Tamil ನಟ ದಳಪತಿ ವಿಜಯ್ (Vijay) ರಾಜಕಾರಣಕ್ಕೆ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ. ಸಹಜವಾಗಿಯೇ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗಿದೆ. ಈ ಸಂದರ್ಭದಲ್ಲಿ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿರುವ ವಿಜಯ್ ಅವರಿಗೆ ಹೆಸರಾಂತ ನಟ ರಜನಿಕಾಂತ್ (Rajinikanth) ಅಭಿನಂದನೆ ಸಲ್ಲಿಸಿದ್ದಾರೆ. ರಾಜಕಾರಣಕ್ಕೆ ಶುಭಾಶಯ ಹೇಳಿದ್ದಾರೆ.

Vijay Thalapathy ಅವರು ಸಾಕಷ್ಟು ಸಮಯದಿಂದ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು. ಈಗ ‘ತಮಿಳಿಗ ವೆಟ್ರಿ ಕಳಗಂ’ ಎಂಬ ಪಕ್ಷ ಸ್ಥಾಪಿಸಿ ವಿಜಯ್ ರಾಜಕೀಯ ಅಖಾಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇದೀಗ ಈ ಹಿಂದೆ ಅವರು ನೀಡಿರುವ ಹೇಳಿಕೆಯೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ನೀವು ನಿಜ ಜೀವನದಲ್ಲಿ ಮುಖ್ಯಮಂತ್ರಿಯಾದರೆ ಏನಾಗುತ್ತದೆ ಎಂದು ಕೇಳಲಾಗಿತ್ತು. ಈ ಪ್ರಶ್ನೆ ವಿಜಯ್, ಸಿಎಂ ಆದರೆ ʻನಾನು ಎಂದಿಗೂ ನಟಿಸುವುದಿಲ್ಲ’ ಎಂದು ಉತ್ತರಿಸಿದ್ದರು. ರಾಜಕೀಯಕ್ಕೆ ವಿಜಯ್ ಎಂಟ್ರಿ ಕೊಟ್ಟಿರೋ ಬೆನ್ನಲ್ಲೇ ಸಿಎಂ ಸ್ಥಾನದ ಕುರಿತು ನೀಡಿದ್ದ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.
#Thalapathyvijay #Rajinikanth #Tamilnadu #Politics #TVK






