ಇಂದು ಶನಿವಾರ ರಾಜೀವ್ ಗಾಂಧಿ ಅವರ ಪುಣ್ಯತಿಥಿ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ರಾಜೀವ್ ಗಾಂಧಿಯವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
ಹೌದು, ಮಾಜಿ ಪ್ರಧಾನಿ, ದಿವಂಗತ ರಾಜೀವ್ ಗಾಂಧಿ ಅವರ 31ನೇ ಪುಣ್ಯಸ್ಮರಣೆ ದಿನವಾದ ಇಂದು ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ ಸ್ಮರಿಸಿದ್ದಾರೆ. ನಮ್ಮ ಮಾಜಿ ಪ್ರಧಾನಿ ಶ್ರೀ ರಾಜೀವ್ ಗಾಂಧಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇಂದಿರಾ ಗಾಂಧಿ ಹತ್ಯೆ ಬಳಿಕ ದೇಶದ ಪ್ರಧಾನಿಯಾಗಿ ರಾಜೀವ್ ಗಾಂಧಿ ಅಧಿಕಾರ ವಹಿಸಿಕೊಂಡರು. 1984 ರಿಂದ 1989 ರವರೆಗೆ ಪ್ರಧಾನಿಯಾಗಿದ್ದರು. ಅತ್ಯಂ ತ ಕಿರಿಯ ವಯಸ್ಸಿಗೆ ಪ್ರಧಾನಿಯಾಗಿದ್ದರು. 1991ರ ಮೇ 21ರಂದು ರಾಜೀವ್ ಗಾಂಧಿ ಹತ್ಯೆಗೀಡಾದರು.