ಇತ್ತೀಚಿಗೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದ ಸಾರ್ವಜನಿಕ ಸಮಾವೇಶವೊಂದರಲ್ಲಿ ಕತ್ತಿ ಹಿಡಿದ ಆರೋಪದ ಮೇಲೆ ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಸೇರಿದಂತೆ ಮೂವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್ ಠಾಕ್ರೆ, ಥಾಣೆ ನಗರಾಧ್ಯಕ್ಷ ರವೀಂದ್ರ ಮೋರೆ ಹಾಗೂ ಪಾಲ್ಫರ್ ಜಿಲ್ಲಾಧ್ಯಕ್ಷ ಅವಿನಾಶ್ ಜಾಧವ್ ವಿರುದ್ದ IPC ಸೆಕ್ಷನ್ 4 ಮತ್ತು 25ರ ಅಡಿಯಲ್ಲಿ ಪ್ರಕರಣವನ್ನ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ಸಂಜೆ ಥಾಣೆ ನಗರದ ಗಡ್ಕರಿ ಚೌಕ್ನಲ್ಲಿ ನಡೆದ ಸಮಾವೇಶದಲ್ಲಿ ಸ್ಥಳೀಯ ಮುಖಂಡರು ಕತ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ಪೊಲೀಸರು ದಾಖಲಿಸಿರುವ ದೂರಿನಲ್ಲಿ ಆರೋಪಿಸಲಾಗಿದೆ.