ನವದೆಹಲಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ (Rameshwaram Cafe Bomb Blast) ಪ್ರಕರಣದ ತನಿಖೆ ಜೋರಾಗಿದ್ದು, ರಾಷ್ಟ್ರೀಯ ತನಿಖಾ ದಳ (NIA) 4 ರಾಜ್ಯಗಳ 11 ಕಡೆ ರೇಡ್ ಮಾಡಿದೆ.
ಬೆಂಗಳೂರಿನ (Bengaluru) ಕುಮಾರಸ್ವಾಮಿ ಲೇಔಟ್, ಬನಶಂಕರಿ ಸೇರಿ ಐದಕ್ಕೂ ಹೆಚ್ಚು ಕಡೆ ದಾಳಿ ನಡೆಸಿದೆ. ಮತೀನ್, ಶಾಝೀಬ್ ನಾಲ್ಕು ವರ್ಷ ತಲೆಮರೆಸಿಕೊಂಡಿದ್ದ ಸಂದರ್ಭದಲ್ಲಿ ನೆರವು ನೀಡಿದವರಿಗಾಗಿ ಸದ್ಯ ಎನ್ ಐಎ ಕಾರ್ಯಾಚರಣೆ ನಡೆಸಿದೆ.
ತಮಿಳುನಾಡಿನ ಕೊಯಮತ್ತೂರಿನ (Tamilnadu Coimbatore) ಖಾಸಗಿ ಆಸ್ಪತ್ರೆಯೊಂದರ ಮೇಲೆ ರೇಡ್ ಮಾಡಿದ ಎನ್‌ಐಎ, ಸ್ಫೋಟ ಪ್ರಕರಣದಲ್ಲಿ ಭಾಗಿಯಾದ ಶಂಕೆ ಮೇರೆಗೆ ಕರ್ನಾಟಕ ಮೂಲದ ಇಬ್ಬರು ವೈದ್ಯರನ್ನು ವಶಕ್ಕೆ ಪಡೆದಿದೆ. ನಿವೃತ್ತ ಶಿಕ್ಷಕ ಅಬ್ದುಲ್ ಮನೆ ಮೇಲೆಯೂ ಎನ್‌ಐಎ ದಾಳಿ ನಡೆಸಿ, ಅವರ ಪುತ್ರ ಸೊಹೇಲ್‌ನನ್ನು ವಶಕ್ಕೆ ಪಡೆದಿದೆ. ಈತ ಬೆಂಗಳೂರಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದ. ಸೊಹೇಲ್ ಬ್ಯಾಂಕ್ ಖಾತೆಗೆ ದಿಢೀರ್ ಎಂದು ಭಾರೀ ಮೊತ್ತದ ಹಣ ಜಮೆಯಾಗಿದ್ದು, ಅದನ್ನು ಎನ್ ಐಎ ಪ್ರಶ್ನಿಸಿದೆ.