ರಾಜ್ಯದಲ್ಲಿ ಕೆಲವು ದಿನಗಳ ಬಿಡುವು ನೀಡಿದ್ದ ವರುಣ ಮತ್ತೆ ಇದೀಗ ಕೆಲು ಭಾಗಗಳಲ್ಲಿ ಮತ್ತೆ ಅರ್ಭಟಿಸಲು ಸಜ್ಜಾಗಿದ್ದಾನೆ. ಹೀಗಾಗಿ ಕೆಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ (Weather forcast) ಮಳೆಯ ಮುನ್ಸೂಚನೆ ನೀಡಿದೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡದೆ. ಬೆಂಗಳೂರು ಗ್ರಾಮಾಂತರ, ನಗರಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಚಿಕ್ಕಮಗಳೂರು, ಮಂಡ್ಯ ಸೇರಿದಂತೆ ಕೆಲವು ಕಡೆ ಸಾಧಾರಣ ಮಳೆಯಾಗಲಿದ್ದು, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.










