ಕರ್ನಾಟಕದ ಸೂಪರ್ ಸಿಎಂ (Karnataka super cm)ಆಗಿ ಅಧಿಕಾರ ವಹಿಸಿಕೊಂಡಿರುವ ರಣ್ದೀಪ್ ಸಿಂಗ್ ಸುರ್ಜೇವಾಲಾ (Randeep Singh surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಟ್ವೀಟ್ ಮಾಡುವ ಮೂಲಕ ಕಾಂಗ್ರೆಸ್ (Congress) ಪಕ್ಷದ ಕಾಲೆಳೆದಿದೆ.ನಮ್ಮ ಚುನಾಯಿತ ಮುಖ್ಯಮಂತ್ರಿಗಳು ಸರಕಾರ ನಡೆಸಲು ಅವರಿಗೆ ಜಿಪಿಎ ನೀಡಿದ್ದಾರೆ ಎಂದು ಸದ್ಯದ ಬೆಳವಣಿಗೆಗಳ ಬಗ್ಗೆ ಜೆಡಿಎಸ್ ಯುವಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದ್ದಾರೆ.

ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಈಗ ಕ್ಷೇತ್ರದ ಅಭಿವೃದ್ಧಿಗೆ ಸುರ್ಜೇವಾಲ ಅವರನ್ನು ಸುತ್ತುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹೊರಹೋಗುತ್ತಿದ್ದಾರೆ,ಇನ್ನು ಡಿಕೆ ಶಿವಕುಮಾರ್ ಅವರು ಕುರ್ಚಿಗಾಗಿ ಕಾಯುತ್ತಿದಾರೆ, ಆದರೆ ಸುರ್ಜೇವಾಲ ಈಗಾಗಲೇ ಆಡಳಿತ ನಡೆಸುತ್ತಿದ್ದಾರೆ ಎಂದು ನಿಖಿಲ್ ಕಾಲೆಳೆದಿದ್ದಾರೆ.

ರಾಜ್ಯ ಕಾಂಗ್ರೆಸ್ ಪಾಳಯ ಕರ್ನಾಟಕವನ್ನು ಕೈಗೊಂಬೆ ರಾಜ್ಯವನ್ನಾಗಿ ಮಾಡಿಕೊಂಡು ಒಕ್ಕೂಟ ವ್ಯವಸ್ಥೆಯ ಮತ್ತು ಪ್ರಜಾಪ್ರಭುತ್ವವನ್ನು ಅಣಕ ಮಾಡುತ್ತಿದೆ ಎಂದು ನಿಖಿಲ್ ಪೋಸ್ಟ್ ಮಾಡಿದ್ದು, ಸದ್ಯ ರಾಜ್ಯಕ್ಕೆ ಆಗಮಿಸಿರುವ ಸುರ್ಜೇವಾಲಾ ಶಾಸಕರ ಜೊತೆ ಒನ್ ಟು ಒನ್ ಸಭೆ ನಡೆಸಿರುವ ಬಗ್ಗೆ ನಿಖಿಲ್ ಈ ರೀತಿ ವ್ಯಂಗ್ಯವಾಡಿದ್ದಾರೆ.










