ರಾಜ್ಯದಲ್ಲಿ ಮುರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಹುತೇಕ ನಾಡಿನ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ನದಿ ತೀರದ ಹಳ್ಳಿಗಳು ಹೊಲಗಳು ಜಲಾಂಮೃತವಾಗಿವೆ. ಆದರೆ ಇಂದು ವರಮಹಾಲಕ್ಷ್ಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿರುವ ಜನರಿಗೆ ಮಳೆ ಬಿಸಿ ತಟ್ಟಲಿದೆ. ಹೌದು, ಇಂದು ಮತ್ತು ನಾಳೆ ರಾಜ್ಯಾದ್ಯಂತ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
![](https://pratidhvani.com/wp-content/uploads/2022/05/city-rain-dh-1549743826-1024x683.jpg)
ಕರಾವಳಿ ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಸಮುದ್ರಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಇನ್ನುಳಿದಂತೆ ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.