‘ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಹಾಗೂ ಮೋಸ ಮಾಡಿದವರಲ್ಲಿ ನಮ್ಮ ಬಿಜೆಪಿಯ ಮಹಾನ್ ನಾಯಕರೊಬ್ಬರ ಪುತ್ರನ ಪಾತ್ರವಿದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಆರೋಪಿದ್ದಾರೆ.
ಗುರುವಾರ ಗೋಕಾಕದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ರಚನೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೊಡಬೇಕು’ ಎಂದರು.
‘ಬಿಜೆಪಿಯಲ್ಲಿರುವ ಮಹಾನ್ ನಾಯಕ ಬಿ.ಎಸ್.ಯಡಿಯೂರಪ್ಪ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮೊದಲಾದವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಎಲ್ಲರೂ ನಿತ್ಯ ರಾತ್ರಿ ಮಾತನಾಡುತ್ತಾರೆ’ ಎಂದು ಆರೋಪಿಸಿದರು.