ಸ್ಯಾಂಡಲ್ವುಡ್ ನಟ ರಿಷಿ ಅಭಿನಯದ ʻರಾಮನ ಅವತಾರʼ ಚಿತ್ರದ ಟೀಸರ್ ಇಂದು ರಿಲೀಸ್ ಆಗಿದೆ. ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ರಿಷಿ. ವಿಭಿನ್ನ ಪಾತ್ರಗಳ ಮೂಲಕ ಸಿನಿಪ್ರೇಕ್ಷಕರನ್ನು ರಂಜಿಸುತ್ತಾ ಬಂದಿರುವ ರಿಷಿ, . ಈಗ ‘ರಾಮನ ಅವತಾರ’ ತಾಳಿದ್ದಾರೆ.

‘ನಾಟಿ ಫ್ಯಾಕ್ಟರಿ’ ಯೂಟ್ಯೂಬ್ ಚಾನೆಲ್ ಮೂಲಕ ಖ್ಯಾತಿ ಪಡೆದಿರುವ ವಿಕಾಸ್ ಪಂಪಾಪತಿ ‘ರಾಮನ ಅವತಾರ’ ಸಿನಿಮಾಕ್ಕೆ ಆಕ್ಷನ್ ಕಟ್ ಹೇಳಿದ್ದು, ಇದು ಇವರ ಚೊಚ್ಚಲ ಸಿನಿಮಾವಾಗಿದೆ. ʻರಾಮನ ಅವತಾರʼ ರೊಮ್ಯಾಂಟಿಕ್ ಕಾಮಿಡಿ ಜಾನರ್ನ ಸಿನಿಮಾ.

ಈ ಚಿತ್ರಕ್ಕೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶಪಾಂಡೆ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಟ್ಯೂನ್ ಹಾಕಿದ್ದಾರೆ. ಅಮರನಾಥ್ ಸಂಕಲನವಿದ್ದು, ನಟ ಅರುಣ್ ಸಾಗರ್ ಕೂಡ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಟಿ ಶುಭ್ರ ಅಯ್ಯಪ್ಪ ಹಾಗೂ ಪ್ರಣಿತಾ ಸುಭಾಷ್ ಈ ಚಿತ್ರದಲ್ಲಿ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ.