• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

“ರಾನಿ” ನೋಡಲು ಆಗಸ್ಟ್ 30 ಅಲ್ಲ. ಇನ್ನೂ ಎರಡು ವಾರ ಕಾಯಬೇಕು .‌

ಪ್ರತಿಧ್ವನಿ by ಪ್ರತಿಧ್ವನಿ
August 23, 2024
in Top Story, ವಿಶೇಷ, ಸಿನಿಮಾ
0
“ರಾನಿ” ನೋಡಲು ಆಗಸ್ಟ್ 30 ಅಲ್ಲ. ಇನ್ನೂ ಎರಡು ವಾರ ಕಾಯಬೇಕು .‌
Share on WhatsAppShare on FacebookShare on Telegram

ಕಿರಣ್‍ ರಾಜ್‍ ಅಭಿನಯದ ‘ರಾನಿ’ ಚಿತ್ರ ಆರಂಭದಿಂದಲೂ ಸದ್ದು ಮಾಡುತ್ತಿದೆ. ಮೊದಲು ಹೇಳಿದ ಹಾಗೆ ಆಗಸ್ಟ್ 30ರಂದು ಬಿಡುಗಡೆ ಆಗಬೇಕಿತ್ತು. ಆದರೆ ಈಗ ‘ರಾನಿ’ ಆಗಸ್ಟ್ 30 ರ ಬದಲು ಸೆಪ್ಟೆಂಬರ್ 12 ರಂದು ತೆರೆಗೆ ಬರಲಿದೆ. ಪ್ರಸ್ತುತ ಬಿಡುಗಡೆಯಾಗಿರುವ ಕನ್ನಡ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿದೆ‌. ಹಾಗಾಗಿ ಚಿತ್ರಮಂದಿರಗಳ ಸಮಸ್ಯೆ ಎದುರಾಗಬಾರದೆಂದು ಈ ನಿರ್ಧಾರ ತೆಗದುಕೊಂಡಿರುವುದಾಗಿ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ತಿಳಿಸಿದೆ.

ADVERTISEMENT

ಮೊದಲು ಮಾತನಾಡಿದ ನಿರ್ದೇಶಕ ಗುರುತೇಜ್ ಶೆಟ್ಟಿ, ಯಶಸ್ವಿ ಪ್ರದರ್ಶನ ಕಾಣುತ್ತಿರುವ ‘ಕೃಷ್ಣಂ ಪ್ರಣಯ ಸಖಿ’ ಮತ್ತು ‘ಭೀಮ’ ಚಿತ್ರತಂಡಗಳಿಗೆ ಧನ್ಯವಾದ ಹೇಳಿದರು. ಆಗಸ್ಟ್ 20ರಂದು ನಮ್ಮ ಚಿತ್ರದ ಟ್ರೇಲರ್ ಬರಬೇಕಿತ್ತು. ಚಿತ್ರ ಆಗಸ್ಟ್ 30ರಂದು ಬಿಡುಗಡೆ ಆಗಬೇಕಿತ್ತು. ಭೀಮ ಹಾಗೂ ಕೃಷ್ಣಂ ಪ್ರಣಯ ಸಖಿ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿರುವುದರಿಂದ, ನಮಗೆ ಚಿತ್ರಮಂದಿರಗಳ ಸಮಸ್ಯೆ ಆಗ ಬಹುದು ಎಂದು ವಿತರಕರು ಹೇಳಿದರು. ನಾವು ಬಿಡುಗಡೆ ಮಾಡುವ ಹೊತ್ತಿಗೆ ಎಷ್ಟು ಚಿತ್ರಮಂದಿರಗಳು ಸಿಗುತ್ತದೆ ಗೊತ್ತಿಲ್ಲ. ಚೆನ್ನಾಗಿ ಶೇರ್ ಸಿಕ್ಕರೆ, ಚಿತ್ರಮಂದಿರ ತೆಗೆಯುವುದು ಸರಿಯಲ್ಲ. ಹಾಗಾಗಿ ಮುಂದೆ ಹೋಗುತ್ತಿದ್ದೇವೆ. ಮುಂದೆ ಹೋಗುತ್ತಿರುವುದಕ್ಕೆ ಬೇಸರವಿಲ್ಲ. ಖುಷಿಯದೆ. ಏಕೆಂದರೆ, ಜನ ಈಗ ಚಿತ್ರಮಂದಿರದತ್ತ ಬರುತ್ತಿದ್ದಾರೆ. ಸೆಪ್ಟೆಂಬರ್ 12ರಂದು ಬಿಡುಗಡೆ ಮಾಡುತ್ತಿದ್ದೇವೆ. ನಮ್ಮದು ದೊಡ್ಡ ಬಜೆಟ್‍ನ ಸಿನಿಮಾ. ಹಾಗಾಗಿ ಸ್ವಲ್ಪ ತಡೆದು ದೊಡ್ಡಮಟ್ಟದಲ್ಲೇ ರಿಲೀಸ್ ಮಾಡಬೇಕು. ಹಾಗಾಗಿ ಬಿಡುಗಡೆ ದಿನಾಂಕ ಮುಂದೆ ಹೋಗಿದೆ ಎಂದರು.

ಈ ಚಿತ್ರ ನಿರೀಕ್ಷೆಗಳನ್ನು ಹುಸಿಗೊಳಿಸುವುದಿಲ್ಲ. ನಿಮ್ಮ ನಿರೀಕ್ಷೆಗೆ ತಕ್ಕ ಹಾಗೆ ಚಿತ್ರ ಇದೆ. ಚಿತ್ರ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ ಅಷ್ಟೇ. ಇಷ್ಟು ದಿನಗಳಿಂದ ನೀವು ನನ್ನ ಮೇಲಿಟ್ಟಿರುವ ಪ್ರೀತಿಗೆ ಚಿರಋಣಿ, ಆ ಪ್ರೀತಿ ಈ ಚಿತ್ರದಿಂದ ಇನ್ನಷ್ಟು ಜಾಸ್ತಿಯಾಗುತ್ತದೆ. ಈ ಚಿತ್ರಕ್ಕಾಗಿ ಸಾಕಷ್ಟು ಶ್ರಮ ಪಟ್ಟಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ. ಎಂಟು ವರ್ಷಗಳ ಅಂತರದಲ್ಲಿ ಕಥೆ ನಡೆಯುತ್ತದೆ. ಎರಡು ಗೆಟಪ್‍ಗಳಲ್ಲಿ ಕಾಣಿಸಿಕೊಂಡಿದ್ದೇನೆ ಎನ್ನುವ ನಾಯಕ ಕಿರಣ್ ರಾಜ್, ಈ ಚಿತ್ರ ನನ್ನ ಪಾಲಿಗೆ ಬಹಳ ಮಹತ್ವದ್ದು . ಈ ಗೆಲುವು ನನಗೆ ಬಹಳ ಮುಖ್ಯ. ಏನೇ ಕನಸು ಮತ್ತು ಗುರಿ ಇದ್ದರೂ, ಒಂದು ಶಕ್ತಿ ಬಹಳ ಮುಖ್ಯವಾಗುತ್ತದೆ. ಆ ಶಕ್ತಿ ಬರಬೇಕು ಎಂದರೆ ನಮ್ಮ ಮೇಲೆ ನಂಬಿಕೆ ಇರಬೇಕು. ಆ ನಂಬಿಕೆ ಬರಬೇಕು ಎಂದರೆ ಈ ಚಿತ್ರ ಗೆಲ್ಲಲೇಬೇಕು. ಇಲ್ಲವಾದರೆ, ನಾನು ಪುನಃ ಮೊದಲಿನಿಂದಲೂ ಶುರು ಮಾಡಬೇಕು ಎಂದರು.

ಈ ಚಿತ್ರಕ್ಕೆ ನಿರ್ದೇಶಕ ಗುರು ತೇಜ್ ಶೆಟ್ಟಿ ಸುಮ್ಮನೆ ಸ್ಕ್ರೀನ್ ಪ್ಲೇ ಮಾಡಿಲ್ಲ. ಒಂದಿಷ್ಟು‌ ಊರುಗಳಲ್ಲಿ ಸರ್ವೆ ಮಾಡಿ ಅಲ್ಲಿನ ಜನ ನನ್ನನ್ನು ಯಾವರೀತಿ ಪಾತ್ರದಲ್ಲಿ ನೋಡಿದರೆ ಇಷ್ಟ ಪಡುತ್ತಾರೆ ಎಂದು ತಿಳಿದುಕೊಂಡು ಸರ್ವೆ ಮಾಡಿದ್ದಾರೆ ಎಂದು ಸಹ ಕಿರಣ್ ರಾಜ್ ತಿಳಿಸಿದರು.

‘ರಾನಿ’ ಚಿತ್ರದಲ್ಲಿ ಕಿರಣ್ ರಾಜ್ ಜೊತೆಗೆ ಸಮೀಕ್ಷಾ, ಅಪೂರ್ವ, ರಾಧ್ಯ, ರವಿಶಂಕರ್, ಮೈಕೋ ನಾಗರಾಜ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ರಾಘವೇಂದ್ರ ಬಿ ಕೋಲಾರ ಈ ಚಿತ್ರದ ಮೂಲಕ ಛಾಯಾಗ್ರಾಹಕರಾಗಿದ್ದಾರೆ. ಈ ಚಿತ್ರವನ್ನು ಸ್ಟಾರ್ ಕ್ರಿಯೇಷನ್ಸ್ ಲಾಂಛನದಲ್ಲಿ ಚಂದ್ರಕಾಂತ್ ಪೂಜಾರಿ ಮತ್ತು ಉಮೇಶ್ ಹೆಗಡೆ ನಿರ್ಮಿಸಿದ್ದಾರೆ.

Tags: bhale bullodu movie songsbhale rani kannada moviebhale rani kannada movie songskannada full movieKannada moviekannada movie reviewkannada movie songskannada movie video songskannada movieskannada movies fullkannada new movieskiran raj moviekiran raj ronny moviemalashree moviesMovienew kannada moviesNew movieRonny Kannada Movieronny movieronny movie directorronny movie kannadashurthi kannada movie
Previous Post

ರೈತರ ಕುಂದು ಕೊರತೆ ಪರಿಹರಿಸಲು ಸಮಿತಿ ರಚನೆ ಮಾಡುವದಾಗಿ ಹೇಳಿದ ಸುಪ್ರೀಂ ಕೋರ್ಟ್‌

Next Post

ಬೆಂಗಳೂರು: ರಾತ್ರಿ 10ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೂ ಮಹಿಳೆಯರನ್ನ ಡ್ರಾಪ್ ಮಾಡಲು ಹೆಲ್ಪ್ ಲೈನ್ – ಇದೆಲ್ಲ ಸುಳ್ಳು ಮಾಹಿತಿ

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post

ಬೆಂಗಳೂರು: ರಾತ್ರಿ 10ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೂ ಮಹಿಳೆಯರನ್ನ ಡ್ರಾಪ್ ಮಾಡಲು ಹೆಲ್ಪ್ ಲೈನ್ - ಇದೆಲ್ಲ ಸುಳ್ಳು ಮಾಹಿತಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada