ಬೆಂಗಳೂರು: ಸಿಎಂ ಡಿ.ಕೆ ಶಿವಕುಮಾರ್ ಆಪ್ತ, ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತ ಸಂಭವಿಸಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ.

ಈ ಮೊದಲೇ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಸ್ಟೆಂಟ್ ಹಾಕಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು ಎನ್ನಲಾಗಿದೆ. ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಇಕ್ಬಾಲ್ ಹುಸೇನ್ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವುದು ಸದ್ಯದ ಮಾಹಿತಿಯಾಗಿದೆ.


ಇನ್ನು ರಾಮನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರ ಆರೋಗ್ಯ ವಿಚಾರಿಸಲು ಸಿಎಂ ಡಿ.ಕೆ ಶಿವಕುಮಾರ್ ಶೀಘ್ರವೇ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.






