• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಹುಲ್ ಗಾಂಧಿ ಭೇಟಿ : ಯಾವುದೇ ಪರಿಣಾಮ ಬೀರಿಲ್ಲ..! Rahul Gandhi’s visit: No effect..!

Any Mind by Any Mind
March 21, 2023
in Top Story, ಇದೀಗ, ರಾಜಕೀಯ
0
ರಾಹುಲ್ ಗಾಂಧಿ ಭೇಟಿ : ಯಾವುದೇ ಪರಿಣಾಮ ಬೀರಿಲ್ಲ..! Rahul Gandhi’s visit: No effect..!
Share on WhatsAppShare on FacebookShare on Telegram

ADVERTISEMENT

ಹುಬ್ಬಳ್ಳಿ, ಮಾ. 21: ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಭೇಟಿ ನೀಡಿರುವುದರಿಂದ ಯಾವುದೇ ಪರಿಣಾಮ ಬೀರಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಇಂದು ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆಯನ್ನು ಮಾಡಿದ್ದು, ಯಾವುದೇ ಪರಿಣಾಮ ಉಂಟಾಗಿಲ್ಲ. ನಿನ್ನೆಯ ಅವರ ಬೋಗಸ್ ಘೋಷಣೆಗಳಿಂದ ಯಾವುದೇ ಪರಿಣಾಮವಾಗುವುದಿಲ್ಲ. ಅವರು ಕಳೆದ ಬಾರಿ ಬಂದದ್ದಕ್ಕೂ ಈ ಬಾರಿ ಬಂದಿರುವುದಕ್ಕೂ ಬಹಳ ವ್ಯತ್ಯಾಸವಿದೆ. ಲಂಡನ್ ವಿಶ್ವವಿದ್ಯಾಲಯದಲ್ಲಿ ಅವರು ಮಾತನಾಡಿರುವುದು ದೇಶ ವಿರೋಧಿಯಾಗಿದೆ. ಇಡೀ ದೇಶ್ಯದಲ್ಲಿ ಹಾಗೂ ರಾಜ್ಯದಲ್ಲಿ ಈ ಬಗ್ಗೆ ಖಂಡನೆಯಾಗಿದೆ. ಅವರ ಮಾತಿಗೆ ಯಾವುದೇ ಬೆಲೆಯನ್ನು ನೀಡುವುದಿಲ್ಲ ಎಂಬ ವಿಶ್ವಾಸವಿದೆ ಎಂದರು.

ಮಾರ್ಚ್ 25 ರಂದು ರಾಜ್ಯಕ್ಕೆ ಪ್ರಧಾನಿಗಳ ಭೇಟಿ
ಮಾರ್ಚ್ 25 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾಗೂ ಮಾರ್ಚ್ 24 ಮತ್ತು 26 ರಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಬೋಗಸ್ ಟ್ರ್ಯಾಕ್ ರೆಕಾರ್ಡ್

ಸಿದ್ದರಾಮಯ್ಯ ಅವರು ಬೋಗಸ್ ಕಾರ್ಡ್ ಬಗ್ಗೆ ಮಾತನಾಡುತ್ತಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಈ ರೀತಿ ಆಶ್ವಾಸನೆಗಳನ್ನು ನೀಡಿದ್ದು, ಇಂದಿಗೂ ಈಡೇರಿಸಿಲ್ಲ. ಇದು ಅವರ ಟ್ರ್ಯಾಕ್ ರೆಕಾರ್ಡ್ . ರಾಜಸ್ಥಾನ, ಛತ್ತೀಸ್ ಗಡದಲ್ಲಿ ಘೋಷಣೆ ಮಾಡಿದ್ದನ್ನು ಅವರು ಈಡೇರಿಸಿಲ್ಲ ಎಂದರು. ಛತ್ತೀಸ್ ಗಡದಲ್ಲಿ ಪ್ರತಿ ಮನೆಗೆ ಒಂದು ಸಾವಿರ ರೂ ನೀಡುವುದಾಗಿ ಹೇಳಿದ್ದರು. ನಾಲ್ಕು ವರ್ಷ ನೀಡಿದೆ, ಕೊನೆ ವರ್ಷ ಕೊಡಲು ಓಡಾಡಿದರು. ಈ ರೀತಿ ಜನರನ್ನು ಯಾಮಾರಿಸುತ್ತಾರೆ. ಅದು ಗ್ಯಾರಂಟಿ ಕಾರ್ಡ್ ಅಲ್ಲ, ಬರೀ ವಿಸಿಟಿಂಗ್ ಕಾರ್ಡ್ ಎಂದರು.

ಇದ್ದಲು ಮಸಿಗೆ ಬುದ್ಧಿ ಹೇಳಿದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ ಹಾಗೂ ರೀಡೂ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಭ್ರಷ್ಟಾಚಾರದ ಆರೋಪವಿದೆ. ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆಂದರೆ ಇದ್ದಲು ಮಸಿಗೆ ಬುದ್ಧಿ ಹೇಳಿದಂತೆ ಎಂದರು. ಕಾಂಗ್ರೆಸ್ ಅಧ:ಪತನಕ್ಕೆ ಸಿದ್ಧವಾಗಿದೆ. ಭಾರತ ದೇಶದಲ್ಲಿ ಎಲ್ಲಾ ಕಡೆ ಪಾತನವಾಗಿದೆ ಎಂದರು.

ನ್ಯಾಯಾಂಗ ತನಿಖೆ ಸಿದ್ದರಾಮಯ್ಯ ಅವರ ಸರ್ಕಾರದ 59 ಭ್ರಷ್ಟಾಚಾರ ಪ್ರಕರಣ ಗಳ ಬಗ್ಗೆ ನ್ಯಾಯಾಂಗ ತನಿಖೆಯನ್ನು ನಡೆಸಲು ಕಾನೂನು ತಜ್ಞರೊಂದಿಗೆ ಚರ್ಚಿಸಲಾಗಿತ್ತಿದೆ. ಕೆಲವೇ ದಿನಗಳಲ್ಲಿ ತೀರ್ಮಾನವಾಗುತ್ತದೆ ಎಂದರು. 59 ಪ್ರಕರಣಗಳಲ್ಲಿ ಕೆಲವನ್ನು ವಹಿಸಲಾಗಿದೆ. ಬಾಕಿ ಇರುವುದನ್ನು ವಹಿಸಲಾಗುವುದು ಎಂದರು.

ಉರಿಗೌಡ, ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆಯಾಗಿರುವ ಪ್ರಶ್ನೆಯೇ ಇಲ್ಲ


ಉರಿಗೌಡ , ನಂಜೇಗೌಡ ಕುರಿತ ಚರ್ಚೆಗೆ ಸಂಬಂಧಿಸಿದಂತೆ ಉತ್ತರಿಸಿ, ಸತ್ಯ ಸಂಶೋಧನೆಯಾಗಿ ಸತ್ಯ ಹೊರಗೆ ಬಂದಾಗ ಜಯ ದೊರೆಯಲಿದೆ. ಉರಿಗೌಡ, ನಂಜೇಗೌಡ ಪ್ರಕರಣದಲ್ಲಿ ಹಿನ್ನಡೆಯಾಗಿರುವ ಪ್ರಶ್ನೆಯೇ ಇಲ್ಲ ಎಂದರು. ಹಲವಾರು ಐತಿಹಾಸಿಕ ಸತ್ಯಗಳನ್ನು ಮರೆಮಾಚಲಾಗಿದೆ. ಇತಿಹಾಸವನ್ನು ಭಾರತ ಹಾಗೂ ಕರ್ನಾಟಕದಲ್ಲಿ ತಿರುಚಿರುವ ಕೆಲಸವಾಗಿದೆ. ಆ ಸಂದರ್ಭದಲ್ಲಿ ಯಾರು ಪ್ರಮುಖ ಪಾತ್ರ ವಹಿಸಿದ್ದರು ಎನ್ನುವುದು ಜಗಜ್ಜಾಹೀರಾಗಿದೆ. ಸತ್ಯವನ್ನು ಹೇಳಿದರೆ ಇವರಿಗೆ ತಡೆಯಲು ಆಗುವುದಿಲ್ಲ.

ಗುರ್ಮಿಟ್ಕಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ
ಬಾಬು ರಾವ್ ಚಿಂಚನಸೂರ ಅವರು ಕಾಂಗ್ರೆಸ್ ನಲ್ಲಿದ್ದವರು, ವಾಪಸ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ. ಆ ಕ್ಷೇತ್ರದಲ್ಲಿ ನಮ್ಮ ಸಂಘಟನೆ ಉತ್ತಮವಾಗಿದೆ. ಗುರ್ಮಿಟ್ಕಲ್ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಸಾರಿಗೆ ನೌಕರರ ಸಂಘದವರು ಪ್ರತಿಭಟನೆ ಹಿಂಪಡೆದಿದ್ದಾರೆ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

Tags: BJPbjpkarnatakacmbommaiCongress PartyDKShivakumarKPCClatestnewsrahulgandhisiddarmaiahaಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ನಟ ಚೇತನ್​ ಅಂಹಿಸಾಗೆ 14 ದಿನಗಳ ನ್ಯಾಯಾಂಗ ಬಂಧನ

Next Post

ಸಿದ್ದರಾಮಯ್ಯ ಎಲೆಕ್ಷನ್ ಗೆ ನಿಲ್ಲಲು ಕ್ಷೇತ್ರ ಹುಡುಕುತ್ತಿರೋದು ನೋಡಿದ್ರೆ ಅನುಕಂಪ ಬರ್ತಿದೆ : ಹೆಚ್ ಡಿಕೆ ವ್ಯಂಗ್ಯ : Siddaramaiah v/s H D Kumaraswamy

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

ತಮಿಳುನಾಡು ಅಭಿವೃದ್ಧಿಗೆ ಮತದಾನ ಮಾಡಿ: ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆ

April 23, 2026
ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

ಅಬ್ಬರ, ಆರ್ಭಟದ ಬಳಿಕ ಇಂದು ಬಂಗಾಳದಲ್ಲಿ ಮತದಾನ : ದೀದಿ ಮಣಿಸಲು ಮೋದಿ ಸಕಸ್ಸ್ ಆಗ್ತಾರಾ..

April 23, 2026
Next Post
ಸಿದ್ದರಾಮಯ್ಯ ಎಲೆಕ್ಷನ್ ಗೆ ನಿಲ್ಲಲು ಕ್ಷೇತ್ರ ಹುಡುಕುತ್ತಿರೋದು ನೋಡಿದ್ರೆ ಅನುಕಂಪ ಬರ್ತಿದೆ : ಹೆಚ್ ಡಿಕೆ ವ್ಯಂಗ್ಯ : Siddaramaiah v/s H D Kumaraswamy

ಸಿದ್ದರಾಮಯ್ಯ ಎಲೆಕ್ಷನ್ ಗೆ ನಿಲ್ಲಲು ಕ್ಷೇತ್ರ ಹುಡುಕುತ್ತಿರೋದು ನೋಡಿದ್ರೆ ಅನುಕಂಪ ಬರ್ತಿದೆ : ಹೆಚ್ ಡಿಕೆ ವ್ಯಂಗ್ಯ : Siddaramaiah v/s H D Kumaraswamy

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada