• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಲ್ಲಿ ಮಳೆ ಇಳಿಕೆ.. ರಾಜ್ಯದಲ್ಲಿ ಮಳೆಯಿಂದ ಏನೆಲ್ಲಾ ಅವಾಂತರ ಆಗಿದೆ..?

ಪ್ರತಿಧ್ವನಿ by ಪ್ರತಿಧ್ವನಿ
October 17, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬೆಂಗಳೂರಲ್ಲಿ ಎರಡು ದಿನಗಳ ಕಾಲ ಅಬ್ಬರಿಸಿ ಬೊಬ್ಬಿರಿದ ವರುಣ ಇಂದು ತಾಳ್ಮೆ ತೋರಿಸಿದ್ದಾನೆ. ಆದರೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಕಡಿಮೆ ಆದರೂ ಮಳೆಯಿಂದ ಆಗಿರುವ ಅನಾಹುತಗಳ ಸರಣಿ ಮಾತ್ರ ಮುಂದುವರಿದಿದೆ. ವರುಣನ ಹೊಡೆತಕ್ಕೆ ಅನ್ನದಾತರು ಕಂಗಾಲಾಗಿದ್ದಾರೆ.

ADVERTISEMENT

ಚಿತ್ರದುರ್ಗ ಜಿಲ್ಲೆಯ ಹಲವೆಡೆ ಕಳೆದ 24 ದಿನದಿಂದ ನಿರಂತರ ಮಳೆ ಆಗ್ತಿದೆ.. ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿರೋ ಘಟನೆ ಈಚಲ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.. ಶಿಥಿಲಾವಸ್ಥೆಯಲ್ಲಿದ್ದ ಮನೆ ಗೋಡೆ ಮಳೆಗೆ ನೆಂದು ಕುಸಿದು 75 ವರ್ಷದ ರಂಗಮ್ಮ ಮೃತಪಟ್ಟಿದ್ದಾರೆ.. ಸ್ಥಳಕ್ಕೆ ಚಿತ್ರದುರ್ಗ ಶಾಸಕ ಕೆ.ಸಿ ವೀರೇಂದ್ರ, ತಹಶೀಲ್ದಾರ್ ನಾಗವೇಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಘಟನೆ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ ಜಿಲ್ಲೆಯಲ್ಲಿ ನಿರಂತರ ಮಳೆ ಆಗ್ತಿದ್ದು ಜನ-ಜೀವನ ಅಸ್ತವ್ಯಸ್ತವಾಗಿದೆ.. ಹಲವು ಗ್ರಾಮಗಳಿಗೆ ಮಳೆ ನೀರು ನುಗ್ಗಿದೆ.. ಹಾನಗಲ್ ತಾಲೂಕಿನ ಕಂಚಿನೆಗಳೂರು ಗ್ರಾಮದಲ್ಲಿ ಮಳೆ ನೀರು ನಿಂತ ಪರಿಣಾಮ ತೇವಾಂಶ ಹೆಚ್ಚಾಗಿ ಮನೆ ಕುಸಿದಿದೆ.. ಮಳೆ ಅಬ್ಬರಕ್ಕೆ ಗ್ರಾಮಕ್ಕೆ ಗ್ರಾಮವೇ ಜಲಾವೃತವಾಗಿದೆ.. ಅನೇಕ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸೈರನ್ ಬಿ ತಹಶೀಲ್ದಾರ್ ಎಂಬುವವರಿಗೆ ಸೇರಿದ ಮನೆ ಗೋಡೆ ಕುಸಿದಿದ್ದು, ಮಣ್ಣಿನ ಗೋಡೆ ಹಾಗೂ ಹಂಚು ಬೀಳುವ ದೃಶ್ಯ ಸಾರ್ವಜನಿಕರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಬೆಳಗಾವಿ ಜಿಲ್ಲೆಯ ಸತತವಾಗಿ ಸುರಿದ ಮಳೆಯಿಂದಾಗಿ ರೈತರು ಕಂಗಲಾಗಿದ್ದಾರೆ. ರಾಯಬಾಗ ತಾಲೂಕಿನ ಖೇಮಲಾಪುರ ಗ್ರಾಮದಲ್ಲಿ ಲಕ್ಷಾಂತರ ಮೌಲ್ಯದ ತರಕಾರಿ ಬೆಳೆ ಹಾನಿಯಾಗಿದೆ. ರೈತ ರಾವಸಾಬ ಹೋನವಾಡೆಗೆ ಸೇರಿದ ಟೊಮ್ಯಾಟೊ, ಬದನೆಕಾಯಿ, ಹೀರೇಕಾಯಿ, ಸೌತೆಕಾಯಿ ಬೆಳೆ ನಾಶವಾಗಿದೆ. ಸುಮಾರು 3 ಲಕ್ಷ ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಬೆಳೆ ಇದಾಗಿದ್ದು, ಅಕಾಲಿಕ ಮಳೆಯಿಂದಾಗಿ 20 ಲಕ್ಷ ರೂಪಾಯಿ ಆದಾಯ ಕಳೆದುಕೊಂಡಂತಾಗಿದೆ.

ದಾವಣಗೆರೆ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಚಾನಲ್​ಗಳಲ್ಲಿ ನೀರು ತುಂಬಿ ಹರಿಹರ ಪಟ್ಟಣದ ಕಾಳಿದಾಸ, ಬೆಂಕಿನಗರ ಸೇರಿದಂತೆ ಹಲವೆಡೆ 100ಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿದೆ. 500ಕ್ಕೂ ಅಧಿಕ ಜನರಿಗೆ ನೆಲೆ ಇಲ್ಲದೆ ಪರದಾಡುವಂತಾಗಿದೆ. ಸ್ಥಳಕ್ಕೆ ಶಾಸಕ ಬಿ.ಪಿ.ಹರೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಳಜಿ ಕೇಂದ್ರ ತೆರದು ಸಂತ್ರಸ್ಥರಿಗೆ ನೆರವು ನೀಡುವಂತೆ ಸೂಚನೆ ನೀಡಿದ್ದಾರೆ.

Tags: ballaryBangaloreBelgamChitradurgaHubballiKarnatakaRain FallYellow Aler\
Previous Post

ಮುಡಾ ಹಗರಣದಿಂದ ರಕ್ಷಣೆಗೆ ವಿಶೇಷ ಪೂಜೆ..ಸಿಎಂ ಪ್ರಶ್ನಿಸಿದ ಬಿಜೆಪಿ.

Next Post

ಸೌಮ್ಯಾರೆಡ್ಡಿ ಪದಗ್ರಹಣ ಕಾರ್ಯಕ್ರಮ ಸಿಎಂ ಸಿದ್ದರಾಮಯ್ಯ ಭಾಷಣ

Related Posts

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು
ಕರ್ನಾಟಕ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

by ಪ್ರತಿಧ್ವನಿ
April 23, 2026
0

ಬೆಂಗಳೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಈ ಬಾರಿ ಉತ್ತಮ ಫಲಿತಾಂಶ ಬಂದ ಹಿನ್ನೆಲೆ, ಈ ಹಿಂದೆ ಘೋಷಿಸಲಾಗಿದ್ದ ಮೂರನೇ ಪರೀಕ್ಷೆ (Exam-3)...

Read moreDetails
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post

ಸೌಮ್ಯಾರೆಡ್ಡಿ ಪದಗ್ರಹಣ ಕಾರ್ಯಕ್ರಮ ಸಿಎಂ ಸಿದ್ದರಾಮಯ್ಯ ಭಾಷಣ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada