ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ(Silicon City) ಮೋಡಿ ಕವಿದ ವಾತಾವರಣ ಮುಂದುವರೆದಿದ್ದು, ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(Weather Forecast) ವರದಿ ನೀಡಿದೆ.
![](https://pratidhvani.com/wp-content/uploads/2023/06/fdfdfddd-1.png)
ಸದ್ಯ ಮಲೆನಾಡಿನಂತೆ ಕಂಗೊಳಿಸುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ(Bengaluru) ಮಳೆ ಮುಂದುವರಿಯುವ ಸಾಧ್ಯತೆ ಹೆಚ್ಚಿದೆ ಎಂದು ಸೂಚನೆ ನೀಡಲಾಗಿದ್ದು, ದುರ್ಬಲಗೊಂಡಿದ್ದ ಮಾನ್ಸೂನ್ ಇಂದಿನಿಂದ ಮತ್ತಷ್ಟು ಚುರುಕುಗೊಳ್ಳಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.
![](https://pratidhvani.com/wp-content/uploads/2023/06/fdddffdd-1.png)
ಮಂಗಳವಾರ ರಾಜ್ಯದ ಹಲವೆಡೆ ಮಳೆಯಾಗಿದ್ದು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು,ಮಂಡ್ಯ, ರಾಮನಗರ, ಕೊಡಗು, ಹಾಸನ ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಗುಡುಗು-ಮಿಂಚು ಸಹಿತ ಭಾರಿ ಮಳೆಯ ಮುನ್ಸೂಚನೆಯನ್ನು ನೀಡಲಾಗಿದೆ.