ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಜೋರಾಗಿದ್ದು, ಟಿಕೆಟ್ ಕೈ ತಪ್ಪಿದ ಕಾರಣ ಬಂಡಾಯದ ಅಲೆಯೂ ಎದ್ದಿದೆ. ಇದೀಗ ಕಾಂಗ್ರೆಸ್ಗೆ ಮತ್ತೊಂದು ಆಘಾತವಾಗಿದೆ. ಟಿಕೆಟ್ ಸಿಗದ ಕಾರಣ ಪಕ್ಷದ ಹಿರಿಯ ನಾಯಕ, ಮಾಜಿ ಸಭಾಪತಿ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜನಂದಿನಿ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.