ಕೊಚ್ಚಿಯ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ, ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಚಿವ ರಾಜೀವ್ ಚಂದ್ರಶೇಖರ್ ಅವರ ಹೇಳಿಕೆಯೊಂದು ಸಮಾಜದ ವಿವಿಧ ಸಮುದಾಯಗಳ ನಡುವೆ ದ್ವೇಷವನ್ನು ಹುಟ್ಟಿಸುವಂಥದ್ದು ಎಂದು ಕೇರಳ ಕಾಂಗ್ರೆಸ್ ನ ಡಿಜಿಟಲ್ ಮೀಡಿಯಾ ಸಂಚಾಲಕ ಪಿ. ಸರಿನ್ ಅವರು ನೀಡಿದ ದೂರಿನ ಆಧಾರದ ಮೇಲೆ ಎರ್ನಾಕುಲಂ ಸೆಂಟ್ರಲ್ ಪೋಲಿಸರು ಕೇಂದ್ರ ಸಚಿವರ ವಿರುದ್ಧ ಎರಡನೇ ಪ್ರಕರಣ ದಾಖಲಿಸಿದ್ದಾರೆ.

ಈ ಮೊದಲು ಎರಡು ದಿನಗಳ ಹಿಂದೆ ಇದೇ ವಿಷಯಕ್ಕೆ ದೂರು ದಾಖಲಾಗಿತ್ತು.





