ಜಾರಕಿಹೊಳಿ CD ಕೇಸ್‌: ಯಾರಿಗೆ? ಯಾವಾಗ? ಎಷ್ಟು ಹಣ ಕೊಟ್ಟಿದ್ದೀರಿ? ದೂರಿನಲ್ಲೆಕೆ ದಾಖಲಿಸಲಿಲ್ಲ ಎಂದು ಪ್ರಶ್ನಿಸಿದ ಕೋರ್ಟ್

 ಸಿಡಿ ಕೇಸ್‌ ವಿಚಾರ ಸಂಬಂಧ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಅವರನ್ನು ತೇಜೋವಧೆ ಮಾಡುವ ಉದ್ದೇಶದಿಂದ ಮಾಡಲು ಬ್ಲ್ಯಾಕ್‌ ಮೇಲ್‌ ಮಾಡಲಾಗಿದೆ ಎಂಬ ದೂರಿಗೆ ಸಂಬಂಧಿಸಿದಂತೆ, ತಲೆಮರೆಸಿಕೊಂಡ ಪ್ರಮುಖ ಆರೋಪಿಗಳಾದ ನರೇಶ್‌ ಗೌಡ ಬಿ ಎಂ ಮತ್ತು ಆರ್‌ ಶ್ರವಣ್‌ ಕುಮಾರ್‌ ಅವರ ನಿರೀಕ್ಷಣಾ ಜಾಮೀನು ಮನವಿಯ ತೀರ್ಪನ್ನು ಬೆಂಗಳೂರಿನ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯವು ಇಂದು ವಿಚಾರಣೆ ನಡೆಸಿದೆ.

ನ್ಯಾಯಾಧೀಶರಾದ ಲಕ್ಷ್ಮಿನಾರಾಯಣ್‌ ಭಟ್‌ ನೇತೃತ್ವದ ಪೀಠವು ವಿಚಾರಣೆ ಆರಂಭಿಸುತ್ತಿದ್ದಂತೆ ಎಸ್‌ಐಟಿ ಪೊಲೀಸರು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಿದ್ದರು. ವಿಚಾರಣೆ ವೇಳೆ ನ್ಯಾಯಾಲಯವು, “ನೀವು (ರಮೇಶ್‌ ಜಾರಕಿಹೊಳಿ) ಯಾರಿಗೆ, ಯಾವಾಗ, ಎಷ್ಟು ಹಣ ಪಾವತಿಸಿದ್ದೀರಿ? ದೂರು ದಾಖಲಿಸುವಾಗ ಏಕೆ ಉಲ್ಲೇಖಿಸಿಲ್ಲ. ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ನೀವು ಎಸ್‌ಐಟಿ ಮುಂದೆ ನೀಡಿರುವ ಸ್ವಯಂಪ್ರೇರಿತ ಹೇಳಿಕೆಯನ್ನು ಏಕೆ ಲಗತ್ತಿಸಿಲ್ಲ? ಸಿಆರ್‌ಪಿಸಿ ಸೆಕ್ಷನ್‌ 164 ಅಡಿ ಸಂತ್ರಸ್ತೆ ದಾಖಲಿಸಿರುವ ಹೇಳಿಕೆಯನ್ನು ಏಕೆ ಸಲ್ಲಿಸಿಲ್ಲ” ಎಂದು ಪ್ರಶ್ನಿಸಿದೆ.

ಜಾಮೀನು ಕೋರಿರುವ ಅರ್ಜಿದಾರರ ಪರವಾದ ಮಂಡಿಸಿದ ಹಿರಿಯ ವಕೀಲ ಎ ಎಸ್‌ ಪೊನ್ನಣ್ಣ ಅವರು ನಮ್ಮ ಕಕ್ಷಿದಾರರ ವಿರುದ್ಧದ ಪ್ರಕರಣ ರಾಜಕೀಯ ಪ್ರೇರಿತವಾಗಿದೆ. ಅತ್ಯಾಚಾರ ಆರೋಪಿಯಾಗಿರುವ ರಮೇಶ್‌ ಜಾರಕಿಹೊಳಿ ಅವರನ್ನು ರಕ್ಷಿಸಲು ನಮ್ಮ ಕಕ್ಷಿದಾರರನ್ನು ಗುರಿಯಾಗಿಸಿ, ಕಿರುಕುಳ ನೀಡಲಾಗುತ್ತಿದೆ  ಎಂದಿದ್ದಾರೆ. ಎರಡೂ ಕಡೆ ವಾದ-ವಿವಾದ ಆಲಿಸಿದ ನ್ಯಾಯಾಲಯ  ಜೂನ್‌ 8ಕ್ಕೆ ವಿಚಾರಣೆ ಮುಂದೂಡಿದೆ.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...