ರಾಮನಗರ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆಯಿಂದಲೇ ಆರ್ಭಟಿಸುತ್ತಿರುವ ಮಳೆಯಿಂದಾಗಿ ಸಂಪೂರ್ಣ ಜನಜೀವನ ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾಧ್ಯಂತ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.
ಮುಂಜಾನೆ 4 ಗಂಟೆ ಸುಮಾರಿಗೆ ಬಿರುಸಿನಿಂದಲೇ ಆರಂಭಗೊಂಡ ಮಳೆ 10 ಗಂಟೆ ಕಳೆದರೂ ಬಿಡುವು ನೀಡದೇ ಇರುವುದು ಜನರ ಜೀವನವನ್ನು ಹೈರಾಣಾಗಿದ್ದು, ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿನ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ.
ಹೆಚ್ಚಿನ ಶಾಲಾ ಆವರಣದಲ್ಲಿಯೂ ನೀರು ನಿಂತಿರುವುದು ಹಾಗೂ ಸಾರಿಗೆ ವ್ಯವಸ್ಥೆ ಕೊರೆತೆಯಿಂದಾಗಿ ಶಿಕ್ಷಕರೂ ಸಹ ಶಾಲೆಗಳಿಗೆ ತೆರಳಲು ಸಾಧ್ಯವಾಗದ ಕಾರಣದಿಂದಾಗಿ ರಜೆ ಘೋಷಣೆ ಮಾಡಲಾಗಿದೆ.

ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿಯೂ ಭಾರಿ ನೀರು ಸಂಗ್ರಹವಾಗಿರುವ ಕಾರಣದಿಂದಾಗಿ ಸಂಚಾರವೂ ಬಂದ್ ಆಗಿದೆ.