ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಾತನಾಡುವ ವೇಳೆ ಕೆಟ್ಟ ಪದ ಬಳಸಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಹಾಗೂ ಸಿ.ಟಿ.ರವಿ ವಿರುದ್ದ ಘೊಷಣೆಗಳನ್ನ ಖೂಗಿ ತಮ್ಮ ಆಕ್ರೋಶವನ್ನ ಹೊರಹಾಕಿದ್ದರು.
ಈ ವೇಳೆ ಮಾತನಾಡಿದ ರಾಮಲಿಂಗಾರೆಡ್ಡಿ ಮೂರು ಬಿಟ್ಟವರು ಊರಿಗೆ ದೊಡ್ಡವರು ಎಂಬ ಗಾದೆ ಇದೆ ಅದು ಈಗ ಬಿಜೆಪಿಯ ಕೆಲವು ನಾಯಕರಿಗೆ ಅನ್ವಯಿಸುತ್ತಿದೆ ಬಿಜೆಪಿ ಅಂದರೆ ಭಾರತೀಯ ಜನತಾ ಪಕ್ಷ ಅಲ್ಲ ಬುರುಡೆ ಜನರ ಪಕ್ಷ, ಭ್ರಷ್ಟ ಜನರ ಪಕ್ಷ, ಹಾಗೂ ಬಾಯಿ ಬಡಕರ ಪಕ್ಷವಾಗಿ ಪರಿವರ್ತನೆಯಾಗಿದೆ ಎಂದು ಕಿಡಿಕಾರಿದ್ದಾರೆ.