
ಶಾಸಕ ಮುನಿರತ್ನಗೆ ಮತ್ತೆ ಜೈಲು ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದ ಆರ್.ಆರ್ ನಗರದ BJP ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿದ್ದು ಗೊತ್ತೇ ಇದೆ.ಇದೀಗ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಮುನಿರತ್ನ ಸೇರಿ 7 ಮಂದಿ ವಿರುದ್ಧ ಕಗ್ಗಲಿಪುರ ಠಾಣೆಯಲ್ಲಿ ರೇಪ್ ಕೇಸ್ ದಾಖಲಾಗಿತ್ತು. 40 ವರ್ಷದ ಮಹಿಳೆಯೊಬ್ಬರು ಈ ದೂರು ನೀಡಿದ್ದರು.