ಜಾರಕಿಹೊಳಿ ಸಿ.ಡಿ ಪ್ರಕರಣ: ಎಸ್‌ಐಟಿ ವಿರುದ್ಧ ಕೋರ್ಟ್‌ ಮೆಟ್ಟಿಲ್ಲೇರಿದ ಸಂತ್ರಸ್ತೆ

ಅತ್ಯಾಚಾರಕ್ಕೆ ಸಂಬಂಧಿಸಿದೆ ಎನ್ನಲಾದ ಮಾಜಿ ಸಚಿವ  ರಮೇಶ್‌ ಜಾರಕಿಹೊಳಿ  ಸಿ.ಡಿ ಪ್ರಕರಣ ಹೊಸ ತಿರುವು ಪಡೆಯುತ್ತಿದ್ದು, ಎಸ್‌ಐಟಿ ತನಿಖೆ ನ್ಯಾಯಯುತವಾಗಿಲ್ಲ ಎಂದು ಸಂತ್ರಸ್ತೆ ಹೈಕೋರ್ಟ್‌ ಮೆಟ್ಟಿಲ್ಲೇರಿದ್ದಾಳೆ.

ಸಿ.ಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರು ಹೊರಡಿಸಿರುವ ಆದೇಶ ರದ್ದು ಮಾಡುವಂತೆ ಸಂತ್ರಸ್ಥೆ ಕೋರ್ಟ್‌ ಮೊರೆ ಹೋಗಿದ್ದು, ಅರ್ಜಿ ವಿಚಾರಣೆ ನಡೆಸಿದ  ನ್ಯಾಯ ಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕ ಸದಸ್ಯಪೀಠ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ, ನಗರ ಪೊಲೀಸ್ ಆಯುಕ್ತರಿಗೆ ಹಾಗು ಎಸ್‌ಐಟಿ ತಂಡಕ್ಕೆ ನೋಟೀಸ್ ನೀಡಿದೆ.

ಎಸ್‌ಐಟಿ ರಚನೆ ಮಾಡುವಂತೆ ನಗರ ಪೊಲೀಸ್‌ ಆಯುಕ್ತರಿಗೆ ಗೃಹ ಸಚಿವರು 2021ರ ಮಾ.10ರಂದು ಬರೆದ ಪತ್ರ  ಹಾಗು  ಎಸ್‌ಐಟಿ ಈವರೆಗೂ ನಡೆಸಿದ ಸಂಪೂರ್ಣ ತನಿಖೆಯನ್ನು ರದ್ದುಗೊಳಿಸಿ ಬೇಕು. ಹೈಕೋರ್ಟ್‌ ಮೇಲ್ವಿಚಾರಣೆಯಲ್ಲಿ ಹೊಸ ತನಿಖಾ ತಂಡ ರಚಿಸವ ಮೂಲಕ ಹೊಸದಾಗಿ ತನಿಖೆ ನಡೆಸಬೇಕೆಂದು ಕೋರಲಾಗಿದೆ.

ಪ್ರಕರಣದಿಂದ ರಮೇಶ್‌ ಜಾರಕಿಹೊಳಿಯನ್ನು ರಕ್ಷಣೆ ಮಾಡುವ ಸಲುವಾಗಿ ಈಗ ರಚಿಸಿರುವ ಎಸ್‌ಐಟಿ ತಂಡ ಸೂಕ್ತ ತನಿಖೆ ನಡೆಸುತ್ತಿಲ್ಲ, ಅತ್ಯಾಚಾರದ ಪ್ರಕರಣದಲ್ಲಿ  ರಕ್ತದ ಮಾದರಿ, ಗಂಟಲು ದ್ರವ, ಉಗುರು, ಕೂದಲು, ವೀರ್ಯ,  ಪಡೆದು ಡಿಎನ್‌ಎ ಪರೀಕ್ಷೆ ನಡೆಸಬೇಕು. ಆದರೆ ಸಚಿವರನ್ನು ವೈದ್ಯಕೀಯ ಪರೀಕ್ಷೆಗೆ ಕರೆದು ರಕ್ತದೊತ್ತಡ, ಮಧುಮೇಹ ಪರೀಕ್ಷೆ ನಡೆಸಲಾಗಿದೆ. ನಿಯಮದಂತೆ ವೈದ್ಯಕೀಯ ಪರೀಕ್ಷೆ ನಡೆದಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಮೂಲ: NIE

Related posts

Latest posts

ಕುಂಭ ಮೇಳ ಸಂದರ್ಭದಲ್ಲಿ ಮಾಡಿದ 1 ಲಕ್ಷ ಕೋವಿಡ್-19 ಪರೀಕ್ಷೆಗಳು ನಕಲಿ: ತನಿಖಾ ವರದಿ

ಹರಿದ್ವಾರದ ಕುಂಭ ಮೇಳ ಸಂದರ್ಭದಲ್ಲಿ ಮಾಡಲಾಗಿದ ನಾಲ್ಕು ಲಕ್ಷ ಕೋವಿಡ್ ಟೆಸ್ಟ್ ಫಲಿತಾಂಶಗಳಲ್ಲಿ ಹಲವು ನಕಲಿ ಎಂದು ಉತ್ತರಾಖಂಡ ಆರೋಗ್ಯ ಇಲಾಖೆ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ವಿವರವಾದ ತನಿಖೆಯ 1,600 ಪುಟಗಳಲ್ಲಿ...

ನನ್ನ ಹೇಳಿಕೆಯಿಂದ ನಾನು ಹಿಂದೆ ಸರಿಯಲ್ಲ : ನಟ ಚೇತನ್ ಸ್ಪಷ್ಟನೆ

ಬ್ರಾಹ್ಮಣ್ಯ ವಿರೋಧಿ ಹೇಳಿಕೆ ಎಂಬ ಆರೋಪದ ಅಡಿ ಇಂದು ಬಸವನಗುಡಿ ಪೊಲೀಸರ ಮುಂದೆ ಹಾಜರಾದ ನಟ ಚೇತನ್ ತನ್ನ ಹೇಳಿಕೆಯ ಬಗ್ಗೆ ಪೊಲೀಸರ ಮುಂದೆ ಸ್ಪಷ್ಟನೆ ದಾಖಲಿಸಿದ್ದಾರೆ. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ...

ಚಿಕ್ಕಬಳ್ಳಾಪುರ: ಅರ್ಹ ಫಲಾನುಭವಿಗಳನ್ನು ಗುರುತಿಸುವಲ್ಲಿ ವಿಫಲ: ರೈತರಿಗೆ ಸಿಗುತ್ತಿಲ್ಲ ಪರಿಹಾರ ಧನ

ಕೊರೋನಾ ಲಾಕ್ಡೌನ್ ಸಮಯದಲ್ಲಿ ಸಂಕಷ್ಟಕ್ಕೊಳಗಾದ ರೈತರಿಗೆ ಸರ್ಕಾರ ಪರಿಹಾರದ ಅಭಯ ಕೊಟ್ಟಿತು. ಆದರೆ ಅರ್ಹ ಫಲಾನುಭವಿಗಳನ್ನ ಗುರುತಿಸುವಲ್ಲಿ ವಿಫಲವಾದ ಪರಿಣಾಮ ನಿಜವಾದ ರೈತರಿಗೆ ಪರಿಹಾರ ಸಿಗದಂತಾಗಿದೆ. ಈ ಕುರಿತು ಚಿಕ್ಕಬಳ್ಳಾಪುರದಲ್ಲಿ ರೈತರು ತಮ್ಮ...