ಮೈಸೂರು: ಬಿಗ್ ಬಾಸ್’ ಖ್ಯಾತಿಯ ರಾಖಿ ಸಾವಂತ್ ಪತಿ ಆದಿಲ್ ಖಾನ್ ದುರಾನಿ ಮೇಲೆ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಮಾಡಿದ್ದು, ಇಲ್ಲಿನ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆದಿಲ್ ಖಾನ್ ದುರಾನಿ ವಿರುದ್ಧ ಆತನ ಪತ್ನಿ ವಂಚನೆ ಮಾಡಿರುವ ಆರೋಪದಡಿ ದೂರು ದಾಖಲಿಸಿರುವ ಹಿನ್ನಲೆಯಲ್ಲಿ ಆದಿಲ್ ಖಾನ್ ನ್ಯಾಯಾಂಗ ಬಂಧನದಲ್ಲಿದ್ದಾನೆ.

ಈ ಬೆನ್ನಲ್ಲೆ ಆದಿಲ್ ಖಾನ್ ದುರಾನಿ ವಿರುದ್ಧ ಸೆಕ್ಷನ್ 376 ಕಾಯ್ದೆಯಡಿ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.