• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಬೊಮ್ಮಾಯಿ ಹೇಳಿಕೆಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

Any Mind by Any Mind
June 4, 2022
in ಕರ್ನಾಟಕ
0
ಸಿಎಂ ಬೊಮ್ಮಾಯಿ ಹೇಳಿಕೆಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ
Share on WhatsAppShare on FacebookShare on Telegram

ಪಠ್ಯ ವಿವಾದಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಸಿಎಂ ಬಸವರಾಜ ಬೊಮ್ಮಾಯಿ ನೀಡಿದರು ಪತ್ರಿಕಾ ಹೇಳಿಕೆಗೆ ಸಾಹಿತಿ ಬರಗೂರು ರಾಮಚಂದ್ರಪ್ಪನವರು ಸ್ಪಷ್ಟನೆ ನೀಡಿದ್ದು, ಮುಖಾಮುಖಿ ಚರ್ಚೆಗೆ ಒತ್ತಾಯಿಸಿದ್ದಾರೆ.

ADVERTISEMENT

ಈ ಕುರಿತು ಪತ್ರ ಬರೆದಿರುವ ಅವರು,

ಮಾನ್ಯ ಮುಖ್ಯಮಂತ್ರಿಯವರು ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಕೆಲವು ಅಂಶಗಳಿಗೆ ಸ್ಪಷ್ಟನೆ ನೀಡುವುದು ಅನಿವಾರ್ಯವಾಗಿದೆ.

1. ಶ್ರೀ ಪಂಡಿತಾರಾಧ್ಯ ಸ್ವಾಮೀಜಿಯವರು ಮತ್ತು ನಾಡಿನ ಇತರೆ ಸ್ವಾಮೀಜಿಯವರು ಬಸವಣ್ಣನವರ ವಿಷಯದಲ್ಲಿ ಎತ್ತಿದ ಪ್ರಶ್ನೆಗೆ ‘ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯ ಅಂಶಗಳಿವೆ’ ಎಂದಿದ್ದಾರೆ. ವಾಸ್ತವ ಹೀಗಿದೆ : 6ನೇ ತರಗತಿಯ ಸಮಾಜ ವಿಜ್ಞಾನ ಭಾಗ-2ರಲ್ಲಿ ನಾವು ಅಳವಡಿಸಿದ್ದ ವಿವರಗಳಲ್ಲಿ ಅಲ್ಪ ಸ್ವಲ್ಪ ಬದಲಾವಣೆ ಮಾಡಿ ಮರುಪರಿಷ್ಕರಣೆಯಲ್ಲಿ ಉಳಿಸಿಕೊಂಡಿದ್ದರೂ 9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರಲ್ಲಿದ್ದ ಬಸವಣ್ಣನವರ ವಿವರಗಳಲ್ಲಿ ಕೆಲವು ಮುಖ್ಯ ಸಂಗತಿಗಳನ್ನು ಬಿಡಲಾಗಿದೆ. ಮರುಪರಿಷ್ಕರಣೆಯ ಪಠ್ಯದಲ್ಲಿ ಬಸವಣ್ಣನವರು ವೈದಿಕ ಮೂಲ ಮೌಡ್ಯಾಚರಣೆಗಳನ್ನು ವಿರೋಧಿಸಿದ್ದು, ಯಜ್ಯೋಪವೀತವನ್ನು ಕಿತ್ತೆಸೆದದ್ದು. ಉನ್ನತಾಧಿಕಾರದಲ್ಲಿದ್ದರೂ ಚಳವಳಿ ಕಟ್ಟಿದ್ದು, ‘ದೇಹವೇ ದೇಗುಲ’ ಎಂಬ ಹೊಚ್ಚ ಹೊಸ ಪರಿಕಲ್ಪನೆ ನೀಡಿದ್ದು, ಜನಸಾಮಾನ್ಯರಿಗೆ ತಲುಪುವ ಸರಳ ಕನ್ನಡದಲ್ಲಿ ವಚನಕಾರರು ಬರೆದದ್ದು-ಮುಂತಾದ ವಿಷಯಗಳನ್ನು ಮರುಪರಿಷ್ಕರಣೆಯಲ್ಲಿ ಬಿಡಲಾಗಿದೆ. ನಾವು ಪರಿಷ್ಕರಣೆ ಮಾಡಿದಾಗ ಕನ್ನಡ ಪ್ರಥಮ ಭಾಷೆ ಪಠ್ಯಪಸ್ತಕಕ್ಕೆ ‘ಬಸವಣ್ಣನವರ ಜೀವನ ದರ್ಶನ’ ಕುರಿತ ಹೊಸ ಪಾಠವನ್ನು ಸೇರಿಸಿದ್ದೆವು ಎಂಬ ವಿಷಯವನ್ನು ಇಲ್ಲಿ ತಿಳಿಸಬಯಸುತ್ತೇನೆ.

2. ರಾಷ್ಟ್ರಕವಿ ಕುವೆಂಪು ಅವರ ಹತ್ತು ರಚನೆಗಳು ಮರುಪರಿಷ್ಕರಣೆಯ ಒಟ್ಟು ಕನ್ನಡ ಭಾಷಾ ಪಠ್ಯಗಳಲ್ಲಿ ಇರುವುದು ನಿಜ. ನಾವು ಪರಿಷ್ಕರಣೆ ಮಾಡಿದಾಗ ಮೂಲ ಪಠ್ಯಪುಸ್ತಕದಲ್ಲಿ ಇಲ್ಲದ ಕೆಲವು ಮುಖ್ಯ ಸಾಹಿತಿಗಳ ಪಾಠ ಸೇರಿಸುವುದಕ್ಕಾಗಿ ಸಾಮಾನ್ಯ ಮಾನದಂಡವನ್ನು ರೂಪಿಸಿಕೊಂಡೆವು. ರಾಷ್ಟ್ರಕವಿ ಕುವೆಂಪು ಅವರ ಅಪೂರ್ವ ಸಾಧನೆಗೆ ಚ್ಯುತಿಯುಂಟು ಮಾಡದೆ, ಮೂಲ ಪಠ್ಯಮಸ್ತಕಗಳಲ್ಲಿ ಇಲ್ಲದೆ ಇದ್ದ, ಕಲ್ಯಾಣ ಕರ್ನಾಟಕದ ಸಿಂಪಿ ಲಿಂಗಣ್ಣ, ಶಾಂತರಸ, ಚೆನ್ನಣ್ಣ ವಾಲೀಕಾರ ಅವರಲ್ಲದೆ ಮಾಸ್ತಿ ವೆಂಕಟೇಶ ಅಯ್ಯಂಗಾರ್, ಗೋಪಾಲಕೃಷ್ಣ ಅಡಿಗ, ಗೊರೂರು ರಾಮಸ್ವಾಮಿ ಅಯ್ಯಂಗಾರ್ ಮತ್ತು ಕೆಲವು ಲೇಖಕಿಯರ ಪಾಠಗಳನ್ನು ಸೇರಿಸಿದೆವು. ಈ ನಮ್ಮ ನಡೆಯು ಕುವೆಂಪು ಅವರ ಅಖಂಡ ಕರ್ನಾಟಕ ಪರಿಕಲನ ಮತ್ತು ಸಾಮಾಜಿಕ ನ್ಯಾಯ ಕಲ್ಪನೆಗೆ ಅನುಗುಣವಾಗಿತ್ತು, ಅಲ್ಲಿಯೇ ಒಂದು ಮಾತು – ಕುವೆಂಪು ಅವರ ಬಗ್ಗೆ ಮಾನ್ಯ ಮುಖ್ಯಮಂತಿಯವರು ನೀಡಿದ ಸಂಖ್ಯಾ ಮಾಹಿತಿಯಿಂದ, ನಾಡಗೀತೆ, ನಾಡಧ್ವಜ, ಕನ್ನಡ ಭಾಷೆಗಳಿಗೆ ಮಾಡಿದ ಅವಮಾನಕ್ಕೆ ಖಂಡಿತ ರಿಯಾಯಿತಿ ಸಿಗುವುದಿಲ್ಲ.

3. ಇನ್ನು ಬೆಂಗಳೂರು ನಿರ್ಮಾಪಕ ಕೆಂಪೇಗೌಡರ ಬಗ್ಗೆ ಮಾನ್ಯ ಮುಖ್ಯಮಂತ್ರಿಯವರು ಹೊಸದಾಗಿ ಪಾಠ ಸೇರಿಸಿರುವುದಾಗಿ ಹೇಳಿದ್ದಾರೆ. ವಾಸ್ತವವೆಂದರೆ, 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರಲ್ಲಿ ‘ಯಲಹಂಕ ನಾಡಪ್ರಭುಗಳು’ ಎಂಬ ಪಾಠವನ್ನು ನಮ್ಮ ಪರಿಷ್ಕರಣೆಯ ಕಾಲದಲ್ಲೇ ಸೇರಿಸಿದ್ದೇವೆ, ಕೆಂಪೇಗೌಡರ ವಂಶಾವಳಿ ಮತ್ತು ಆಳ್ವಿಕೆಯ ವಿವರಗಳನ್ನು ನೀಡಿದ್ದೇವೆ ಆದರೆ ಮರುಪರಿಷ್ಕರಣೆಯಲ್ಲಿ ನಾವು ಕೂಟದ ವಿವರಗಳನ್ನು ಕಡಿತ ಮಾಡಲಾಗಿದೆ. ಜೊತೆಗೆ ಯಲಹಂಕ ನಾಡಪ್ರಭುಗಳ ಆಳ್ವಿಕೆಯ ವಿನಿರ್ಯವನ್ನು ಬೆಂಗಳೂರು ಜಿಲ್ಲೆಗೆ ಮಾತ್ರ ಸೀಮಿತಗೊಳಿಸಲಾಗಿದೆ. ನಮ್ಮ ಪರಿಷ್ಕರಣೆ ಪತ್ರದಲ್ಲಿ ಬೆಂಗಳೂರು, ರಾಮನಗರ, ತುಮಕೂರು, ಅವಿಭಜಿತ ಕೋಲಾರ ಜಿಲ್ಲೆಗಳು ಕೂಡ ನಾಡಪಭು ಕೆಂಪೇಗೌಡರ ಆಳ್ವಿಕೆಗೆ ಒಳಪಟದನ್ನು ವಿವರಿಸಲಾಗಿತ್ತು. ಇದನ್ನು ಮರುಪರಿಷ್ಕರಣೆಯಲ್ಲಿ ಬಿಟ್ಟಿದ್ದಾರೆ. ಮಾನ್ಯ ಮುಖ್ಯಮಂತಿಯವರು ತಿಳಿಸಿರುವ ಹೊಸಪಾಠವನ್ನು ಎಲ್ಲಿ ಸೇರಿಸಿದ್ದಾರೆಂದು ಸ್ಪಷ್ಟವಿಲ್ಲ.

4. ಇನ್ನು ಕೆಲವು ಮುಖ್ಯ ವಿಷಯಗಳನ್ನು ಇಲ್ಲಿ ತಿಳಿಸಲೇಬೇಕಾಗಿದೆ. ಪರಿಷ್ಕರಣೆ ಎಂದಾಗ ಕೆಲವನ್ನು ಬಿಡುವುದು ಮತ್ತು ಸೇರಿಸುವುದು ಇರುತ್ತದೆ. ಆದರೆ ಈ ಕ್ರಿಯೆಗೆ ನ್ಯಾಯಸಮೃತ ಮಾನದಂಡವನ್ನು ರೂಪಿಸಿಕೊಳ್ಳಬೇಕಾಗುತ್ತದೆ. ಇಂಥದೊಂದು ನ್ಯಾಯಸಮ್ಮತ ಮಾನದಂಡವು ಮರುಪರಿಷ್ಕರಣೆಯಲ್ಲಿ ಕಾಣಿಸುವುದಿಲ್ಲ. ಕನ್ನಡ ಭಾಷಾ ಪಠ್ಯಗಳಲ್ಲಿ ದೇವನೂರರನ್ನು ಹೊರತುಪಡಿಸಿ ಎಲ್ಲಾ ದಲಿತ ಮೂಲದ ಸಾಹಿತಿಗಳ ರಚನೆಗಳನ್ನು ತೆಗೆಯಲಾಗಿದೆ. ಬಹುಪಾಲು ಮಹಿಳಾ ಸಾಹಿತಿಗಳ ರಚನೆಗಳನ್ನು ಬಿಡಲಾಗಿದೆ. ಬುದ್ಧ, ಅಂಬೇಡ್ಕರ್‌ ಅಂಥವರ ವಸ್ತುವುಳ್ಳ ಕವನಗಳನ್ನು ಕೈಬಿಡಲಾಗಿದೆ. 6ನೇ ತರಗತಿಯ ಸಮಾಜ ವಿಜ್ಞಾನದಿಂದ ಬೌದ್ಧಧರ್ಮ ಮತ್ತು ಜೈನಧರ್ಮದ ವಿವರಗಳನ್ನು ತೆಗೆಯಲಾಗಿದೆ. ನಾವು ಹೊಸದಾಗಿ ಸೇರಿಸಿದ್ದ ಸಾವಿತ್ರಿಬಾಯಿ ಫುಲೆ ಮುಂತಾದ ಸುಧಾರಕಿಯರ ಪಾಠಕ್ಕೆ ಕೊಕ್ ಕೊಡಲಾಗಿದೆ. ಅಂಬೇಡ್ಕರ್‌ ಅವರ ಮಹಾಡ್ ಸತ್ಯಾಗ್ರಹ, ನಾಸಿಕ ದೇವಾಲಯ ಪ್ರವೇಶದಂತಹ ಅನೇಕ ಸಾಲುಗಳು ಮರುಪರಿಷ್ಕರಣೆಯಲ್ಲಿ ಇಲ್ಲವಾಗಿವೆ. ನಾವು ಸೇರಿಸಿದ್ದ ನಾರಾಯಣ ಗುರು ಕುರಿತ ಪಾಠವನ್ನು ಬಿಟ್ಟಿದ್ದು ಮತ್ತೆ ಸೇರಿಸುವುದಾಗಿ ಹೇಳುತ್ತಿದ್ದಾರೆ. ಇಲ್ಲಿ ತೆಗೆದದ್ದು, ಸೇರಿಸಿದ್ದು ಯಾರನ್ನು ಮತ್ತು ಎಂಥ ಪಾತ್ರವನ್ನು ಎಂಬುದನ್ನು ಪರಿಶೀಲಿಸಬೇಕು.

ಈ ಎಲ್ಲ ಅಂಶಗಳ ಆಧಾರದ ಮೇಲೆ ಹೇಳುವುದಾದರೆ ಇದು ದಲಿತ ವಿರೋಧಿ, ಮಹಿಳಾ ವಿರೋಧಿ ಮತ್ತು ಸಂವಿಧಾನಾತ್ಮಕ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿರೋಧಿ ಕ್ರಮವಾಗಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು ಗೌಣವಾಗಿದೆ. ಅಷ್ಟೇ ಅಲ್ಲ, ಬಸವಣ್ಣ, ಕುವೆಂಪು ಅವರ ಆದರ್ಶಕ್ಕೂ ವಿರುದ್ಧವಾಗಿದೆ.

ಮಾನ್ಯ ಮುಖ್ಯಮಂತ್ರಿಯವರು ತಮ್ಮ ಸಚಿವರ ಮಾಹಿತಿ ಆಧರಿಸಿ ಪಕಾ ಪ್ರಕಟಣೆ ನೀಡಿದ್ದಾರೆ, ಆದರೆ ಪ್ರತಿರೋಧಿಸುತ್ತಿರುವ ಸಂಸ್ಥೆ ಹಾಗೂ ವ್ಯಕ್ತಿಗಳನ್ನು ಕರೆದು ಮಾತಾಡಿ ತೀರ್ಮಾನಕ್ಕೆ ಬರುವುದು ಪಜಾಸತ್ತಾತ್ಮಕ ಸರ್ಕಾರದ ಜವಾಬ್ದಾರಿ. ಆದ್ದರಿಂದ ಇಲ್ಲದಿದ್ದರೆ ಏಕಪಕ್ಷೀಯವಾಗುತ್ತದೆ, ಮಾನ್ಯ ಮುಖ್ಯಮಂತಿಗಳು ಮರುಪರಿಷ್ಕರಣೆ ವಿರೋಧಿಸುತ್ತಿರುವವರನ್ನು ಮಾತುಕತೆಗೆ ಆಹ್ವಾನಿಸಬೇಕೆಂದು ಬಯಸುತ್ತೇನೆ.

Tags: BJPCongress PartyCovid 19ಕೋವಿಡ್-19ನರೇಂದ್ರ ಮೋದಿಬರಗೂರು ರಾಮಚಂದ್ರಪ್ಪಬಿಜೆಪಿಸಿಎಂ ಬೊಮ್ಮಾಯಿ
Previous Post

ರೋಹಿತ್ ನೇತೃತ್ವದಲ್ಲಿ ಪರಿಷ್ಕರಿಸಿರುವ ಪಠ್ಯವನ್ನು ರದ್ದು ಮಾಡಿ : ಮಾಜಿ ಸಿಎಂ ಸಿದ್ದರಾಮಯ್ಯ

Next Post

ಕಾನ್ಪುರ ಗಲಭೆ; ಮಾಸ್ಟರ್ ಮೈಂಡ್ ಪೊಲೀಸ್‌ ಬಲೆಗೆ

Related Posts

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
0

ಬಿಗ್‌ ಬಾಸ್‌ ಕನ್ನಡ ಸೀಸನ್‌ 12(Bigg Boss Kannada 12) ಕಾರ್ಯಕ್ರಮ ಪ್ರಾರಂಭವಾದ ದಿನದಿಂದಲೇ ಗಿಲ್ಲಿ ನಟ(Gilli Nata) ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಸಂಪೂರ್ಣ ಯಶಸ್ವಿಯಾಗಿದ್ದಾರೆ. ತಮ್ಮ...

Read moreDetails
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
Next Post
ಕಾನ್ಪುರ ಗಲಭೆ; ಮಾಸ್ಟರ್ ಮೈಂಡ್ ಪೊಲೀಸ್‌ ಬಲೆಗೆ

ಕಾನ್ಪುರ ಗಲಭೆ; ಮಾಸ್ಟರ್ ಮೈಂಡ್ ಪೊಲೀಸ್‌ ಬಲೆಗೆ

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!