವ ರಾಹುಲ್ ಗಾಂಧಿ, ಟೆಕ್ಸಾಸ್ ರಾಜ್ಯದ ಡಲ್ಲಾಸ್ ನಗರದಲ್ಲಿ ಸೆಪ್ಟೆಂಬರ್ 8 ರಂದು ಇರಲಿದ್ದಾರೆ. ಬಳಿಕ ಸೆಪ್ಟೆಂಬರ್ 9 ಹಾಗೂ 10 ರಂದು ಅಮೆರಿಕ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿ ರಾಹುಲ್ ಗಾಂಧಿ ಇರಲಿದ್ದಾರೆ.

ರಾಹುಲ್ ಗಾಂಧಿ ಅವರ ಅಮೆರಿಕ ಭೇಟಿ ಕುರಿತಾಗಿ ಬರೆದುಕೊಂಡಿದ್ದ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೊಡಾ, ರಾಹುಲ್ ಗಾಂಧಿ ಅವರನ್ನು ಸ್ವಾಗತಿಸಲು ಅಮೆರಿಕದಲ್ಲಿನ ಭಾರತೀಯ ಸಮುದಾಯ, ಎನ್‌ಆರ್‌ಐಗಳು, ತಾಂತ್ರಿಕ ತಜ್ಞರು, ಉದ್ಯಮ ಪ್ರಮುಖರು, ವಿದ್ಯಾರ್ಥಿಗಳು, ಮಾಧ್ಯಮ ಸಮೂಹ ಹಾಗೂ ಅಮೆರಿಕದಲ್ಲಿನ ರಾಜಕಾರಣಿಗಳೂ ಕೂಡಾ ಕುತೂಹಲದಿಂದ ಎದುರು ನೋಡುತ್ತಿದ್ದಾರೆ ಎಂದು ಬರೆದುಕೊಂಡಿದ್ದರು.

Tags: Congress PartyOpposition leader Rahul GandhiRahul Gandhi Reaches US
Previous Post

1 ಲಕ್ಷ ಲಂಚ ಸ್ವೀಕರಿಸುತ್ತಿದ್ದ ಶಿಕ್ಷಣ ಇಲಾಖೆಯ ಸಿಬ್ಬಂದಿ ಅರೆಸ್ಟ್:ಹೇಗೆ ರೆಡ್ ಹ್ಯಾಂಡ್ ಹಿಡಿದ್ರು ನೋಡಿ

Next Post

ಥಾಣೆಯಲ್ಲಿ ಪಾನಮತ್ತ ಆಟೋ ಚಾಲಕರು ಟ್ರಾಫಿಕ್ ಗಾರ್ಡ್ ಮೇಲೆ ಹಲ್ಲೆ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
Next Post

ಥಾಣೆಯಲ್ಲಿ ಪಾನಮತ್ತ ಆಟೋ ಚಾಲಕರು ಟ್ರಾಫಿಕ್ ಗಾರ್ಡ್ ಮೇಲೆ ಹಲ್ಲೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada