• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹೊಸಬರ ರಕ್ತಾಕ್ಷಕ್ಕೆ ಜೊತೆಯಾದ ವಿಜಯ್ ರಾಘವೇಂದ್ರ.ಇದೇ 26ಕ್ಕೆ ರೋಹಿತ್ ಮೊದಲ ಸಿನಿಮಾ ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
July 13, 2024
in Top Story, ಇತರೆ / Others
0
Share on WhatsAppShare on FacebookShare on Telegram

ಕನ್ನಡ ಚಿತ್ರರಂಗದಲ್ಲಿ ಹೊಸ ಹೊಸ ಪ್ರಯೋಗಗಳು ನಡೆಯುತ್ತಲೇ ಇರುತ್ತವೆ. ಕೆಲವು ಪ್ರಯತ್ನಗಳು ಯಶಸ್ವಿಯಾದರೆ, ಕೆಲವು ಬಿಗ್ ಬಜೆಟ್ ಸಿನಿಮಾಗಳ ನಡುವೆ ಕಳೆದು ಹೋಗುತ್ತವೆ. ಹೊಸತನಕ್ಕೆ ಬೆಂಬಲ ಸಿಗಲಿ, ಸಿಗದೇ ಇರಲಿ ಆದರೆ ಪ್ರಯತ್ನಗಳಂತೂ ನಿಂತಿಲ್ಲ ಎಂಬುದು ಕನ್ನಡ ಸಿನಿಮಾ ಪ್ರೇಮಿಗಳಿಗೆ ಖುಷಿಯ ಸಂಗತಿ. ಸಿನಿಮಾ ಬಗ್ಗೆ ಅತೀವ ಪ್ರೀತಿ ಹೊಂದಿರುವ ಯುವ ಪ್ರತಿಭೆ ರೋಹಿತ್ ಮೊದಲ‌ ಕೂಸು ರಕ್ತಾಕ್ಷ ಸಿನಿಮಾ ತೆರೆಗೆ ಬರಲು ರೆಡಿಯಾಗಿದೆ. ಈ ಚಿತ್ರದ ಟ್ರೇಲರ್ ಅನಾವರಣಗೊಂಡಿದ್ದು, ಸಿನಿಮಾ ಮೇಲಿನ ಕುತೂಹಲ ಹೆಚ್ಚಿಸಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಎಂಎಂಬಿ ಲೆಗಸಿಯಲ್ಲಿ ರಕ್ತಾಕ್ಷ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ನಟ ವಿಜಯ್ ರಾಘವೇಂದ್ರ, ನಟಿ ಸುಮನ್ ನಗರ್ಕರ್ ಟ್ರೇಲರ್ ಬಿಡುಗಡೆ ಮಾಡಿ ಹೊಸಬರ ಪ್ರಯತ್ನಕ್ಕೆ ಬೆನ್ನುತಟ್ಟಿದ್ದಾರೆ. ನಟ ವಿಜಯ್ ರಾಘವೇಂದ್ರ ಮಾತನಾಡಿ, ಕಥೆ ಬಗ್ಗೆ ಕಡಿಮೆ ಗೊತ್ತಿದ್ದರೆ ಒಳ್ಳೆದು. ಕಥೆ ಹೆಚ್ಚು ಬಿಟ್ಟು ಕೊಟ್ಟರೂ ಕಷ್ಟ. ಕಥೆಯ ಸುಳಿವೇ ಇಲ್ಲದೇ ಊಹಾಪೋಹ ಮಾಡಿಕೊಂಡು ಥಿಯೇಟರ್ ಗೆ ಬರುವ ತರ ಮಾಡಿದರು ಕಷ್ಟ. ಯಾಕೆಂದರೆ ಜನ ಈಗ ಎಷ್ಟರ ಮಟ್ಟಿಗೆ ಮುಂದುವರೆದಿದ್ದಾರೆ ಎಂದರೆ ಸಣ್ಣ ಟ್ರೇಲರ್ , ಟೀಸರ್ ತಮ್ಮದೇ ಕಲ್ಪನೆ‌ ಮೂಲಕ ಥಿಯೇಟರ್ ಗೆ ಬರ್ತಾರೆ. ಕಥೆ ಅವರದ್ದು ಆದರೆ ಒಪ್ಪಿಕೊಳ್ಳುತ್ತಾರೆ. ಕಥೆ ಬೇರೆಯದದ್ದಾರೆ ನಾವು ಅಂದುಕೊಂಡು ಬಂದ ಕಥೆಯಲ್ಲ ಎಂದು ಬೇಜಾರು ಆಗುತ್ತಾರೆ. ಆದರೆ ಸಣ್ಣ ಎಳೆ, ಜನರ ನಂಬಿಕೆ ವಿಶ್ವಾಸ ಗೆಲ್ಲುವುದು ಸಿನಿಮಾದ ಮುಖಾಂತರ ಗೆಲ್ಲುವುದು ಸಾಹಸ. ಅಂತಹ ಸಾಹಸಕ್ಕೆ ರೋಹಿತ್ ಕೈ ಹಾಕಿದ್ದಾರೆ. ಬಹಳ ಚೆನ್ನಾಗಿ ಟ್ರೇಲರ್ ಮೂಡಿಬಂದಿದೆ. ಕುತೂಹಲ ಕೆರಳಿಸುತ್ತದೆ. ಆಕ್ಷನ್ ಇದೆ. ಥ್ರಿಲ್ಲರ್ ಎಲಿಮೆಂಟ್ ಇದೆ. ನನಗೂ ಆಡಿಯನ್ಸ್ ಆಗಿ ಕ್ಯೂರಿಯಾಸಿಟಿ ಹೆಚ್ಚುವಂತೆ ಮಾಡಿದೆ. ಬಹಳ ಕಷ್ಟಪಟ್ಟಿದ್ದಾರೆ ರೋಹಿತ್. ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದು ತಿಳಿಸಿದರು.

ADVERTISEMENT

ಹಿರಿಯ ನಟಿ ಸುಮನ್ ನಗರ್ಕರ್ ಮಾತನಾಡಿ, ಟ್ರೇಲರ್ ತುಂಬಾ ಇಂಟ್ರೆಸ್ಟಿಂಗ್ ಆಗಿದೆ. ಸರಣಿ ಕೊಲೆ ಇದೆ ಅನ್ನೋ ಕ್ಲ್ಯೂ ಇದೆ. ಮೂರ್ನಾಲ್ಕು ಜನ ಹೀರೋಯಿನ್ ಇರುವುದು ಗೊತ್ತಾಗುತ್ತದೆ. ಹೀಗಾಗಿ ಸರಣಿ ಕೊಲೆಯಾಗುತ್ತದೆ ಎಂಬ ಕ್ಲ್ಯೂ ಕೂಡ ಸಿಕ್ತು. ನನ್ನ ಪತಿ ಪೊಲೀಸ್ ಪಾತ್ರದಲ್ಲಿ ಮಾಡಿದ್ದಾರೆ. ಕಥೆ ಅವರು ಕೂಡ ಹೇಳಿಲ್ಲ. ಕಷ್ಟಪಟ್ಟು ಸಿನಿಮಾ ಮಾಡಿದ್ದಾರೆ. ಪ್ರೋತ್ಸಾಹ ಸಿಗಬೇಕು ಎಲ್ಲರೂ ಪ್ರೋತ್ಸಾಹ ಕೊಡಬೇಕು. ಜನ ಥಿಯೇಟರ್ ಗೆ ಬರಬೇಕು. ಅವರು ನಾವು ಮಾಡುವ ಕೆಲಸ ನೋಡಬೇಕು. ಈ ರೀತಿಯ ಮಿಸ್ಟ್ರೀ ಸ್ಟೋರಿಯನ್ನು ಥಿಯೇಟರ್ ನಲ್ಲಿ ನೋಡಿ‌ ಎಂದು ಹೇಳಿದರು.ವಕೀಲರಾದ ಹರ್ಷ ಮುತಾಲಿಕ್ ಮಾತಾನಾಡಿ, ರೋಹಿತ್ ನೋಡಿದರೆ ಹೆಮ್ಮೆ ಎನಿಸುತ್ತದೆ. ಚಿಕ್ಕ ವಯಸ್ಸಿನಲ್ಲೇ ಮಾಡೆಲಿಂಗ್ ಮಾಡಿ ಅಲ್ಲಿ ಒಂದು ರೀತಿ ಸಾಧನೆ ಮಾಡಿ ಅದನ್ನು ಸಿನಿಮಾ ಮೂಲಕ ಬರಬೇಕು ಮಾಡಿದ್ದಾನೆ. ನನ್ನ ಊರಿನ ಹುಡುಗ ಅದು ವಿಶೇಷ. ಇಷ್ಟು ಎತ್ತರಕ್ಕೆ ಬೆಳೆಯುತ್ತಾನೆ. ಹಿರಿಯ ನಟರ ಹೊಗಳಿಕೆ ಪಾತ್ರರಾಗುತ್ತಾನೆ ಎಂದರೆ ನಮಗೆ, ನಮ್ಮ ಜಿಲ್ಲೆಗೂ ಹೆಮ್ಮೆ ಎಂದರು.

ಜುಲೈ 26ಕ್ಕೆ ಚಿತ್ರ ರಿಲೀಸ್ರ ಕ್ತಾಕ್ಷ ಟ್ರೇಲರ್ ಬಹಳ ಇಂಪ್ರೆಸಿಂಗ್ ಆಗಿ‌ ಮೂಡಿದೆ. ಮಾಸ್ ಜೊತೆಗೆ ಥ್ರಿಲ್ಲಿಂಗ್ ಅಂಶಗಳು ಚಿತ್ರದಲ್ಲಿದ್ದು, ಪ್ರೇಕ್ಷಕರನ್ನು ಸೀಟಿನ ತುದಿಗೆ ಕುರಿಸುವುದು ಪಕ್ಕ. ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಪ್ರಚಾರ ಕಾರ್ಯ ಶುರು ಮಾಡಿರುವ ಚಿತ್ರತಂಡ ಜುಲೈ 26ಕ್ಕೆ ಸಿನಿಮಾವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡಲಾಗಿದೆ. ಇನ್ನು ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಿರ್ದೇಶಕ ಶ್ರೀಕಾಂತ್ ಕಟಗಿ, ವಕೀಲರಾದ ಹರ್ಷ ಮುತಾಲಿಕ್ ಹಾಗೂ ಮೊಹಮದ್ ಗೌಸ್ ಪೀರ್ ಉಪಸ್ಥಿತರಿದ್ದರು.

Tags: Vijay Raghavendra
Previous Post

ಗ್ರಾಮ ನ್ಯಾಯಾಲಯ ಸ್ಥಾಪಿಸಿ ತ್ವರಿತ ನ್ಯಾಯ ಒದಗಿಸಲು ಸುಪ್ರೀಂ ಕೋರ್ಟ್‌ ಸಲಹೆ

Next Post

ಮೂವರು ದರೋಡೆಕೋರರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪೋಲೀಸರು

Related Posts

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!
Top Story

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

by ಪ್ರತಿಧ್ವನಿ
April 14, 2026
0

ಬೆಂಗಳೂರು : ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. https://youtu.be/jc4uNwRML78?si=OFDsWjRgGzT4buqt ಇಂದು...

Read moreDetails
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

ದೀದಿ ರಾಜ್ಯದಲ್ಲಿ ಮೋದಿ “SIR” : ಎಷ್ಟು ಲಕ್ಷ ಮತದಾರರ ಭವಿಷ್ಯ ಅತಂತ್ರ ಗೊತ್ತಾ..?

April 14, 2026
ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

April 14, 2026
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
Next Post

ಮೂವರು ದರೋಡೆಕೋರರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಪೋಲೀಸರು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada