
ಬೆಳಗಾವಿ:ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದ್ದು, ಬಿಜೆಪಿ ಅಧಿಕಾರವಧಿಯಲ್ಲಿ ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು.ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಹೇಳಿದೆ ಎಂದು ಸಿಎಂ(CM) ಸಿದ್ದರಾಮಯ್ಯ ಹೇಳಿದರು.ಬೆಳಗಾವಿ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಮಾತನಾಡಿದರು.

ಯಡಿಯೂರಪ್ಪ, ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ವಕ್ಫ್ ಆಸ್ತಿ ತೆರವುಗೊಳಿಸಲು ನೋಟಿಸ್ ಗಳನ್ನು ಕೊಡಲಾಗಿದೆ. ಹೀಗಾಗಿ ಬಿಜೆಪಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.

once a waqf property Always a waqf property ಅಂತ ಸುಪ್ರೀಂಕೋರ್ಟ್ ಜಡ್ಜ್ ಮೆಂಟ್ ಬಂದಿವೆ ಎಂದ ಅವರು, ಸಚಿವ ಜಮೀರ್ ಈ ಬಗ್ಗೆ ಸಮರ್ಥವಾಗಿ ಉತ್ತರ ನೀಡುತ್ತಾರೆ. ಅಲ್ಲದೇ, ಪರಿಷತ್ನಲ್ಲಿ ಈಗಾಗಲೇ ಉತ್ತರ ಕೊಟ್ಟಿದ್ದಾರೆ ಎಂದರು. ಸತ್ಯದ ದಾಖಲೆಗಳನ್ನು, ಅಂಕಿ ಅಂಶಗಳನ್ನು ಜನರ ಮುಂದಿಟ್ಟು ಎದೆ ಎತ್ತಿ ಸತ್ಯ ಹೇಳಿ ಎಂದು ತಮ್ಮ ಸಚಿವರಿಗೆ ಕರೆ ಸಿಎಂ ಕರೆ ನೀಡಿದರು.
ಉತರ ಕರ್ನಾಟಕ ಅಭಿವೃದ್ಧಿ ಬಿಜೆಪಿ ಮಾಡಿಲ್ಲ:
ಬಿಜೆಪಿ 9 ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ, ಸಮ್ಮಿಶ್ರ ಸರ್ಕಾರದಲ್ಲಿದ್ದಾಗಲೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡಲಿಲ್ಲ. ಪ್ರಾದೇಶಿಕ ತಾರತಮ್ಯ ಹೋಗಲಾಡಿಸಲು ಬಿಜೆಪಿ ಪ್ರಯತ್ನವನ್ನೇ ಮಾಡಲಿಲ್ಲ. ನಂಜುಂಡಪ್ಪ ಅವರ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ತಾಲ್ಲೂಕುಗಳು ಇರುವುದೇ ಉತ್ತರ ಕರ್ನಾಟಕದಲ್ಲಿ 176 ರಲ್ಲಿ 116 ತಾಲ್ಲೂಕುಗಳು ಹಿಂದುಳಿದಿವೆ. ಇವುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಕೊಡಬೇಕು ಅಂತಲೂ ಹೇಳಿದ್ದಾರೆ ಎಂದು ವರದಿ ಆಧರಿಸಿ ಸಿದ್ದರಾಮಯ್ಯ ಮಾತನಾಡಿದರು.
ನಂಜುಂಡಪ್ಪ ಅವರ ವರದಿಯ ಅನುಷ್ಠಾನ ಮತ್ತು ಸಾಮಾಜಿಕ, ಆರ್ಥಿಕ ಬದಲಾವಣೆ ಕುರಿತಂತೆ ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಅವರ ಸಮಿತಿಯನ್ನು ರಚಿಸಲಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ 371ಜೆ ಸಂವಿಧಾನ ತಿದ್ದುಪಡಿ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರದಲ್ಲಿದ್ದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಎಲ್.ಕೆ.ಅಡ್ವಾಣಿ ಅವರು ತಿರಸ್ಕರಿಸಿದ್ದರು. ಇದು ಬಿಜೆಪಿಯ ಸತ್ಯವಾದ ಮುಖ. ವಿಶೇಷ ಸ್ಥಾನಮಾನಕ್ಕಾಗಿ ಹೋರಾಟ ನಡೆಸಿದ್ದು, ಕಾನೂನು ಮಾಡಿದ್ದು, ಜಾರಿ ಮಾಡಿದ್ದೆಲ್ಲಾ ಕಾಂಗ್ರೆಸ್ ಸರ್ಕಾರವೇ. ಈಗ ಹೊಸದಾದ ಗೋವಿಂದರಾವ್ ಸಮಿತಿ ರಚಿಸಿರುವುದೂ ನಮ್ಮದೇ ಸರ್ಕಾರ ಎಂದರು.
ರೋಣದಲ್ಲಿ 200 ಕೋಟಿ, ಹೆಚ್.ಡಿ.ಕೋಟೆಯಲ್ಲಿ ನೂರಾರು ಕೋಟಿ, ತುಮಕೂರಿನಲ್ಲಿ 1700 ಕೋಟಿ ರೂಪಾಯಿಯ ಅಭಿವೃದ್ಧಿ ಕೆಲಸಗಳನ್ನು ನಾವೇ ಉದ್ಘಾಟಿಸಿದ್ದೀವಿ. ಇವು ಉದಾಹರಣೆಗಳಷ್ಟೆ. ಪ್ರತೀ ಜಿಲ್ಲೆ, ಪ್ರತೀ ತಾಲ್ಲೂಕುಗಳಲ್ಲೂ ನೂರಾರು ಕೋಟಿಯ ಅಭಿವೃದ್ಧಿ ಕಡಲಸಗಳು ನಿರಂತರವಾಗಿ ಉದ್ಘಾಟನೆ ಆಗುತ್ತಲೇ ಇವೆ.ಬಜೆಟ್ಟಿನಲ್ಲಿ 120000 ಕೋಟಿ ಅಭಿವೃದ್ಧಿ ಹಣ ತೆಗೆದಿಡಲಾಗಿದೆ. ಕೆಲಸಗಳು ನಿರಂತರವಾಗಿ ನಡೆಯುತ್ತಲೇ ಇವೆ. 52009 ಕೋಟಿ ರೂಪಾಯಿ ಗ್ಯಾರಂಟಿಗಳ ಮೂಲಕ ಜನರ ಜೇಬಿಗೆ, ಜನರ ಖಾತೆಗೆ ನೇರವಾಗಿ ಜಮೆ ಆಗುತ್ತಿದೆ. ಹೀಗಾಗಿ ಅಭಿವೃದ್ಧಿ ಪರ್ವ ರಾಜ್ಯದಲ್ಲಿ ನಿರಂತರತೆ ಕಾಯ್ದುಕೊಂಡಿದೆ.
ಅವರು ಅಧಿಕಾರದಲ್ಲಿದ್ದಾಗ ನಾವು ಕೇಳಿದ ಒಂದನ್ನೂ CBI ತನಿಖೆಗೆ ಕೊಡಲಿಲ್ಲ. ಈಗ ಮತ್ತೆ ಅದೇ CBI ರಾಗ ಎಖೆಯುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು CBI ಅನ್ನು “ಚೋರ್ ಬಚಾವೋ ಸಂಸ್ಥೆ” ಎಂದಿದ್ದರು. ಈಗ ಇವರಿಗೆ CBI ಮೇಲೆ ಪ್ರೀತಿ ಬಂದಿದೆ ಎಂದರು.
ಜನ ಸಂಪರ್ಕ ಸಭೆ ಹೆಚ್ಚೆಚ್ಚು ಮಾಡಿ:ನಮ್ಮ ಸಚಿವರು ಮತ್ತು ಶಾಸಕರು ಅವರವರ ಉಸ್ತುವಾರಿಯ ಜಿಲ್ಲೆಗಳಲ್ಲಿ, ಕ್ಷೇತ್ರಗಳಲ್ಲಿ ಹೆಚ್ಚೆಚ್ಚು ಜನಸಂಪರ್ಕ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಬಗೆಹರಿಸಿ. ಹಣಕ್ಕೆ ಸಮಸ್ಯೆ ಇಲ್ಲ. ಹಣ ಇದೆ. ಜನರ ಕೆಲಸ ಮಾಡಿ ಎಂದರು.










