• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Ravi Shankar: ಜುಲೈ 4 ರಂದು ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” ಚಿತ್ರ ಬಿಡುಗಡೆ. .

ಪ್ರತಿಧ್ವನಿ by ಪ್ರತಿಧ್ವನಿ
June 28, 2025
in Top Story, ಅಂಕಣ, ಇದೀಗ, ಕರ್ನಾಟಕ, ವಾಣಿಜ್ಯ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಆರ್ ಅನಂತರಾಜು (R Anantharaju) ನಿರ್ದೇಶನದ ಈ ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನಟ ರವಿಶಂಕರ್(Ravi Shankar).

ADVERTISEMENT

“ಇನಿಫಿನಿಟಿ ಕ್ರಿಯೇಷನ್ಸ್” ಸಂಸ್ಥೆ ಲಾಂಛನದಲ್ಲಿ ನಿರ್ಮಾಣವಾಗಿರುವ, “ಅಪ್ಪು‌ ಪಪ್ಪು(Appu Pappu)”, ” ಮಸ್ತ್ ಮಜಾ ಮಾಡಿ(Mast Maja Madi)”, “ನಂದ” ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಆರ್ ಅನಂತರಾಜು ನಿರ್ದೇಶನದ ಹಾಗೂ “ಜಿಂದಗಿ” ಚಿತ್ರದ ನಂತರ ರಾಜೀವ್ ರೆಡ್ಡಿ ನಾಯಕನಾಗಿ ನಟಿಸಿರುವ “ಕ್ಯಾಪಿಟಲ್ ಸಿಟಿ” ಚಿತ್ರ‌ ಇದೇ ಜುಲೈ 4 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು.

ಮೊದಲು ಮಾತನಾಡಿದ ಖ್ಯಾತ ನಟ ರವಿಶಂಕರ್, ಈ ಚಿತ್ರದ ಜರ್ನಿ ಚೆನ್ನಾಗಿತ್ತು. ಚಿತ್ರದ ತುಣುಕುಗಳನ್ನು ನೋಡಿದಾಗ ನಾಯಕ ರಾಜೀವ್ ರೆಡ್ಡಿ ಅವರ ಅಭಿನಯ ಬಹಳ ಇಷ್ಟವಾಯಿತು. ನನ್ನದು ಈ ಚಿತ್ರದಲ್ಲಿ ವಿಭಿನ್ನ ಪಾತ್ರ. ಜುಲೈ 4 ರಂದು ಬಿಡುಗಡೆಯಾಗುತ್ತಿರುವ ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

ಇದು ನನ್ನ ನಿರ್ದೇಶನದ 11 ನೇ ಚಿತ್ರ. ರವಿಶಂಕರ್ ಅವರು ಬಹಳ ವರ್ಷಗಳ ಪರಿಚಯ. ಆದರೆ ಅವರ ಜೊತೆಗೆ ಕೆಲಸ ಮಾಡಿರುವುದು ಇದೇ ಮೊದಲು. ಚಿತ್ರ ಅಂದುಕೊಂಡ ಹಾಗೆ ಮೂಡಿಬರಲು ನಿರ್ಮಾಪಕರು ಹಾಗೂ ಇಡೀ ತಂಡದ‌ ಸಹಕಾರವೇ ಕಾರಣ. ಇದೊಂದು ಬೆಂಗಳೂರು ಭೂಗತ ಜಗತ್ತಿನ ಸುತ್ತ ನಡೆಯುವ ಕಥೆ. 90 ರ ಕಾಲಘಟ್ಟದ ಕಥೆಯೂ ಹೌದು. ತೊಂದರೆಗೀಡಾದ ನಾಯಕ ಹೇಗೆ ತನ್ನ ಕಷ್ಟವನ್ನು ನಿಭಾಯಿಸಿಕೊಂಡು ಬರುತ್ತಾನೆ ಎನ್ನುವುದೇ ಪ್ರಮುಖ ಕಥಾಹಂದರ. ಆಕ್ಷನ್ ಚಿತ್ರ ಎನಿಸಿದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ರಾಜೀವ್ ರೆಡ್ಡಿ ಈ ಚಿತ್ರದ ನಾಯಕನಾಗಿ ನಟಿಸಿದ್ದು, ಪ್ರೇರಣ ನಾಯಕಿಯಾಗಿ ಅಭಿನಯಿಸಿದ್ದಾರೆ. ಸುಮನ್, ರವಿಶಂಕರ್, ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್ ಮುಂತಾದ ಹಿರಿಯ ನಟರು ಈ ಚಿತ್ರದಲ್ಲಿದ್ದಾರೆ. ಕರ್ನಲ್ ರಾಜೇಂದ್ರ ಅವರು ಸೇರಿದಂತೆ ಚಿತ್ರ‌ದ ಕೆಲವು ನಿರ್ಮಾಪಕರು ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಜುಲೈ 4 ರಂದು ನಮ್ಮ ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ ಎಂದು ನಿರ್ದೇಶಕ ಅನಂತರಾಜು ತಿಳಿಸಿದರು.

ಇದೊಂದು ರಿವೆಂಜ್ ಸ್ಟೋರಿ. ನಿಮಗೆ ತೊಂದರೆಯಾದಾಗ ನಿಮ್ಮನ್ನು ನೀವು ಹೇಗೆ ಕಾಪಾಡಿಕೊಳ್ಳುತ್ತೀರಾ ಎಂಬುದೆ ಪ್ರಮುಖ ಕಥಾಹಂದರ.‌ ರವಿಶಂಕರ್, ಸುಮನ್ ಮುಂತಾದ ಹಿರಿಯ ಕಲಾವಿದರೊಂದಿಗೆ ಅಭಿನಯಿಸಿದ್ದು ಬಹಳ ಖುಷಿಯಾಗಿದೆ. ದಯವಿಟ್ಟು ಎಲ್ಲರೂ ನಮ್ಮ ಚಿತ್ರವನ್ನು ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದು ನಾಯಕ ರಾಜೀವ್ ರೆಡ್ಡಿ ಹೇಳಿದರು.

ನಿರ್ಮಾಪಕರಾದ ಮಂಜುನಾಥ್(Manjunath), ಕೃಷ್ಣಮೂರ್ತಿ(Krishna Murthy) ಹಾಗೂ ಕರ್ನಲ್ ರಾಜೇಂದ್ರ (Karnal Rajendra) ಅವರು ಮಾತನಾಡಿ‌, ಇಡೀ ಚಿತ್ರತಂಡದ ಸಹಕಾರದಿಂದ ನಮ್ಮ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಜುಲೈ 4 ರಂದು ನಮ್ಮ ಚಿತ್ರ 200 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ.‌ ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಲ್ಲೇ ಚಿತ್ರ ನೋಡಿ ಎಂದರು. ಸಂಗೀತ ನಿರ್ದೇಶಕ ನಾಗ್ ಹಾಗೂ ಛಾಯಾಗ್ರಾಹಕ ಪ್ರದೀಪ್ ಪತ್ರಿಕಾಗೋಷ್ಠಿಯಲ್ಲಿದ್ದರು.

Tags: Appu Pappucapital cityInfinity CreationsKannada movieKS SridharR AnantharajuRajeev ReddyravishankarsandalwoodSharath LohitashvaSUman
Previous Post

Gym Ravi: ಅಪ್ಪನ ಆಸೆ ಈಡೇರಿಸಲು 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ಜಿಮ್ ರವಿ.

Next Post

Raj B Shetty: ಜನರ ಮನ ಸೆಳೆದ ರಾಜ್ ಬಿ ಶೆಟ್ಟಿ ಅವರ ಸು ಫ್ರಮ್ ಸೋ ಚಿತ್ರದ ವಿಡಿಯೋ ಸಾಂಗ್..!!

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post

Raj B Shetty: ಜನರ ಮನ ಸೆಳೆದ ರಾಜ್ ಬಿ ಶೆಟ್ಟಿ ಅವರ ಸು ಫ್ರಮ್ ಸೋ ಚಿತ್ರದ ವಿಡಿಯೋ ಸಾಂಗ್..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada