ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ. ಸುರೇಶ್ ನಡುವೆ ಜಗಳವಾಗಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.
ರಾಮನಗರದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಚಿವ ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ. ಸುರೇಶ್ ನಡುವೆ ಜಗಳ ನಡೆಯಿತು. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿ, ಬಿಜೆಪಿಯವರಯ ಸುಳ್ಳು ಹೇಳುವುದು ಜಾಸ್ತಿ. ಅಶ್ವತ್ಥನಾರಾಯಣರವರು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ತಂದಿದ್ದರೆ ಅದರ ದಾಖಲೆಗಳನ್ನು ಜನರ ಎದುರು ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ್ದಾರೆ.