ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರಜನಿಕಾಂತ್ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನಿನ್ನೆ ಮಧ್ಯರಾತ್ರಿ ತಲೈವಾ ರಜನಿಕಾತ್ ಆಸ್ಪತ್ರೆಗೆ ದಾಖಲಾಗಿದ್ದಾರೆ.ವೈದ್ಯ ಡಾ. ಸಾಯಿ ಸತೀಶ್ ಅವರು ರಜನಿಕಾಂತ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ರಜನಿಕಾಂತ್ಗೆ ಕಾರ್ಡಿಯಾಕ್ ಕ್ಯಾಥ್ ಲ್ಯಾಬ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೂ ದಾಖಲಾಗುವುದಕ್ಕೂ ಮುನ್ನ ರಜನಿಕಾಂತ್ ಅಭಿನಯಿಸಿರುವ ವೆಟ್ಟೈಯನ್ ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ರಜನಿಕಾಂತ್ಗೆ 73 ವರ್ಷ ವಯಸ್ಸು ಆಗಿದೆ. ಇಂದು ಸಂಜೆ ಅಥವಾ ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಪತ್ನಿ ಬೆನ್ನಲ್ಲೇ ‘ಮಲ್ಲಿಕಾರ್ಜುನ ಖರ್ಗೆ’ಯಿಂದಲೂ ‘5 ಎಕರೆ ಸರ್ಕಾರಿ ಭೂಮಿ’ ವಾಪಸ್!
ಬೆಂಗಳೂರು:ಮುಡಾ ಹಗರಣದ ಕಾನೂನು ಸಂಕಷ್ಟ ಬಿಗಿಯಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ತಮಗೆ ಮುಡಾದಿಂದ ನೀಡಿದ್ದಂತ 14 ಸೈಟ್ ಗಳನ್ನು ವಾಪಾಸ್ ಮಾಡಿದ್ದರು.ಇದೇ ಹಾದಿಯನ್ನು ಎಐಸಿಸಿ ಅಧ್ಯಕ್ಷ...
Read more