ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್, ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದ ಬೆನ್ನಲ್ಲೇ ಜೆಡಿಎಸ್ ಅಭ್ಯರ್ಥಿಯಾಗಿ ಕುಪ್ಪೇಂದ್ರ ರೆಡ್ಡಿ ಅವರ ಹೆಸರು ಅಂತಿಮ ಆಗಿದೆ ಎನ್ನಲಾಗಿದೆ.
ಹೌದು, ನಾಳೆ ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಜೆಡಿಎಸ್ ತನ್ನ ಅಭ್ಯರ್ಥಿಯಾಗಿ ಕುಪ್ಪೇಂದ್ರ ರೆಡ್ಡಿ ಅವರನ್ನು ಕಣಕ್ಕಿಳಿಯಲು ನಿರ್ಧರಿಸಲಾಗಿದೆ ಎನ್ನಲಾಗಿದ್ದು. ಕುಪ್ಪೇಂದ್ರ ರೆಡ್ಡಿ ಜೆಡಿಎಸ್‍ನಿಂದ ಬಿ ಫಾರಂ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆಯಿದೆ.
ಈಗಾಗಲೇ ಕುಪ್ಪೇಂದ್ರ ರೆಡ್ಡಿ ಅವರು ಕಾಂಗ್ರೆಸ್ ನಾಯಕರ ಬೆಂಬಲ ಕೋರಿದ್ದಾರೆ. ಕಾಂಗ್ರೆಸ್ ನಡೆ ಮೇಲೆ ಮುಂದಿನ ತೀರ್ಮಾನ ಮಾಡಲು ನಿರ್ಧಾರ ಕೈಗೊಂಡಿದೆ.