• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ರಾಜೀವ್‌ ಗಾಂಧಿ ದೇಶದ ಸಮಗ್ರತೆಗೆ ದುಡಿದರು: ಸಿಎಂ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
August 20, 2023
in ಇದೀಗ, ಕರ್ನಾಟಕ, ರಾಜಕೀಯ
0
ರಾಜೀವ್‌ ಗಾಂಧಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ರಾಜೀವ್‌ ಗಾಂಧಿ ಅವರಿಗೆ ಪುಷ್ಪನಮನ

Share on WhatsAppShare on FacebookShare on Telegram

ಭಾರತೀಯರನ್ನು 21 ನೇ ಶತಮಾನದ ಸವಾಲುಗಳನ್ನು ಎದುರಿಸಲು ಸಜ್ಜುಗೊಳಿಸಿದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ದೇಶದ ಸಮಗ್ರತೆಗೆ ದುಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ADVERTISEMENT

ಕೆಪಿಸಿಸಿ ಕಚೇರಿಯಲ್ಲಿ ಭಾನುವಾರ (ಆಗಸ್ಟ್ 20) ಹಮ್ಮಿಕೊಂಡಿದ್ದ ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ರಾಜೀವ್‌ ಮತ್ತು ದೇವರಾಜು ಅರಸು ವಿಧಾನಸೌಧದ ಕನಸು ಕಾಣಲೂ ಅಶಕ್ತರಾಗಿದ್ದ ಜಾತಿಗಳು ಗೆದ್ದು ವಿಧಾನಸಭೆ ಪ್ರವೇಶಿಸುವಂತೆ ಮಾಡಿದ ದೇವರಾಜು ಅರಸರು ಪ್ರಜಾತಂತ್ರದ ರೂವಾರಿಗಳು ಎಂದು ಬಣ್ಣಿಸಿದರು.

ದೂರದೃಷ್ಟಿಯ ನಾಯಕ ರಾಜೀವ್ ಗಾಂಧಿ ಮತದಾನದ ವಯಸ್ಸನ್ನು 18 ವರ್ಷಕ್ಕೆ ಇಳಿಸಿದರು. ಆ ಮೂಲಕ ಯುವ ಸಮೂಹ ದೇಶದ ಭವಿಷ್ಯ ರೂಪಿಸುವಲ್ಲಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಮಹಾನ್ ಜವಾಬ್ದಾರಿಯಲ್ಲಿ ಪಾಲ್ಗೊಳ್ಳುವಂತೆ ಮಾಡಿದರು.

ದೇಶದ ಎಲ್ಲಾ ರಂಗಗಳಲ್ಲೂ ಯುವ ಸಮೂಹ ಮತ್ತು ಎಲ್ಲಾ ಜಾತಿ, ಜನ ವರ್ಗಗಳ ಪ್ರತಿನಿಧಿಗಳು ಪಾಲ್ಗೊಳ್ಳುವಿಕೆಯ ಮಹಾದ್ವಾರವನ್ನು ತೆರೆದವರು ರಾಜೀವ್ ಗಾಂಧಿ. ಇದಕ್ಕಾಗಿ ಅಧಿಕಾರ ವಿಕೇಂದ್ರೀಕರಣ ಜಾರಿ ಮಾಡಿದರು. ಸಂವಿಧಾನಕ್ಕೆ ತಿದ್ದುಪಡಿ ತಂದು ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ತಂದರು. ಮಹಿಳೆಯರ ರಾಜಕೀಯ ಪ್ರಾತಿನಿಧ್ಯದ ಅವಕಾಶವನ್ನು ಮೊದಲ ಬಾರಿಗೆ ದೊಡ್ಡ ಮಟ್ಟದಲ್ಲಿ ವಿಸ್ತರಿಸಿದವರು ರಾಜೀವ್ ಗಾಂಧಿ. ಇಂದು ರಾಜಕೀಯ ಕ್ಷೇತ್ರದಲ್ಲಿ ಇರುವ ಮಹಿಳೆಯರೆಲ್ಲರೂ ರಾಜೀವ್ ಗಾಂಧಿ ಅವರನ್ನು ಸ್ಮರಿಸಬೇಕು. ಶೇ50 ಮಹಿಳಾ ಮೀಸಲಾತಿ ಸಾಧ್ಯ ಆಗಿದ್ದು ರಾಜೀವ್ ಅವರಿಂದ ಎನ್ನುವುದನ್ನು ದೇಶದ ಪ್ರತಿಯೊಬ್ಬ ಮಹಿಳೆಯರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಮಾಹಿತಿ ತಂತ್ರಜ್ಞಾನ ಮತ್ತು ಇಂಟರ್ನೆಟ್ ವ್ಯವಸ್ಥೆಯಲ್ಲಿ ಭಾರತದಲ್ಲಿ ಕ್ರಾಂತಿ ಮಾಡಿದವರು ರಾಜೀವ್ ಅವರು. ಅವರು ಭವ್ಯ ಭಾರತ ನಿರ್ಮಾಣದ ಮತ್ತು ಸಾಮಾಜಿಕ ನ್ಯಾಯದ ಸಮಾಜವನ್ನು ರೂಪಿಸುವ ಮಹಾನ್ ಕನಸು ಮತ್ತು ಕಾರ್ಯಕ್ರಮಗಳನ್ನು ಇಟ್ಟುಕೊಂಡಿದ್ದರು. ಅವೆಲ್ಲಾ ಜಾರಿ ಮಾಡುತ್ತಿದ್ದ ಹೊತ್ತಲ್ಲೇ ಹುತಾತ್ಮರಾಗಿ ಈ ನೆಲದ ಮಣ್ಣಿನಲ್ಲಿ ತ್ಯಾಗಮಯಿಯಾಗಿ ದಾಖಲಾದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.

ದೇಶಕ್ಕಾಗಿ, ದೇಶದ ಸಮಗ್ರತೆಗಾಗಿ ಹೋರಾಟ ಮಾಡಿದ, ತ್ಯಾಗ ಮಾಡಿದ, ಹುತಾತ್ಮರಾದ ಇತಿಹಾಸ, ಚರಿತ್ರೆ ಇರುವುದು ಕಾಂಗ್ರೆಸ್ಸಿಗೆ ಮಾತ್ರ. ಈ ಯಾವ ಚರಿತ್ರೆ ಮತ್ತು ಇತಿಹಾಸ ಬಿಜೆಪಿಗೂ ಇಲ್ಲ. ಸಂಘ ಪರಿವಾರಕ್ಕೂ ಇಲ್ಲ. ಕೇವಲ ಭರ್ಜರಿ ಭಾಷಣ ಮಾಡುವುದರಲ್ಲಿ ಮಾತ್ರ ಬಿಜೆಪಿ ಪರಿವಾರದವರು ನಿಸ್ಸೀಮರು. ದೇಶ ನಿರ್ಮಾಣ ಕ್ರಿಯೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರದ ಪಾತ್ರ ಏನೇನೂ ಇಲ್ಲ. ಕೇವಲ ಭಾಷಣಗಳಿಂದ ದೇಶ ನಿರ್ಮಾಣ ಸಾಧ್ಯವಿಲ್ಲ ಎಂದರು.

“ದೇವರಾಜ ಅರಸು ಅವರಿಗೆ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವ ಛಲ ಇತ್ತು. ಹೀಗಾಗಿ ಮಲ ಹೊರುವ ಪದ್ಧತಿ ನಿಲ್ಲಿಸಿದರು. ಜೀತ ವ್ಯವಸ್ಥೆಗೆ ಮುಕ್ತಿ ಹಾಡಿದರು. ಹಿಂದುಳಿದ ಸಮುದಾಯಗಳ ಮೀಸಲಾತಿಗಾಗಿ ಹಾವನೂರು ಆಯೋಗ ರಚಿಸಿದರು. ಉಳುವವನೇ ಭೂ ಒಡೆಯ ಕಾನೂನು ಜಾರಿ ಮಾಡಿದರು”.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನಿಂದ ಆಹ್ವಾನ ಊಹಾಪೋಹ: ಸುಮಲತಾ ಅಂಬರೀಶ್

“ಯಾರು ವಿಧಾನಸೌಧದ ಕನಸು ಕಾಣಲೂ ಸಾಧ್ಯ ಇರಲಿಲ್ಲವೂ ಅಂತಹ ಜಾತಿಗಳ ಪ್ರತಿನಿಧಿಗಳು ವಿಧಾನಸೌಧಕ್ಕೆ ಆರಿಸಿ ಬಂದು ಮಂತ್ರಿಗಳಾಗುವ ಹಾಗೆ ಕ್ರಾಂತಿ ಮಾಡಿದವರು ಅರಸು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜೀವ್‌ ಗಾಂಧಿ ಹಾಗೂ ದೇವರಾಜ ಅರಸು ಕುರಿತ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ಮಧು ಬಂಗಾರಪ್ಪ, ಬೋಸ್ ರಾಜ್, ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್ , ಮಾಜಿ ಸಚಿವ ಎಚ್.ಎಂ.ರೇವಣ್ಣ ಉಪಸ್ಥಿತರಿದ್ದರು.

Tags: CM SiddaramaiahD Devaraja ArasuKPCCRajiv GandhiRajiv Gandhi Birth Anniversaryಕೆಪಿಸಿಸಿಮುಖ್ಯಮಂತ್ರಿ ಸಿದ್ದರಾಮಯ್ಯರಾಜೀವ್‌ ಗಾಂಧಿರಾಜೀವ್‌ ಗಾಂಧಿ ಜನ್ಮ ದಿನಾಚರಣೆ
Previous Post

ರಾಜೀವ್‌ ಗಾಂಧಿ ಜನ್ಮ ದಿನ | ರಾಹುಲ್‌, ಸೋನಿಯಾ ಪುಷ್ಪನಮನ

Next Post

ಕರ್ನಾಟಕ, ಕೇರಳ ಗಡಿಯುದ್ದಕ್ಕೂ ನಡೆಯುತ್ತಿದೆ ತ್ಯಾಜ್ಯ ದಂಧೆ

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ತ್ಯಾಜ್ಯ ದಂಧೆ

ಕರ್ನಾಟಕ, ಕೇರಳ ಗಡಿಯುದ್ದಕ್ಕೂ ನಡೆಯುತ್ತಿದೆ ತ್ಯಾಜ್ಯ ದಂಧೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada